ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕ್ರೈಸ್ಟ್ ಕಿಂಗ್’ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಡಾ.ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಝುಬೇದ ಝಾಹಿದ್ ಹುಸೇನ್, ಪ್ರಥಮ ವಿಜ್ಞಾನ ವಿಭಾಗದ ರಾಫಿಯಾ ಬಾನು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ, ಬಾಲಕರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಸ್ವಸ್ತಿಕ್ […]

ಉಡುಪಿಯಲ್ಲಿ ರಸ್ತೆ ಅಪಘಾತ: ನೇಪಾಳ ಮೂಲದ ಕಟ್ಟಡ ಕಾರ್ಮಿಕ ಮೃತ್ಯು

ಉಡುಪಿ, ಸೆ.23: ಉಡುಪಿಯ ಅಂಬಾಗಿಲು ಎಲ್‌ವಿಟಿ ಸಮೀಪ ಸೆಪ್ಟೆಂಬರ್ 19ರಂದು ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳ ಮೂಲದ ಕಟ್ಟಡ ಕಾರ್ಮಿಕ ಅಶೋಕ್ ರಾಮ್ (40) ಅವರು ಚಿಕಿತ್ಸೆ ಫಲಕಾರಿಯಾಗದೆ ಸೆಪ್ಟೆಂಬರ್ 21ರಂದು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 19ರಂದು ರಾತ್ರಿ ಸುಮಾರು 9.30ರ ವೇಳೆಗೆ ಅಂಬಾಗಿಲು ಎಲ್‌ವಿಟಿ ಸಮೀಪ ಅಶೋಕ್ ರಾಮ್ ಅವರು ನಡೆದುಕೊಂಡು ಹೋಗುತ್ತಿದ್ದ ವೇಳೆ, ಉಡುಪಿ ಕಡೆಯಿಂದ ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಅಶೋಕ್ ರಾಮ್ ಅವರು […]

ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಥ್ರೋ ಬಾಲ್ ಕಣದಲ್ಲಿ ಛಾಪು ಮೂಡಿಸಿ ರನ್ನರ್ ಅಪ್ ಗೌರವಕ್ಕೆ ಪಾತ್ರವಾಗಿದೆ. ವಿದ್ಯಾರ್ಥಿಗಳಾದ ಪ್ರೀತಿ, ಸಾಕ್ಷಿ, ಶಿವಮಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ತರಬೇತಿ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್ ಅಮೀನ್ (32) ಎಂಬ ವ್ಯಕ್ತಿಯು ಸೆಪ್ಟಂಬರ್ 2 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಲಿಯುತ್ತಿದ್ದ ನಗರದ ಎಂ.ಜಿ.ಎಂ ಬಳಿ ವಾಸವಿದ್ದ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿಯು ಸೆಪ್ಟಂಬರ್ 12 ರಂದು ಬೆಳಗ್ಗೆ 11.30 ರ ಸುಮಾರಿಗೆ ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ […]