ಡಾ. ಬಿ.ಆರ್ ಅಂಬೇಡ್ಕರ್ ಸಮಾಜದಲ್ಲಿ ಸಮಾನತೆಯ ಹಾದಿಯನ್ನು ರೂಪಿಸಿದವರು: ಡಾ. ಗಣನಾಥ ಎಕ್ಕಾರು

ಉಡುಪಿ: ಡಾ.ಬಿ.ಆರ್ ಅಂಬೇಡ್ಕರ್ ಆಗಾಧವಾದ ಜ್ಞಾನ ಭಂಡಾರ. ಅವರ ಬದುಕಿನ ಕುರಿತ ಓದಿ ಆದರ್ಶ ಸಂದೇಶವನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳುವುದರಿಂದ ನಮ್ಮ ವ್ಯಕ್ತಿತ್ವದಲ್ಲಿ ಪರಿಣಾಮಕಾರಿ ಬದಲಾವಣೆ ಹೊಂದಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಯನ್ನು ವಿರೋಧಿಸಿ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯ ಹಾದಿಯನ್ನು ರೂಪಿಸಿದವರು ಡಾ.ಬಿ.ಆರ್ ಅಂಬೇಡ್ಕರ್ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಹೇಳಿದರು. ಅವರು ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣ […]

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು, ಅವರನ್ನು ಗೌರವಯುತವಾಗಿ ನೋಡಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. ಅವರು ಇಂದು ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ(ರಿ), ಹಿರಿಯ ನಾಗರಿಕರ ಸಂಸ್ಥೆ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ(ರಿ), […]

ಬಡ ಮಕ್ಕಳಿಗಾಗಿ ‘ನಡಿಗೆ’; 3 ದಿನ ಪಾದರಕ್ಷೆ ಸಂಗ್ರಹ ಅಭಿಯಾನ

ಉಡುಪಿ: ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’ ಸಾಮಾಜಿಕ ಅಭಿಯಾನವನ್ನು ಅ.23ರಿಂದ 25ರವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ‌ ಅವಿನಾಶ್ ಕಾಮತ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಅವರು ಮಾಹಿತಿ ನೀಡಿದರು. ಸಾರ್ವಜನಿಕರು ತಾವು ಬಳಸಿದ ಉತ್ತಮ ಗುಣಮಟ್ಟದ ಶೂ, ಸ್ಲಿಪರ್, ರಬ್ಬರ್ ಶೂ ಹಾಗೂ ಚಪ್ಪಲಿಗಳನ್ನು ದಾನವಾಗಿ ನೀಡಬಹುದು. ಆದರೆ ಹೀಲ್ಸ್ ಹಾಗೂ 10 ವರ್ಷದೊಳಗಿನ ಮಕ್ಕಳ ಪಾದರಕ್ಷೆಗಳನ್ನು […]

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’

ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಟ್ರಸ್ಟಿ ಗೀತಾಂಜಲಿ ಎಂ. ಸುವರ್ಣ ತಿಳಿಸಿದರು. ಶಂಕರಪುರ ಮಠದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಗ್ಗೆ 7.30ಕ್ಕೆ ಗಣಹೋಮ, 9ಕ್ಕೆ ಪವಮಾನ ಹೋಮ, ಮಧ್ಯಾಹ್ನ 12ಕ್ಕೆ ಆರತಿ, 1ಕ್ಕೆ ಅನ್ನಪ್ರಸಾದ ನಡೆಯಲಿದೆ. ಸಂಜೆ 6ರಿಂದ ರಾಮತಾರಕ […]

ಜಾಗಟೆ, ಗಂಟೆ ಬಾರಿಸಿ ಜಿಲ್ಲಾಸ್ಪತ್ರೆ ಆರಂಭಕ್ಕೆ ಆಗ್ರಹ

ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಸಾರ್ವಜನಿಕರ ಸೇವೆಗೆ ಸಮರ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ಆಸ್ಪತ್ರೆಯ ಮುಂಭಾಗ ಏಳು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ನಿರ್ಮಾಣಗೊಂಡು ವರ್ಷ ಕಳೆದರೂ ಇನ್ನೂ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಆಸ್ಪತ್ರೆಯಲ್ಲಿ ಅಗತ್ಯ ಯಂತ್ರೋಪಕರಣ, ವೈದ್ಯರು, ದಾದಿಯರು ಹಾಗೂ ಇತರ ಸಿಬ್ಬಂದಿಯನ್ನು ತಕ್ಷಣ ನಿಯೋಜಿಸಿ ಸೇವೆ ಆರಂಭಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು. ಈ ವೇಳೆ ಜಾಗಟೆ […]