ಉಡುಪಿ: ಗಾಂಧಿ ಜಯಂತಿ, ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

ಉಡುಪಿ: ಲಯನ್ಸ್ ಕ್ಲಬ್ ಪ್ರಕೃತಿ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಜಯಂತಿಯನ್ನು ಉಡುಪಿಯ ಶಿರಬಿಡು ಸರಸ್ವತಿ ವಿದ್ಯಾ ಮಂದಿರ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದೇ ಸಂದರ್ಭದಲ್ಲಿ ಶಾಲೆಗೆ ದೇಶದ ಗಣ್ಯರ ಫೋಟೋಗಳನ್ನು ಹಸ್ತಾಂತರ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಡುಪಿಯ ಆಶಾ ನಿಲಯದಲ್ಲಿ, ನಮ್ಮ ಲಯನ್ಸ್ ಕ್ಲಬ್ ಸದಸ್ಯರಾದ ರಾಜ ವಿಕ್ರಮ್ ಅವರ ಮೊಮ್ಮಗಳಾದ ಕುಮಾರಿ ಸಿಯಾ ಅಶ್ವಿನ್ ಹುಟ್ಟುಹಬ್ಬವನ್ನು ಲಯನ್ಸ್ ಕ್ಲಬ್‌ನ ಸಹಯೋಗದೊಂದಿಗೆ ಆಚರಿಸಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ […]

ನಾಡಿನ ಜನಪ್ರಿಯ ಕಲೆ ಯಕ್ಷಗಾನವನ್ನು ರಾಜ್ಯ ಕಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಯಕ್ಷಗಾನ ಅಕಾಡೆಮಿಯ ಮನವಿ

ಉಡುಪಿ: ನಾಡಿನಾದ್ಯಂತ ಜನಪ್ರಿಯವಾಗಿರುವ ಕರಾವಳಿಯ ಯಕ್ಷಗಾನ ಕಲೆಯನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸುವಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅ.8ರಂದು ಮನವಿ ಮಾಡಿಲಿದ್ದಾರೆ. ಕರ್ನಾಟಕ ಕರಾವಳಿಯ ಗಂಡುಕಲೆಯೆಂದೇ ಪ್ರಖ್ಯಾತವಾಗಿರುವ ನೂರಾರು ವರ್ಷಗಳ ಇತಿಹಾಸ ಹೊಂದಿರುವ ‘ಯಕ್ಷಗಾನ ಕಲೆ’ಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ‘ಕರ್ನಾಟಕ ರಾಜ್ಯ ಕಲೆ’ಯಾಗಿ ಮಾನ್ಯತೆ ನೀಡಿ ಸರಕಾರದ ವತಿಯಿಂದ ಅಧಿಕೃತವಾಗಿ ಘೋಷಿಸಬೇಕು ಎಂಬ ಮನವಿ ಇದೆ. ಕರ್ನಾಟಕದ ಹೆಮ್ಮೆಯ […]

ಉಡುಪಿ: ಪೋದಾರ್ ಶಾಲೆಯಲ್ಲಿ ಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ: ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಗೌರವಪೂರ್ವವಾಗಿ ಆಚರಿಸಲಾಯಿತು. ಕಾರ್ಯಕ್ರಮಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಹತ್ತನೇಯ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾಯಕ್ರಮದಲ್ಲಿ ಕಿರು ನಾಟಕ, ಭಾಷಣ, ಸರ್ವಧರ್ಮ ಪ್ರಾರ್ಥನೆ ಹಾಗೂ ರಘುಪತಿ ರಾಘವ ಗೀತೆಯನ್ನು ಪ್ರಸ್ತುತಪಡಿಸಲಾಯಿತು. ಶಾಲೆಯ ಪ್ರಾಂಶುಪಾಲೆ ಶ್ರೀಮತಿ ನೇತ್ರಾ ಹೆಚ್ ಅವರು ಗಾಂಧೀಜಿಯವರ ಸತ್ಯ, ಅಹಿಂಸೆ, ಕೌಶಲ್ಯಾಧಾರಿತ ಶಿಕ್ಷಣ, ಶ್ರಮ, ಒಗ್ಗಟ್ಟಿನ ಮಹತ್ವ, ಸತ್ಯಮೇವ ಜಯತೆ ಎಂಬ ಸಂದೇಶ […]

Govt Job Alert: ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ 869 ಹುದ್ದೆಗಳಿಗೆ ನೇಮಕಾತಿ: ಅ.15 ಅರ್ಜಿ ಸಲ್ಲಿಕೆಗೆ ಕೊನೆ ದಿನ, ಆಸಕ್ತರಾ? ಕೂಡಲೇ ಅರ್ಜಿ ಹಾಕಿ

ಬೆಂಗಳೂರು: ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಲ್ಲಿ ಖಾಲಿ ಇರುವ 869 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 869 ಹುದ್ದೆಗಳಲ್ಲಿ 293 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಹುದ್ದೆಗಳ ವಿವರ ಉಳಿಕೆ ಮೂಲ ವೃಂದ: ಕಲ್ಯಾಣ ಕರ್ನಾಟಕ ವೃಂದ: ವಿದ್ಯಾರ್ಹತೆ ಜೈಲರ್‌ ಹುದ್ದೆಗೆ ಪದವಿ ಉತ್ತೀರ್ಣರಾಗಿರಬೇಕು. ವಾರ್ಡರ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ದ್ವಿತೀಯ ದರ್ಜೆ ಬೋಧಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ […]

ಮೈಸೂರು ದಸರಾ: ಅಭಿಮನ್ಯು ಬಳಿಕ ಇದೀಗ ಧನಂಜಯನ ಸರದಿ: ಚಿನ್ನದಂಬಾರಿ ಹೊರುವ ಹೊಣೆ ಧನಂಜಯನಿಗೆ ಸಿಗುವ ಸಾಧ್ಯತೆ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊರುವ ಮುಂದಿನ ಆನೆ ಬಹುತೇಕ ಅಂತಿಮಗೊಂಡಿದೆ ಎನ್ನಲಾಗಿದ್ದು, ನಿವೃತ್ತಿಯಾಗಿರುವ ಅಭಿಮನ್ಯು ಬಳಿಕ ಧನಂಜಯ ಆನೆಯ ಹೆಸರು ಮುಂಚೂಣಿಗೆ ಬಂದಿದೆ. ಅಂಬಾರಿ ಹೊರುವ ಆನೆ ಆಯ್ಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದು, ಧನಂಜಯನೇ ಮುಂದಿನ ಅಂಬಾರಿ ಆನೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ. ಮಹೇಂದ್ರ, ಪ್ರಶಾಂತ ಹಾಗೂ ಏಕಲವ್ಯ ಆನೆಗಳ ನಡುವೆ ಚಿನ್ನದಂಬಾರಿ ಹೊರುವ ಜವಾಬ್ದಾರಿಗಾಗಿ ಪೈಪೋಟಿ ಇದ್ದರೂ, […]