ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ ಜೊತೆಗೆ ಗ್ರಾಮೀಣ ಬದುಕು ಮತ್ತು ಕೃಷಿ ಸಂಸ್ಕೃತಿಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಲು ಕೃಷಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಚಿಂತನೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ರವಿವಾರ ಕಾಪುವಿನ ಪ್ಯಾಲೇಸ್ ಗಾರ್ಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಪ್ರವಾಸೋದ್ಯಮ ಇಲಾಖೆ ಹಾಗೂ ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂ ಸಹಯೋಗದಲ್ಲಿ ಉಡುಪಿ ಟೂರಿಸಂ ಇನ್ಫು÷್ಲಎನ್ಸರ್ಸ್ & ಸ್ಟೇಕ್ […]

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ:ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊoದಿಗೆ ಯಾವುದೇ ಹಿಂಜರಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಎಲ್ಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಆಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ಸು ಕಾಣಲು ಸಾಧ್ಯ ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ […]

ಅ.17ರಂದು 9ನೇ ವರ್ಷದ ‘ಉಡುಪಿ ದಾಂಡಿಯಾ’

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ–2026’ ಕಾರ್ಯಕ್ರಮ ಅ.17ರಂದು ಸಂಜೆ 6ರಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರ್‌ನ್ನು ಶಾಸಕ ಯಶ್ಪಾಲ್ ಎ. ಸುವರ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಪ. ವಸಂತ್ ಭಟ್, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ವಜ್ರಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್, ಕೋಶಾಧಿಕಾರಿ ಎಂ. ವಲ್ಲಭ ಭಟ್, ವಜ್ರಮಹೋತ್ಸವ ಸಮಿತಿ […]

ಕಡಿಯಾಳಿ ಗಣೇಶೋತ್ಸವದ ವಜ್ರಮಹೋತ್ಸವ ಯಶಸ್ಸು ಜನತೆಗೆ ಸಮರ್ಪಣೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ವತಿಯಿಂದ ನಡೆದ 60ನೇ ವರ್ಷದ ವಜ್ರಮಹೋತ್ಸವದ ಯಶಸ್ಸಿನ ಶ್ರೇಯಸ್ಸು ಉಡುಪಿಯ ಜನತೆಗೆ ಸಲ್ಲುತ್ತದೆ ಎಂದು ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಕಟ್ಟೆ ರವಿರಾಜ ಆಚಾರ್ಯ ಹೇಳಿದರು. ಉಡುಪಿಯ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ 60ನೇ ವರ್ಷದ ಸಮಾಪನ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಜನತೆಯ ಸಹಕಾರ ಹಾಗೂ ಬೆಂಬಲದಿಂದ ವಜ್ರಮಹೋತ್ಸವದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಹೀಗಾಗಿ ಇದರ ಸಂಪೂರ್ಣ ಶ್ರೇಯಸ್ಸನ್ನು ಉಡುಪಿಯ ಜನತೆಗೆ ಸಮರ್ಪಿಸುವುದಾಗಿ ಹೇಳಿದರು. […]

ಅ.1 ರಿಂದ ಮಂಗಳೂರು ರೈಲ್ವೆ, ಮೈಸೂರು ವಿಭಾಗಕ್ಕೆ ಸೇರ್ಪಡೆ: ಅಂತೂ ದಶಕಗಳ ಕನಸು, ನನಸು

ಮಂಗಳೂರು: ಕರಾವಳಿ ಭಾಗದ ದಶಕಗಳ ಬೇಡಿಕೆಗೆ ಇದೀಗ ಮಹತ್ವದ ಬೆಳವಣಿಗೆ ಎದುರಾಗಿದೆ. ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವು ಅಕ್ಟೋಬರ್ 1ರಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯಾಪ್ತಿಗೆ ಬರಲಿದೆ. ರೈಲ್ವೆ ಮಂಡಳಿಯ ಆಗಸ್ಟ್ 21ರ ಅಧಿಸೂಚನೆಯಂತೆ ಈ ಆಡಳಿತಾತ್ಮಕ ಬದಲಾವಣೆ ಜಾರಿಗೆ ಬರಲಿದೆ. ಮಧ್ಯರಾತ್ರಿಯಿಂದ ಆಡಳಿತ ಹಸ್ತಾಂತರ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರ ಮಧ್ಯರಾತ್ರಿಯಿಂದ ಮಂಗಳೂರು ಪ್ರದೇಶದ ರೈಲ್ವೆ ಆಡಳಿತದ ನಿಯಂತ್ರಣ ಮೈಸೂರು ವಿಭಾಗಕ್ಕೆ ವರ್ಗಾವಣೆಯಾಗಲಿದೆ. ಬದಲಾವಣೆಯ ಸಂದರ್ಭದಲ್ಲಿ ರೈಲು […]