ಆಯುರ್ವೇದ ಜೀವನದ ಪದ್ದತಿಯಾದಾಗ ಬದುಕು ಸುಂದರ: ಎಂ.ಎ. ಗಫೂರ್

ಉಡುಪಿ: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ ಶೈಲಿ, ನಮ್ಮ ಬದುಕಿನ ಅವಿಭಾಜ್ಯ ಅಂಗ. ಆಯುರ್ವೇದ, ಯುನಾನಿ, ಹೋಮಿಯೋಪತಿ, ಯೋಗ ಮುಂತಾದ ಚಿಕಿತ್ಸಾ ಪದ್ದತಿಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ನಾಳಿನ ಬದುಕು ಬಹಳ ಸುಂದರವಾಗಿರುತ್ತದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆ ಉಡುಪಿ ಜಿಲ್ಲೆ ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿಯಲ್ಲಿ ಬ್ರಹ್ಮಗಿರಿಯ ಬಾಲಭವನದಲ್ಲಿ ನಡೆದ ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ ಘೋಷ ವಾಕ್ಯದೊಂದಿಗೆ […]
ಜನಸಾಮಾನ್ಯರ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಎಲ್ಲಾ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ರಸ್ತೆ ಅಭಿವೃದ್ಧಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಅಪಘಾತ ಪ್ರಕರಣಗಳು ಆಗದಂತೆ ಕ್ರಮವಹಿಸಬೇಕೆಂದು ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕ ವಾಹನಗಳು ಸಂಚರಿಸುವಾಗ ಪ್ರಾಧಿಕಾರದ ವತಿಯಿಂದ ನಗರ ಹಾಗೂ ನಗರದ ಹೊರ […]
ಯುವತಿ ನಾಪತ್ತೆ

ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್ 5 ರಂದು ಮನೆಯಿಂದ ನಾಪತ್ತೆಯಾಗಿದ್ದು ಈವರೆಗೂ ಮನಗೆ ವಾಪಸ್ಸು ಬಂದಿರುವುದಿಲ್ಲ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ: 0820-2526444, ಪಿಐ:9480805458, ಪಿಎಸ್‌ಐ:8277988949, 8277988950, ಮಹಿಳಾ ಪೊಲೀಸ್ ಠಾಣೆ: 0820-2525599 ಅನ್ನು ಸಂಪರ್ಕಿಸುವoತೆ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ […]
ಬ್ಯಾಂಕ್ ಮುಷ್ಕರ ಹಿನ್ನೆಲೆ, ಸೆ.27 ಭಾನುವಾರವೂ ಓಪನ್ ಇರಲಿದೆ ಬ್ಯಾಂಕ್!

ನವದೆಹಲಿ: ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರವೂ ಬ್ಯಾಂಕ್‌ಗಳು ಕಾರ್ಯನಿರ್ವಹಿಸಲಿವೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆ.28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಇದಕ್ಕೂ ಮುನ್ನ ಸೆ.26 ಮತ್ತು 27ರಂದು ವಾರಾಂತ್ಯದ ರಜೆ ಇರುವುದರಿಂದ ಗ್ರಾಹಕರ ಬ್ಯಾಂಕಿಂಗ್ ಅಗತ್ಯತೆಗಳಿಗೆ ತೊಂದರೆಯಾಗದಂತೆ ಸೆ.27ರಂದು ಬ್ಯಾಂಕ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ಸತತವಾಗಿ […]
ಪೌರ ಕಾರ್ಮಿಕರ ದಿನಾಚರಣೆ: ಉಡುಪಿಯಲ್ಲಿ ಅದ್ಧೂರಿ ಮೆರವಣಿಗೆ

ಉಡುಪಿ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಅಜ್ಜರಕಾಡು ಪುರಭವನದವರೆಗೆ ನಡೆದ ಮೆರವಣಿಗೆಯಲ್ಲಿ ಪೌರ ಕಾರ್ಮಿಕರು ಹಾಗೂ ನಗರಸಭೆಯ ಅಧಿಕಾರಿಗಳು ಪಾಲ್ಗೊಂಡರು. ಡಿಜೆ ಹಾಡು ಹಾಗೂ ಸಾಂಪ್ರದಾಯಿಕ ಡೋಲು ವಾದ್ಯದ ಸದ್ದಿಗೆ ಪೌರ ಕಾರ್ಮಿಕರು ಹೆಜ್ಜೆ ಹಾಕಿ, ಹಾಡು–ಕುಣಿತದೊಂದಿಗೆ ಸಂಭ್ರಮಿಸಿದರು. ಪೌರ ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ಕಂಡುಬಂತು.