ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ ಆಳ್ವಾಸ್‌ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಹುಡುಗರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು.ಹುಡುಗರ ವಿಭಾಗದಲ್ಲಿ : 60 […]
ಕುಂದಾಪುರ: ಎಂ. ಕೋಡಿ ಕಡಲತೀರಕ್ಕೆ ಬಂತು ರಾಶಿ ರಾಶಿ ಬೂತಾಯಿ; ಮೀನು ಸಂಗ್ರಹಿಸಲು ಮುಗಿಬಿದ್ದ ಜನ!

ಉಡುಪಿ: ಕುಂದಾಪುರ ತಾಲೂಕಿನ ಎಂ. ಕೋಡಿ ಕಡಲತೀರದಲ್ಲಿ ಶನಿವಾರ ಬೆಳಿಗ್ಗೆ ಭಾರಿ ಪ್ರಮಾಣದಲ್ಲಿ ಬೂತಾಯಿ (ಬೈಗೆ) ಮೀನುಗಳು ದಡಕ್ಕೆ ಬಂದಿದ್ದು, ಮೀನು ಸಂಗ್ರಹಿಸಲು ನೂರಾರು ಮಂದಿ ಕಡಲತೀರದಲ್ಲಿ ಜಮಾಯಿಸಿದರು. ಸಮುದ್ರದ ಅಲೆಗಳೊಂದಿಗೆ ದಡಕ್ಕೆ ಬಂದ ಬೂತಾಯಿ ಮೀನುಗಳನ್ನು ಕಂಡ ಸ್ಥಳೀಯರು ಸೇರಿದಂತೆ ನೂರಾರು ಮಂದಿ ಕೈಚೀಲ, ಬಕೆಟ್ ಸೇರಿದಂತೆ ವಿವಿಧ ಪರಿಕರಗಳನ್ನು ಹಿಡಿದು ಮೀನು ಸಂಗ್ರಹಿಸಲು ಮುಗಿಬಿದ್ದರು. ಕೆಲವೇ ಹೊತ್ತಿನಲ್ಲಿ ಕಡಲತೀರದಲ್ಲಿ ಮೀನು ಸಂಗ್ರಹಿಸುವವರ ಸಂಖ್ಯೆ ಹೆಚ್ಚಾಗಿದ್ದು, ಬೂತಾಯಿ ಮೀನುಗಳ ರಾಶಿ ಕಂಡುಬಂತು. ಮೀನುಗಳು ಹೆಚ್ಚಿನ ಪ್ರಮಾಣದಲ್ಲಿ […]
ಮಂಗಳೂರಿನಲ್ಲಿ ರ‍್ಯಾಗಿಂಗ್: ಇಬ್ಬರು ವಿದ್ಯಾರ್ಥಿಗಳ ಮೇಲೆ ಬೆಲ್ಟ್‌ನಿಂದ ಹಲ್ಲೆ: ಐವರು ಬಂಧನ

ಮಂಗಳೂರು: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ರ‍್ಯಾಗಿಂಗ್ ಹೆಸರಿನಲ್ಲಿ ಇಬ್ಬರು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ದ್ವಿತೀಯ ವರ್ಷದ ಐವರು ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಸೆಪ್ಟೆಂಬರ್ 19ರಂದು ಪಾಂಡೇಶ್ವರದಲ್ಲಿರುವ ತಮ್ಮ ಕಾಲೇಜಿನ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಬೈಕ್‌ಗಳಲ್ಲಿ ಅವರನ್ನು ಹಿಂಬಾಲಿಸಿ ಕರೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ನಿರ್ಜನ ಪ್ರದೇಶವೊಂದಕ್ಕೆ […]
ತುಳು ಸಾಹಿತ್ಯ ಅಕಾಡೆಮಿ: 2025-26ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2025 ಮತ್ತು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಘೋಷಿಸಿದೆ. ತುಳು ಸಾಹಿತ್ಯ, ಸಂಶೋಧನೆ, ಜಾನಪದ ಕಲೆ, ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರಗಳಿಗೆ ನೀಡಿದ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಒಟ್ಟು ಆರು ಮಂದಿ ಹಿರಿಯ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2025ನೇ ಸಾಲಿನ ಸಾಹಿತ್ಯ ಮತ್ತು ಸಂಶೋಧನಾ ವಿಭಾಗಕ್ಕೆ ಪ್ರೊ. ಬಿ. ಶಿವರಾಮ ಶೆಟ್ಟಿ, ಜಾನಪದ ಕಲಾ ವಿಭಾಗಕ್ಕೆ ಕುಡ್ಡು ಕೊರಗ ಪಾಂಗಳ ಹಾಗೂ ರಂಗಭೂಮಿ ಮತ್ತು ಸಿನಿಮಾ ವಿಭಾಗಕ್ಕೆ […]
ಉಡುಪಿ ಜಿಲ್ಲಾ ಚಿನ್ನ–ಬೆಳ್ಳಿ ಕೆಲಸಗಾರರ ಸಂಘದ ‘ರಜತ ಸಂಭ್ರಮದ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ

ಉಡುಪಿ: ಜಾಗತಿಕ ಮಟ್ಟದಲ್ಲಿ ವ್ಯಾಪಾರದ ಚಿತ್ರಣ ಬದಲಾಗಿದ್ದು, ಚಿನ್ನ ಮತ್ತು ಬೆಳ್ಳಿ ವ್ಯವಹಾರಗಳು ಕಾರ್ಪೊರೇಟ್ ಮಾದರಿಯಲ್ಲಿ ನಡೆಯುತ್ತಿವೆ. ಹೀಗಾಗಿ ಚಿನ್ನ–ಬೆಳ್ಳಿ ವೃತ್ತಿಯಲ್ಲಿರುವವರು ಕಾಲಕ್ಕೆ ತಕ್ಕಂತೆ ಬದಲಾಗುವ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಒಳಕಾಡಿನ ದೈವಜ್ಞ ಕಲ್ಯಾಣಮಂಟಪದಲ್ಲಿ ನಡೆದ ಉಡುಪಿ ಜಿಲ್ಲಾ ಚಿನ್ನ–ಬೆಳ್ಳಿ ಕೆಲಸಗಾರರ ಸಂಘದ ‘ರಜತ ಸಂಭ್ರಮ ಬೃಹತ್ ಸಮಾವೇಶ 2026–27’ರ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಸಾಕಷ್ಟು ಮಂದಿ ಕುಲಕಸುಬನ್ನು ಆಧರಿಸಿಕೊಂಡು ಜೀವನ ನಡೆಸುತ್ತಿದ್ದಾರೆ. […]