ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಮೂರು ತಿಂಗಳ ಹಿಂದೆ ನಡೆದಿರಬಹುದು ಎನ್ನಲಾದ ಈ ಪ್ರಕರಣದಲ್ಲಿ ಪ್ರಕಾಶ್ ಕುಂದರ್ (ಹೆಸರು ಕುಟುಂಬದ ಮಾಹಿತಿ ಆಧಾರಿತ) ಅವರ ಶವವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ಎರಡು ಚೀಲಗಳಲ್ಲಿ ಇರಿಸಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಬಂಧಿಕರ ಡಿಎನ್‌ಎ ಪರೀಕ್ಷೆಯ ಮೂಲಕ ಪತ್ತೆಯಾದ ಶವ ಪ್ರಕಾಶ್ ಅವರದ್ದೇ ಎಂಬುದು ದೃಢಪಟ್ಟಿದ್ದು, ಮೃತದೇಹವನ್ನು ಭಾರತಕ್ಕೆ ತರಲು […]

ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಲ್ತೋಡು ಬೀಟ್ ಅಧಿಕಾರಿಯಿಂದ ದೊರೆತ ಮಾಹಿತಿಯ ಮೇರೆಗೆ ಬೈಂದೂರು ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು, ಸೆ.23ರಂದು ಮಧ್ಯಾಹ್ನ 1.15ಕ್ಕೆ ದಾಳಿ ನಡೆಸಿದರು. ಈ ವೇಳೆ ಕೆಂಪುಕಲ್ಲು ತುಂಬಿದ್ದ ಎರಡು ಟಿಪ್ಪರ್‌ಗಳು, ಬ್ಲೇಡ್ […]

ಭಕ್ತರ ಸಹಕಾರದಿಂದ ಗಣೇಶೋತ್ಸವ ಯಶಸ್ವಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಮಿತಿಯ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, 10 ದಿನಗಳ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಭಕ್ತರ ಸಹಕಾರವೇ ಪ್ರಮುಖ ಕಾರಣವಾಗಿದೆ. ಉತ್ಸವದ ಅಂಗವಾಗಿ ಸುಮಾರು ಒಂದು ಸಾವಿರ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗಿದ್ದು, ತಾಳಮದ್ದಲೆ, ಭಜನೆ, ಯಕ್ಷಗಾನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು. […]

ರಾಷ್ಟ್ರಗೀತೆಯಂತೆ ‘ವಂದೇ ಮಾತರಂ’ ಹಾಡುವುದು ಕಡ್ಡಾಯವಲ್ಲ,ಹಾಡುವುದು ಬಿಡುವುದು ನಮ್ಮ ಆಯ್ಕೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಉತ್ತರ

ಬೆಂಗಳೂರು: ರಾಷ್ಟ್ರಗೀತೆಯಾದ ‘ಜನ ಗಣ ಮನ’ದಂತೆ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಲಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸೆ.8ರಂದು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ರಾಷ್ಟ್ರಗೀತೆಗೆ ಅನ್ವಯಿಸುವ ಕಡ್ಡಾಯ ನಿಯಮಗಳು ರಾಷ್ಟ್ರೀಯ ಗೀತೆಗೆ ಅನ್ವಯಿಸುವುದಿಲ್ಲ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಮಾಡಬೇಕೆಂಬ ನಿಯಮಕ್ಕೆ ಸಂಬಂಧಿಸಿದ ಪ್ರಕರಣ ಸುಪ್ರೀಂ […]

ಡೇಟಾ ಬೇಡ, ಕಾಲ್-ಎಸ್‌ಎಂಎಸ್‌ ಮಾತ್ರ ಸಾಕು ಎನ್ನುವವರಿಗೆ ಒಳ್ಳೆ ಸುದ್ದಿ: ಹೊಸ ರೀಚಾರ್ಜ್ ಪ್ಲಾನ್ ಕಡ್ಡಾಯಗೊಳಿಸಿದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ!

ನವದೆಹಲಿ: ಮೊಬೈಲ್ ಡೇಟಾ ಬಳಸದ, ಕೇವಲ ಕರೆ ಮತ್ತು ಎಸ್‌ಎಂಎಸ್ ಸೇವೆ ಬಳಸುವ ಗ್ರಾಹಕರಿಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಮಹತ್ವದ ಪರಿಹಾರ ನೀಡಿದೆ. ಟೆಲಿಕಾಂ ಕಂಪನಿಗಳು ಇನ್ನು ಮುಂದೆ ಕೇವಲ ವಾಯ್ಸ್ ಮತ್ತು ಎಸ್‌ಎಂಎಸ್ ಸೇವೆ ಒಳಗೊಂಡ ಪ್ರತ್ಯೇಕ ರೀಚಾರ್ಜ್ ಪ್ಲಾನ್‌ಗಳನ್ನು ನೀಡುವುದು ಕಡ್ಡಾಯವಾಗಿದೆ. TRAI ಈ ಸಂಬಂಧ ‘ಟೆಲಿಕಾಂ ಗ್ರಾಹಕ ಸಂರಕ್ಷಣಾ (13ನೇ ತಿದ್ದುಪಡಿ) ನಿಯಮಾವಳಿ, 2026’ ಅನ್ನು ಸೆಪ್ಟೆಂಬರ್ 22ರಂದು ಪ್ರಕಟಿಸಿದೆ. ಡೇಟಾ ಇಲ್ಲದ ಪ್ಲಾನ್‌ಗಳೇನು? ಡೇಟಾ ಅಗತ್ಯವಿಲ್ಲದ ಗ್ರಾಹಕರಿಗಾಗಿ Voice […]