ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಸದಸ್ಯರಾಗಿ ಡಾ.ಮಿಥುನ್ ಯು ಆಯ್ಕೆ

ಉಡುಪಿ: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC), ಶೈಕ್ಷಣಿಕ ಕ್ಷೇತ್ರದ ಸದಸ್ಯರಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿರುವ ಡಾ.ಮಿಥುನ್ ಯು ರವರು ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕನಾಗಿ, ವಿಭಾಗದ ಮುಖ್ಯಸ್ಥರಾಗಿ, ಪ್ರಸ್ತುತ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 2018ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ.ವಿಶಾಲಕ್ಷಿ […]

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ): 34ನೇ ವಾರ್ಷಿಕ ಮಹಾಸಭೆ; ಪಧಾಧಿಕಾರಿಗಳ ಆಯ್ಕೆ

ಉಡುಪಿ; ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ), 34 ನೇ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಮಟ್ಟಾರ್ ವಸಂತ ಕಿಣೆ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಜರಗಿತು. ಸಂಘದ ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್ ಸರ್ ಎಮ್ ವಿಶ್ವೇಶ್ವರಯ್ಯ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಗೌರವ ಸಲ್ಲಿಸಿದರು ಸಂಘದ ಮಾಜಿ ಅಧ್ಯಕರುಗಳು ಪುಷ್ಪಾರ್ಚನೆ ಗೈದರು. 2026–27ನೇ ಸಾಲಿನ ಅಧ್ಯಕ್ಷರಾಗಿ ಹಿರಿಯಡ್ಕದ ಆನಂದ್ ಪಾಲಿಮರ್ಸ್ ನ ಮಟ್ಟಾರ್ ವಸಂತ ಕಿಣೆ ರವರು ಅವಿರೋಧವಾಗಿ ಪುನರಾಯ್ಕೆ ಯಾದರು. […]

ಉಡುಪಿ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಕುಂದಾಪುರದ ಬಿ.ಎಸ್‌ಸಿ. ನರ್ಸಿಂಗ್ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳ ವತಿಯಿಂದ ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1:00ರವರೆಗೆ ಕಮಲಾ ಬಾಳಿಗ ಮೆಮೋರಿಯಲ್ ಹಾಲ್, ಎ.ವಿ. ಬಾಳಿಗ ಆಸ್ಪತ್ರೆ, ದೊಡ್ಡಣಗುಡ್ಡೆ ಉಡುಪಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ತಡೆಗಟ್ಟುವಿಕೆಯ ಕುರಿತು ಜಾಗೃತಿ ಮೂಡಿಸುವುದು, ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸುವುದು ಹಾಗೂ ಭಾವನಾತ್ಮಕ ಸಂಕಷ್ಟದಲ್ಲಿರುವವರು ಸಮಯೋಚಿತವಾಗಿ ಸಹಾಯ ಮತ್ತು ಬೆಂಬಲವನ್ನು ಪಡೆಯುವಂತೆ […]

ಎಸ್‌ಐಆರ್ ವಿವಾದ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ, ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಉಡುಪಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ತೀವ್ರ ವಿವಾದಕ್ಕೆ ಕಾರಣರಾದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಕಾರರು ಜ್ಞಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು […]

ಕಂಬಳ ಅಂಗಳದ ಲೆಜೆಂಡ್ ನಂದಳಿಕೆ ಪಾಂಡು ಇನ್ನಿಲ್ಲ

ಉಡುಪಿ: ಕಂಬಳ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ‘ನಂದಳಿಕೆ ಪಾಂಡು’ (23) ಹೆಸರಿನ ಕೋಣ ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ. ಹಗ್ಗ ವಿಭಾಗದಲ್ಲಿ ವೇಗದ ಓಟಕ್ಕೆ ಹೆಸರಾಗಿದ್ದ ಪಾಂಡು ಕಂಬಳದ ಅಂಗಳದಲ್ಲಿ ಹಲವು ಸಾಧನೆಗಳನ್ನು ಮಾಡಿತ್ತು. ಜೂನಿಯರ್ ಹಗ್ಗ ವಿಭಾಗದಲ್ಲಿ ಸತತ ಎರಡು ವರ್ಷ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಪಾಂಡು, ಬಳಿಕ ಸೀನಿಯರ್ ವಿಭಾಗದಲ್ಲೂ ತನ್ನ ಓಟದ ಮೂಲಕ ಕಂಬಳಾಭಿಮಾನಿಗಳ ಗಮನ ಸೆಳೆದಿತ್ತು. ಕಾರ್ಕಳದ ಜೀವನ್‌ದಾಸ್ ಅಡ್ಯಂತಾಯ ಅವರ […]