ಏಷ್ಯನ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನುಗೆ ಐತಿಹಾಸಿಕ ಬೆಳ್ಳಿ; 28 ವರ್ಷಗಳ ಬಳಿಕ ಭಾರತಕ್ಕೆ ವೇಟ್‌ಲಿಫ್ಟಿಂಗ್ ಪದಕ

ಟೋಕಿಯೊ: ಭಾರತದ ತಾರೆ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಕೊನೆಗೂ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದಾರೆ. 2026ರ ಐಚಿ-ನಾಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಇದು ಏಷ್ಯನ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಅವರ ಚೊಚ್ಚಲ ಪದಕವಾಗಿದೆ. ಮೀರಾಬಾಯಿ ಒಟ್ಟು 198 ಕೆ.ಜಿ. ಭಾರ ಎತ್ತಿದರು. ಸ್ನ್ಯಾಚ್‌ನಲ್ಲಿ 87 ಕೆ.ಜಿ. ಹಾಗೂ ಕ್ಲೀನ್ ಆ್ಯಂಡ್ ಜೆರ್ಕ್‌ನಲ್ಲಿ 111 ಕೆ.ಜಿ. ಭಾರ ಎತ್ತುವ ಮೂಲಕ ಎರಡನೇ ಸ್ಥಾನ ಪಡೆದರು. ಉತ್ತರ […]
ಕುಂದಾಪುರ: ಕೋಟೇಶ್ವರ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ: ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ವಿವರ: ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಅವರು ತೆರಳಿದ್ದು ರಾತ್ರಿಯಾದರೂ ಮನೆಗೆ […]
ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ – ಟ್ರಂಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ!

ವಾಷಿಂಗ್ಟನ್: ಫ್ಲೋರಿಡಾದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ (G20 Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಡಿಸೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಜಿ-20 ಶೃಂಗಸಭೆಯು ಡಿಸೆಂಬರ್ 14 ಮತ್ತು 15 ರಂದು ಫ್ಲೋರಿಡಾದಲ್ಲಿ ನಡೆಯಲಿದೆ. ಜಿ-20 ಸಭೆಯ ಅಂಗವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳನ್ನ ಒಳಗೊಂಡ ಕ್ವಾಡ್ ನಾಯಕರ ಶೃಂಗಸಭೆಯನ್ನು ನಡೆಸುವ ಕುರಿತೂ ಸಿದ್ಧತೆಗಳು ನಡೆಯುತ್ತಿವೆ. ಈ ಭೇಟಿ ವೇಳೆ ʻಕ್ವಾಡ್ʼ (Quad) ನಾಯಕರ ಸಭೆಯಲ್ಲಿ […]
ರಾಜ್ಯದಲ್ಲಿ ಒಟ್ಟು 177 ತಾಲೂಕುಗಳು ಬರಪೀಡಿತ: ಮೂರನೇ ಹಂತದಲ್ಲಿ 53 ತಾಲೂಕು, ಉಡುಪಿಯ ಬ್ರಹ್ಮಾವರ ಕೂಡ ಬರಪೀಡಿತ!

ಬೆಂಗಳೂರು: ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮೂರನೇ ಹಂತದಲ್ಲಿ ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ಮೂರನೇ ಹಂತದಲ್ಲಿ 53 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. ಹೊಸದಾಗಿ ಸೇರ್ಪಡೆಯಾದ 53 ತಾಲೂಕುಗಳ ಪೈಕಿ 51 ತಾಲೂಕುಗಳು ತೀವ್ರ […]
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ _30 ವಿದ್ಯಾರ್ಥಿಗಳಿಗೆ ತಲಾ ₹3,000 ವಿದ್ಯಾರ್ಥಿವೇತನ ಹಾಗೂ ಮಾಹೆ ಶೈಕ್ಷಣಿಕ ಕಿಟ್ ವಿತರಣೆ

ಸಾಣೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ 4ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಸಾಣೂರು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಸಭಾಭವನದಲ್ಲಿ ಸೆಪ್ಟೆಂಬರ್ 22 ಮಂಗಳವಾರ ಮಧ್ಯಾಹ್ನ ನಡೆಯಿತು. ಸಾಣೂರು ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ 10 ಮಂದಿ, ಸಾಣೂರು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿಯ 10 ಮಂದಿ ಹಾಗೂ ದ್ವಿತೀಯ ಪಿಯುಸಿಯ 10 ಮಂದಿ, […]