ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ 15 ದಿನದ ಹಸುಗೂಸಿನಲ್ಲಿದ್ದ ಬೃಹತ್ ಮೆದುಳಿನ ಗೆಡ್ಡೆ ಹೊರತೆಗೆದು ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಮಣಿಪಾಲ, ಸೆ.24: ಕೇವಲ 15 ದಿನಗಳ ಪ್ರಾಯದಲ್ಲಿದ್ದಾಗ ಮೆದುಳಿನ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾದ ಮಗುವೊಂದು ಇಂದು ಆರೋಗ್ಯವಂತ ಹಾಗೂ ಉತ್ಸಾಹಭರಿತ ಮೂರು ವರ್ಷದ ಬಾಲಕನಾಗಿ ಬೆಳೆದಿದ್ದು, ಶಾಲಾ ಪೂರ್ವ ಶಿಕ್ಷಣವನ್ನು (ಪ್ರಿಸ್ಕೂಲ್) ಪ್ರಾರಂಭಿಸಲು ಸಿದ್ಧನಾಗಿದ್ದಾನೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಆರಂಭಿಕ ಹಂತದ ಚಿಕಿತ್ಸೆ, ವಿಶೇಷ ಶಸ್ತ್ರಚಿಕಿತ್ಸಾ ಪರಿಣತಿ ಮತ್ತು ವಿವಿಧ ವಿಭಾಗಗಳ ಸಮನ್ವಯದೊಂದಿಗೆ ನೀಡಲಾದ ಆರೈಕೆಯ ಫಲವಾಗಿ ಇದು ಸಾಧ್ಯವಾಗಿದೆ. ತಲೆಯ ಗಾತ್ರವು ಗಮನಾರ್ಹವಾಗಿ ದೊಡ್ಡದಾಗಿದ್ದ ಸ್ಥಿತಿಯಲ್ಲಿ 15 ದಿನಗಳ ಪ್ರಾಯದ ಶಿಶುವನ್ನು ಆಸ್ಪತ್ರೆಗೆ ಕರೆತರಲಾಯಿತು. ಇದು […]

ಸೌಜನ್ಯ ಪ್ರಕರಣ ಮರುತನಿಖೆಗೆ ಶಶಿಕುಮಾರ್ ಐಪಿಎಸ್ ನೇತೃತ್ವದ SIT ರಚನೆ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್‌ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್ ಅವರನ್ನು ಎಸ್.ಐ.ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್. ರಾಜ್ಯ ಗುಪ್ತವಾರ್ತೆಯ ಪೊಲೀಸ್‌ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್‌ ಅಧೀಕ್ಷಕರಾದ ಲೋಕೇಶ್ ಜಲಸಾಗ‌ರ್ ಐ.ಪಿ.ಎಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ […]

ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ […]

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸೆಪ್ಟಂಬರ್ 25 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ. 24 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಸೆ. 25 ರಂದು ಬೆಳಗ್ಗೆ 10 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಹಾಗೂ ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ ಮತ್ತು ಗುರಿಕಾರರಿಗೆ ಗೌರವಧನ […]

ಆಟೋಇಮ್ಯೂನ್ ಕಾಯಿಲೆ: ಆಯುರ್ವೇದದ ಜಾಗತಿಕ ಸಂವಾದಕ್ಕೆ ಉಡುಪಿ ವೇದಿಕೆ

ಉಡುಪಿ: ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಧ್ಯತೆಗಳು ಹಾಗೂ ಆಧುನಿಕ ರೋಗನಿರೋಧಕ ವಿಜ್ಞಾನದೊಂದಿಗೆ ಅದರ ಸಮನ್ವಯ ಕುರಿತು ಜಾಗತಿಕ ಮಟ್ಟದ ಚರ್ಚೆಗೆ ಉಡುಪಿ ವೇದಿಕೆಯಾಗಲಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ‘ಕ್ಷಮತ್ವಂ–2026’ ಆರನೇ ಅಂತರರಾಷ್ಟ್ರೀಯ ಸಮ್ಮೇಳನ ಸೆ.30 ಮತ್ತು ಅ.1ರಂದು ಉಡುಪಿಯ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಲಿದೆ. ಸೆ.29ರಂದು ಪೂರ್ವಭಾವಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. […]