ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ ನಯಾರಾ ಎನರ್ಜಿ, ಪೆಟ್ರೋಲ್ ₹5, ಡೀಸೆಲ್ ₹3 ಏರಿಕೆ!

ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಹಾಗೂ ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಇಂಧನ ಮಾರಾಟ ಸಂಸ್ಥೆ ‘ನಯಾರಾ ಎನರ್ಜಿ’ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ. ಶನಿವಾರದಿಂದ ಜಾರಿಗೆ ಬರುವಂತೆ ನಯಾರಾ ಎನರ್ಜಿ ತನ್ನ ಇಂಧನ ಕೇಂದ್ರಗಳಲ್ಲಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹5 ಹಾಗೂ ಡೀಸೆಲ್ ಬೆಲೆಯನ್ನು ₹3 ಹೆಚ್ಚಿಸಿದೆ. ದೇಶಾದ್ಯಂತ ಕಂಪನಿಯ 7,000ಕ್ಕೂ ಹೆಚ್ಚು ಇಂಧನ ಕೇಂದ್ರಗಳಲ್ಲಿ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಅಂತರರಾಷ್ಟ್ರೀಯ ಇಂಧನ ಬೆಲೆಗಳ ನಿರಂತರ […]
ಉಡುಪಿ: ರೈಲುಗಳಿಗೆ ನೀರು ತುಂಬಿಸುವ ವ್ಯವಸ್ಥೆಯ ಮೂಲಭೂತ ಸೌಕರ್ಯಗಳಿಗೆ 2 ಕೋಟಿ ರೂ. ಅನುದಾನ ಬಿಡುಗಡೆ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತಹ ಪ್ರಮುಖ ವ್ಯವಸ್ಥೆಯಾದ ರೈಲುಗಳಿಗೆ ನೀರು ತುಂಬಿಸುವ ಸೌಲಭ್ಯತೆಗೆ ತಮ್ಮ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ಎರಡು ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದೆ ಎಂದು ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮಾಹಿತಿ ನೀಡಿದರು. ಅವರು ಮಣಿಪಾಲದ ಸಂಸದರ ಕಚೇರಿಯಲ್ಲಿ ಉಡುಪಿ ರೈಲ್ವೆ ಯಾತ್ರಿ ಸಂಘದ ಜೊತೆ ರೈಲ್ವೆ ಸಂಬಂಧಿತ ಸಮಸ್ಯೆಗಳು ಮತ್ತು ಸೌಲಭ್ಯತೆಗಳ ಬಗ್ಗೆ ಸಮಾಲೋಚನೆ ಸಭೆ ನಡೆಸಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದರು. ಉಡುಪಿಯು ಕರಾವಳಿಯ ವೇಗವಾಗಿ ಬೆಳೆಯುತ್ತಿರುವ […]
ನೂರಾರು ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಅಪರೂಪದ ಗೌರವ; ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಿದ ಇಸ್ರೇಲ್ ಪ್ರಧಾನಿ

ಟೆಲ್ ಅವಿವ್: ನೂರಾರು ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಧಿಕೃತ ಆಹ್ವಾನ ನೀಡಿದ್ದಾರೆ. 2027ರ ಮೇ ತಿಂಗಳಲ್ಲಿ ನಡೆಯಲಿರುವ ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಲು ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಆಹ್ವಾನಿಸಲಾಗಿದೆ. ಸಾಂಪ್ರದಾಯಿಕವಾಗಿ ಇಸ್ರೇಲಿ ನಾಗರಿಕರಿಗೆ ಮಾತ್ರ ಸೀಮಿತವಾಗಿದ್ದ ಈ ಗೌರವವನ್ನು ಭಾರತೀಯರಿಗೆ ನೀಡುತ್ತಿರುವುದು ವಿಶೇಷವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಯಾಪ್ಟನ್ ಸ್ಮಿತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನೆತನ್ಯಾಹು, […]
ರಾಜ್ಯದ ಪ್ರವಾಸಿ ತಾಣಗಳಲ್ಲಿ ಇನ್ಮುಂದೆ ‘ಮಯೂರ ರುಚಿ ಆನ್ ವೀಲ್ಸ್’: ಪ್ರವಾಸಿಗರಿಗೆ ಬಿಸಿ ಬಿಸಿ ಸಸ್ಯಾಹಾರಿ ಆಹಾರ

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಣಮಟ್ಟದ ಹಾಗೂ ಸ್ವಚ್ಛ ಆಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ‘ಮಯೂರ ರುಚಿ ಆನ್ ವೀಲ್ಸ್’ ಎಂಬ ಸಂಚಾರಿ ಆಹಾರ ಟ್ರಕ್ ಯೋಜನೆ ಜಾರಿಗೆ ತರಲು ಮುಂದಾಗಿದೆ. ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ KSTDC ಮಂಡಳಿ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಕ್ಟೋಬರ್ 5ರಿಂದ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ ಮೂರನೇ ವಾರದ ವೇಳೆಗೆ ಆಹಾರ […]
ಉಡುಪಿಯಲ್ಲಿ ಅ.6ರಂದು ‘ಉದ್ಯೋಗ ಮೇಳ”: ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಅವಕಾಶ

ಉಡುಪಿ: ಮಹಿಳಾ ಸಬಲೀಕರಣ ಹಾಗೂ ಹಿರಿಯ ನಾಗರಿಕರಿಗಾಗಿ ‘ಉದ್ಯೋಗ ಮೇಳ’ವನ್ನು ಅ.6ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಬಾಲ್ಕನಿ ಹಾಲ್‌ನಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಯೋಗ ಮೇಳ ನಡೆಯಲಿದೆ. ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಉದ್ಯೋಗ ಮತ್ತು ಹೆಚ್ಚುವರಿ ಆದಾಯದ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಮೇಳದಲ್ಲಿ ಆರ್ಥಿಕ ಸ್ವಾವಲಂಬನೆ, ಆರೋಗ್ಯ ಸಹಾಯ, ಆತ್ಮವಿಶ್ವಾಸ ವೃದ್ಧಿ, ಸಕ್ರಿಯ ಹಾಗೂ ಸಂತಸದ ವೃದ್ಧಾಪ್ಯ, ಎರಡನೇ ಆದಾಯ, ಕುಟುಂಬ ವೈದ್ಯಕೀಯ ಸೌಲಭ್ಯ ಸೇರಿದಂತೆ […]