ಬಸ್ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಬಿಸಿ? ಈ ತಿಂಗಳಲ್ಲೇ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಹಾಲಿನ ದರ ಏರಿಕೆ ಚರ್ಚೆಯ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಹೊರೆ ಬೀಳುವ ಸಾಧ್ಯತೆ ಎದುರಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಮತ್ತೊಮ್ಮೆ ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ದರ ನಿಗದಿ ಸಮಿತಿ ದರ ಏರಿಕೆಗೆ ಸಂಬಂಧಿಸಿದ ವರದಿಯನ್ನು ಸಿದ್ಧಪಡಿಸಿದ್ದು, ಈ ವಾರವೇ ಸಾರಿಗೆ ಸಚಿವರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ವರದಿ ಸ್ವೀಕರಿಸಿದ ಬಳಿಕ ಸಾರಿಗೆ […]

ಬಂಟ್ವಾಳದ ಕಾರ್ಮಿಕನಿಗೆ ಒಲಿಯಿತು ₹1 ಕೋಟಿ ಲಾಟರಿ: ರೂ.500 ಬೆಲೆಯ ಲಾಟರಿ ತಂದ ಅದೃಷ್ಟವಿದು!

ಮಂಗಳೂರು: ಅದೃಷ್ಟ ಯಾವಾಗ, ಯಾರಿಗೆ ಕೈಹಿಡಿಯುತ್ತದೆ ಎಂಬುದಕ್ಕೆ ಬಂಟ್ವಾಳ ತಾಲೂಕಿನ ಪಣೋಲಿಬೈಲ್ ನಿವಾಸಿ ರೋಹಿತ್ ಅವರ ಕಥೆಯೂ ಮತ್ತೊಂದು ಉದಾಹರಣೆಯಾಗಿದೆ. ಕೇರಳದ ತಿರುವೋಣಂ ಬಂಪರ್ ಲಾಟರಿ-2026ರ ಡ್ರಾದಲ್ಲಿ ರೋಹಿತ್ ಅವರಿಗೆ ಬರೋಬ್ಬರಿ ₹1 ಕೋಟಿ ಬಹುಮಾನ ಒಲಿದಿದೆ. ತಿರುವೋಣಂ ಬಂಪರ್‌ನ ಎರಡನೇ ಬಹುಮಾನವಾಗಿ ತಲಾ ₹1 ಕೋಟಿ ನೀಡಲಾಗಿದ್ದು, ಈ ಬಹುಮಾನಕ್ಕೆ 20 ಮಂದಿ ವಿಜೇತರಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿತ್ ಅವರಿಗೆ ಲಾಟರಿ ಖರೀದಿಸುವುದು ಹೊಸತೇನಲ್ಲ. ಕೇರಳ ಗಡಿಭಾಗದಲ್ಲಿರುವ ಸಂಬಂಧಿಕರ ಮನೆಗೆ ತೆರಳುವ […]

ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾ ಟಿ20 ಪ್ಲೇಯಿಂಗ್ XIನಲ್ಲಿ ಸದ್ಯಕ್ಕಿಲ್ಲ ಅವಕಾಶ? ಗಂಭೀರ್‌ ಹೇಳಿದ್ದೇನು?

ನವದೆಹಲಿ: ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಅದ್ಭುತ ಪ್ರದರ್ಶನ ನೀಡುತ್ತಿರುವ ಅವರ ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದರೆ ಟೀಮ್ ಇಂಡಿಯಾದ ಟಿ20 ಅಂತರರಾಷ್ಟ್ರೀಯ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆಯಲು ವೈಭವ್ ಇನ್ನೂ ಕಾಯಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಹೇಳಿಕೆಗಳು ಸೂಚಿಸಿವೆ. ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೂ ಮುನ್ನ ಜಿಯೋಸ್ಟಾರ್‌ನ […]

ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ ಗೌರವದ ಸಂಕೇತ. ಇಂದಿನ ಸಂದರ್ಭದಲ್ಲಿ ಸಾಮರಸ್ಯದ ಸಮಾಜ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಈ ಕಾರ್ಯವನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತನ್ನ ಪ್ರಮುಖ ಧ್ಯೇಯವನ್ನಾಗಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಕ್ಫ್, ಹಜ್, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಜತ ಸಂಭ್ರಮದ ಅಂಗವಾಗಿ ಉಡುಪಿ ನಗರದ ವಿ.ಕೆ. ಪ್ಯಾರಡೈಸ್ ಕಟ್ಟಡದಲ್ಲಿ […]

ವಿಮಾನ ಪತನಕ್ಕೆ ಜುಲೈನಲ್ಲೇ ನಡೆದಿತ್ತು ಸಂಚು: ಫ್ಲೈದುಬೈ ಸಹ-ಪೈಲಟ್‌ನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ಅಬುಧಾಬಿ: ಫ್ಲೈದುಬೈ ವಿಮಾನವನ್ನು ಪತನಗೊಳಿಸಲು ಒಮಾನ್ ಮೂಲದ ಸಹ-ಪೈಲಟ್ ಹಮಾಮ್ ಅಲ್-ಹಮ್ಮಾಮಿ ಜುಲೈನಲ್ಲೇ ಸಂಚು ರೂಪಿಸಿದ್ದ ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಬಹಿರಂಗವಾಗಿದೆ. ಯುಎಇ ತನಿಖಾಧಿಕಾರಿಗಳ ವಿಚಾರಣೆ ವೇಳೆ ಬಂಧಿತ ಹಮಾಮ್ ಈ ವಿಚಾರಗಳನ್ನು ಬಾಯ್ಬಿಟ್ಟಿರುವುದಾಗಿ ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಭಾರತ ಮೂಲದ ಮುಖ್ಯ ಪೈಲಟ್ ಸ್ಮಿತ್ ಮಚ್ಚರ್ ಅವರನ್ನು ಹತ್ಯೆಗೈದು, ಯಾವುದೇ ಅನುಮಾನ ಮೂಡದಂತೆ ವಿಮಾನದ ಲ್ಯಾಂಡಿಂಗ್‌ಗೆ ಅನುಮತಿ ಪಡೆಯುವುದು ಹಾಗೂ ಕೊನೆಯ ಕ್ಷಣದಲ್ಲಿ ವಿಮಾನ ನಿಲ್ದಾಣದ ಕಟ್ಟಡ ಅಥವಾ ನೆಲದಲ್ಲಿದ್ದ ಮತ್ತೊಂದು ವಿಮಾನಕ್ಕೆ […]