ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸೆ.28ಕ್ಕೆ ಪ್ರದೂಷ್ ಮಾಫಿ ಸಾಕ್ಷಿ ದಾಖಲು, ದರ್ಶನ್ ಗೆ ಕಾದಿದೆ ಕಂಟಕ!?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ (Pardon Witness) ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿಯಾಗಿದೆ. ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ, ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸಲು 59ನೇ ಸೆಷನ್ಸ್ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ದರ್ಶನ್ ಪರ ವಕೀಲರು […]
ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅಕ್ಟೋಬರ್‌ನಲ್ಲೇ ಪಿಂಕ್ ಲೈನ್‌ನ ಮೊದಲ ಹಂತ ಸಂಚಾರ!

ಬೆಂಗಳೂರು: ನಮ್ಮ ಮೆಟ್ರೋದ ಬಹುನಿರೀಕ್ಷಿತ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ ಮಧ್ಯಭಾಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಹೊಸ ಮೆಟ್ರೋ ರೈಲುಗಳ ಕಾರ್ಯಾಚರಣೆಗೆ ರೈಲ್ವೆ ಮಂಡಳಿಯಿಂದ ತಾತ್ಕಾಲಿಕ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಅಂತಿಮ ಸುರಕ್ಷತಾ ತಪಾಸಣೆ ಪೂರ್ಣಗೊಂಡ ಬಳಿಕ ಸಂಚಾರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಮೊದಲ ಹಂತದಲ್ಲಿ 7.5 ಕಿ.ಮೀ. ಮಾರ್ಗ ಪಿಂಕ್ ಲೈನ್‌ನ ಮೊದಲ ಹಂತದಲ್ಲಿ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆ (ಸ್ವಾಗತ್ ಕ್ರಾಸ್)ವರೆಗೆ 7.5 […]
ಶಾರ್ಜಾ ಹತ್ಯೆ: ಪ್ರಕಾಶ್ ಕುಂದರ್ ಮೃತದೇಹ ಭಾರತಕ್ಕೆ ತರಲು ಕ್ರಮ

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಹಾಗೂ ಶಾರ್ಜಾದ ರಾಯಭಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಘಟನೆ ಗಮನಕ್ಕೆ ಬಂದ ತಕ್ಷಣ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದು, ಶಾರ್ಜಾದ ರಾಯಭಾರಿ ಕಚೇರಿಯನ್ನೂ ಸಂಪರ್ಕಿಸಲಾಗಿದೆ. ವಿದೇಶಾಂಗ ಇಲಾಖೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು […]
ಮಾದಕ ವಸ್ತು ಜಾಲದ ಮೇಲೆ ಪೊಲೀಸ್ ದಾಳಿ: 10 ಮಂದಿ ಬಂಧನ

ಉಡುಪಿ: ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 10 ಮಂದಿಯನ್ನು ಬಂಧಿಸಿದ್ದು, ಗಾಂಜಾ, ಮೆಥಾಪಿಟಾಮೈನ್, ವಾಹನಗಳು, ಮೊಬೈಲ್‌ಗಳು ಹಾಗೂ ನಗದು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.22ರಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಪಡುಬೆಳ್ಳೆ ಭದ್ರಮ್ಮ ರಸ್ತೆ ಬಳಿ ಎರಡು ಕಾರು ಹಾಗೂ ಸ್ಕೂಟರ್‌ನಲ್ಲಿ ಮಾದಕ ವಸ್ತುಗಳನ್ನು ಹೊಂದಿರುವುದಾಗಿ ದೊರೆತ ಮಾಹಿತಿಯ ಆಧಾರದಲ್ಲಿ ಶಿರ್ವ ಪೊಲೀಸರು ದಾಳಿ […]
ಭಾರತದ ಶ್ರೀಮಂತ ನಟರ ಲಿಸ್ಟ್ ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಟಾಪ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಮತ್ತೊಮ್ಮೆ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರ ಪ್ರಕಾರ ಶಾರುಖ್ ಖಾನ್ ಅವರ ಒಟ್ಟು ಆಸ್ತಿ ಮೌಲ್ಯ 10,000 ಕೋಟಿಯಷ್ಟಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ 4,000 ಕೋಟಿ ರೂ. ಆಸ್ತಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನಟ ಸಲ್ಮಾನ್ ಖಾನ್ ಇದೇ ಮೊದಲ ಬಾರಿಗೆ ಹುರುನ್ ಶ್ರೀಮಂತರ ಪಟ್ಟಿಗೆ ಸೇರ್ಪಡೆಯಾಗಿದ್ದು, 3,000 ಕೋಟಿ ರೂ.ಆಸ್ತಿ ಹೊಂದಿದ್ದಾರೆ. ನಟ […]