ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ

ಉಡುಪಿ: ಭಟ್ರಕೋಡಿ–ಹಿರೇಬೆಟ್ಟಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಸುತ್ತುಪೌಳಿ ಕಾಮಗಾರಿಯ ಪ್ರಾರಂಭ ಹಾಗೂ ಶಿಲಾ ಮುಹೂರ್ತ ಕಾರ್ಯಕ್ರಮವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ತಂತ್ರಿವರ್ಯರಾದ ಡಾ. ಸತ್ಯಕೃಷ್ಣ ಭಟ್, ಮಂಗಳೂರು ಅವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ದ್ವಾದಶ ನಾರಿಕೇಳ ಮಹಾಗಣಪತಿ ಹೋಮ ಸೇರಿದಂತೆ ವಿವಿಧ ವೈದಿಕ ವಿಧಿವಿಧಾನಗಳು ನೆರವೇರಿದವು. ಧನುರ್ ಲಗ್ನದ ಸುಮುಹೂರ್ತದಲ್ಲಿ ಸುತ್ತುಪೌಳಿ ಕಾಮಗಾರಿಗೆ ಶಿಲಾ ಮುಹೂರ್ತ ನೆರವೇರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭ್ರಮರಾಂಬಿಕಾ ಮಹಿಳಾ ಭಜನಾ ಮಂಡಳಿ, ಕಬ್ಯಾಡಿ ಹಾಗೂ […]
ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು. ‘ಸ್ವಚ್ಛ ಭಾರತ–ಸುಂದರ ಭಾರತ’ ಆಶಯದೊಂದಿಗೆ ಬೆಳಿಗ್ಗೆ 8 ಗಂಟೆಯಿಂದ ಕಾಲೇಜು ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಂದೋಲನ ಆಯೋಜಿಸಲಾಗಿತ್ತು.ಇದರ ಅಂಗವಾಗಿ ಮಕ್ಕಳಿಗಾಗಿ […]
ಕೊಲ್ಲೂರು: ಬೀಡಾಡಿ ದನವನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಪರಾರಿ: ಆರೋಪಿ ಬಂಧನ

ಉಡುಪಿ: ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸೆ.29ರಂದು ಮಧ್ಯಾಹ್ನ ಸುಮಾರು 1.30ಕ್ಕೆ ಘಟನೆ ನಡೆದಿದ್ದು, ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದು, […]
ಗಾಂಧಿ ಜಯಂತಿ; ರಾಜಘಾಟ್‌ನಲ್ಲಿ ಮೋದಿ ಗೌರವ

ನವದೆಹಲಿ: ಮಹಾತ್ಮ ಗಾಂಧಿಯವರ (Gandhi Jayanti) 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ರಾಜ್‌ಘಾಟ್‌ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ಇತ್ತ, ದೇಶಾದ್ಯಂತ ನಾಯಕರು ಮತ್ತು ನಾಗರಿಕರು ಗಾಂಧಿ ಜಯಂತಿಯನ್ನು ಆಚರಿಸಿ, ಶಾಂತಿ, ಅಹಿಂಸೆ ಮತ್ತು ಸ್ವಚ್ಛತೆಯ ಕುರಿತಾದ ಅವರ ಸಂದೇಶವನ್ನು ಸ್ಮರಿಸಿದರು. ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ಗೆ ಆಗಮಿಸಿ, ರಾಷ್ಟ್ರಪಿತನ ಜನ್ಮದಿನದ ಅಂಗವಾಗಿ ಗಾಂಧೀಜಿಯವರ ಸಮಾಧಿಯ ಬಳಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಬಳಿಕ ಪ್ರಧಾನಿ ನರೇಂದ್ರ ಮೋದಿ […]
ದುಬೈ ಹೋಟೆಲ್ ಗೆ ಸೌತ್ ಇಂಡಿಯನ್ ಚೆಫ್ ಬೇಕಾಗಿದ್ದಾರೆ.

ದುಬೈ ಹೋಟೆಲ್ ಗೆ ಸೌತ್ ಇಂಡಿಯನ್ ಚೆಫ್ ಬೇಕಾಗಿದ್ದಾರೆ ಆಸಕ್ತಿಯುಳ್ಳವರು ಕೂಡಲೇ ಸಂಪರ್ಕಿಸಿ. ದೂರವಾಣಿ ಸಂಖ್ಯೆ; 0503752898/+71523589052