ಹಬ್ಬದ ಹೊಸ್ತಿಲಲ್ಲೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ 

ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ (Commercial Cylinder Price) ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ. ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಾಗಿದ್ದು, ಹಬ್ಬದ ಸೀಸನ್‌ಗೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.  19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಾಗಿದ್ದು, ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಡಾಬಾಗಳಲ್ಲಿ ನಿರ್ವಹಣಾ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ.  ದೆಹಲಿಯಲ್ಲಿ […]

ನಿಜವಾದ ಹೀರೋ, ಚಾಕು ಇರಿತಕ್ಕೆ ಒಳಗಾದ್ರೂ 180 ಪ್ರಯಾಣಿಕರ ಜೀವ ಉಳಿಸಿದ್ರು: ಭಾರತೀಯ ಪೈಲಟ್‌ಗೆ ನೆತನ್ಯಾಹು ಸೆಲ್ಯೂಟ್‌

ದುಬೈ: ದುಬೈ-ಟೆಲ್ ಅವಿವ್ ವಿಮಾನದ ವ್ಯವಸ್ಥೆಗಳನ್ನು ಹಾಳುಮಾಡಲು ಯತ್ನಿಸಿದರೆನ್ನಲಾದ ಸಹ-ಪೈಲಟ್‌ನನ್ನು ಎದುರಿಸಿ, ವಿಮಾನದಲ್ಲಿದ್ದ ಸುಮಾರು 180 ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್‌ನನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಶ್ಲಾಘಿಸಿದ್ದಾರೆ. ಅಸಾಧಾರಣ ಧೈರ್ಯ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ (Smit Machchhar) ಅವರಿಗೆ ನನ್ನ ಸೆಲ್ಯೂಟ್‌ ಎಂದು ಎಕ್ಸ್‌ ಖಾತೆಯಲ್ಲಿ ಅಭಿನಂದಿಸಿ ನೆತನ್ಯಾಹು ಪೋಸ್ಟ್‌ ಹಂಚಿಕೊಂಡಿದ್ದಾರೆ. ಸಹ-ಪೈಲಟ್‌ನಿಂದ ಚಾಕು ಇರಿತಕ್ಕೆ ಒಳಗಾದರೂ, ಕ್ಯಾಪ್ಟನ್ ಮಚ್ಚರ್ ಅವರು ಪ್ರತಿಹೋರಾಟ ನಡೆಸಿ ಕಾಕ್‌ಪಿಟ್‌ನ ಬಾಗಿಲನ್ನು […]

ಅಕ್ಟೋಬರ್ 11ರಿಂದ 20ರ ವರೆಗೆ KSRTCಯಿಂದ ಪ್ಯಾಕೇಜ್ ಪ್ರವಾಸ

ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಆಯೋಜಿಸಿದ್ದು, ಇದು ಅಕ್ಟೋಬರ್ 11ರಿಂದ 20ರವರೆಗೆ ಕಾರ್ಯಾಚರಿಸಲಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ, ಪ್ರಯಾಣ ದರದ ವಿವರ: ಪ್ಯಾಕೇಜ್ ಪ್ರವಾಸದ ಮಾರ್ಗದ ಬಸ್‌ಗಳು ಬೆಳಗ್ಗೆ 7:30ಕ್ಕೆ ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು ಕೊಡ್ಯಡ್ಕ ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನ- ಶೃಂಗೇರಿ ಶ್ರೀಶಾರದಾಂಬ ದೇವಸ್ಥಾನ, ವಯಾ ಎಸ್.ಕೆ. ಬಾರ್ಡರ್, ಋಷ್ಯಶೃಂಗೇಶ್ವರ ದೇವಸ್ಥಾನ ಕಿಗ್ಗ ಕ್ಷೇತ್ರ- […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ಮಂಗಳೂರು ವಿಭಾಗದ ಅಂತರ್ ಕಾಲೇಜು ಮಹಿಳೆಯರ ಮತ್ತು ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ದಿನಾಂಕ 29 ಸೆಪ್ಟೆಂಬರ್ 2026 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೋದೆ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ರತ್ನಕುಮಾರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆಯ ಮಹತ್ವವನ್ನು ವಿವರಿಸಿದರು. ಆರೋಗ್ಯಕರ ಜೀವನಶೈಲಿಯ ಭಾಗವಾಗಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.ಸoಸ್ಥೆಯ ಪ್ರಾಂಶುಪಾಲರಾದ […]

ಎಸ್‌ಎಂಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್ ಆಚಾರ್ಯ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ

ಬ್ರಹ್ಮಾವರ: ಎಸ್‌ಎಂಎಸ್ ಪದವಿಪೂರ್ವ ಕಾಲೇಜು, ಬ್ರಹ್ಮಾವರದ ವಿದ್ಯಾರ್ಥಿ ಶಮಿತ್ ಆಚಾರ್ಯ ಅವರು ವಾಲಿಬಾಲ್ ಕ್ರೀಡೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಿರಂತರ ಅಭ್ಯಾಸ, ಪರಿಶ್ರಮ ಹಾಗೂ ಕ್ರೀಡಾ ಪ್ರತಿಭೆಯ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಶಮಿತ್ ಆಚಾರ್ಯ ಅವರ ಈ ಆಯ್ಕೆಯು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ. ವಾಲಿಬಾಲ್‌ನಲ್ಲಿ ಅವರು ತೋರಿದ ಉತ್ತಮ ಪ್ರದರ್ಶನದ ಫಲವಾಗಿ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ದೊರೆತಿದೆ. ಶಮಿತ್ ಅವರ ಈ ಸಾಧನೆ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನ […]