ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ( 1 ರಿಂದ 8ನೇ ತರಗತಿ) ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, […]

ಅ.8 ರಂದು ನೇರ ಸಂದರ್ಶನ

ಉಡುಪಿ: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈವೇಟ್.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, […]

ಅಭಿವೃದ್ಧಿಗೆ ಹಣವಿಲ್ಲ, ಸರ್ಕಾರದ ಬೊಕ್ಕಸ ಖಾಲಿ’: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ; ಅಕ್ಟೋಬರ್‌ ಪೂರ್ತಿ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ

ಉಡುಪಿ: ನಾಲ್ಕು ಬಜೆಟ್‌ ಮಂಡಿಸಿದರೂ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸರ್ಕಾರ ಒಂದೇ ಒಂದು ಹೊಸ ರೇಷನ್‌ ಕಾರ್ಡ್‌ ನೀಡಿಲ್ಲ. ಬಿಪಿಎಲ್‌ ಕಾರ್ಡ್‌ಗಳ ಪರಿಶೀಲನೆ ಹೆಸರಿನಲ್ಲಿ 6 ಸಾವಿರಕ್ಕೂ ಅಧಿಕ ಕಾರ್ಡ್‌ಗಳನ್ನು ರದ್ದುಪಡಿಸಲು ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದರು.ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರ್ಕಳ ಬಿಜೆಪಿ ವತಿಯಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ 3.75 ವರ್ಷಗಳ ಆಡಳಿತ ಪೂರ್ಣಗೊಳಿಸಿದ್ದರೂ […]

ಬ್ಯಾಂಕ್ ನಲ್ಲಿ ಜಾಬ್ ಬೇಕಾ? ಬ್ಯಾಂಕ್ ಆಫ್ ಬರೋಡಾದಲ್ಲಿದೆ 1,100 ಹುದ್ದೆಗಳಿಗೆ ನೇಮಕಾತಿ! ಆಸಕ್ತಿ ಇದ್ರೆ ಅರ್ಜಿ ಸಲ್ಲಿಸಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ನಿರುದ್ಯೋಗಿ ಯುವಜನತೆ ಹಾಗೂ ಅರ್ಹ ಪದವೀಧರರಿಗೆ ಬ್ಯಾಂಕ್ ಆಫ್ ಬರೋಡಾ (BOB) ಸುವರ್ಣಾವಕಾಶ ನೀಡಿದೆ. ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 1,100 ವೆಲ್ತ್ ಎಕ್ಸಿಕ್ಯೂಟಿವ್ ಹಾಗೂ ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ನೇಮಕಾತಿಯಲ್ಲಿ ಒಟ್ಟು 1,100 ಹುದ್ದೆಗಳಿದ್ದು, ಹುದ್ದೆವಾರು ವಿವರ ಹೀಗಿದೆ: ವೆಲ್ತ್ ಎಕ್ಸಿಕ್ಯೂಟಿವ್ ಹುದ್ದೆಗೆ ಆರಂಭಿಕ ಮಾಸಿಕ ವೇತನ […]