ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಕಳ ವತಿಯಿಂದ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೇಷನ್ ಕಾರ್ಡ್, ಪಿಂಚಣಿ ಹಾಗೂ ರಸ್ತೆ ನಿರ್ವಹಣೆಗೆ ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾಂಗ್ರೆಸ್ ಸರ್ಕಾರವನ್ನು “ಜೀರೋ ಬ್ಯಾಲೆನ್ಸ್ ಸರ್ಕಾರ” ಎಂದು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ […]
ಬೆಂಗಳೂರು–ಕಾರವಾರ ವಂದೇ ಭಾರತ್: ಮಂಗಳೂರು ನಿಲುಗಡೆ ವಿಚಾರಕ್ಕೆ ಉತ್ತರ–ದಕ್ಷಿಣ ಕನ್ನಡದ ಪ್ರಯಾಣಿಕರ ನಡುವೆ ಭಿನ್ನಾಭಿಪ್ರಾಯ

ಕಾರವಾರ: ಬೆಂಗಳೂರು ಮತ್ತು ಕಾರವಾರ ನಡುವೆ ಪ್ರಸ್ತಾವಿತ ವಂದೇ ಭಾರತ್ ರೈಲು ಸೇವೆಯ ಮಾರ್ಗ ಹಾಗೂ ನಿಲುಗಡೆ ವಿಚಾರವಾಗಿ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಪ್ರಯಾಣಿಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಬೆಂಗಳೂರು–ಕಾರವಾರ ವಂದೇ ಭಾರತ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೆ ಸಂಚರಿಸಬೇಕು ಎಂಬ ದಕ್ಷಿಣ ಕನ್ನಡದ ಪ್ರಯಾಣಿಕರ ಬೇಡಿಕೆಗೆ ಉತ್ತರ ಕನ್ನಡದ ರೈಲು ಬಳಕೆದಾರರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮಂಗಳೂರು ನಗರಕ್ಕೆ ಸಮರ್ಪಕ ರೈಲು ಸಂಪರ್ಕ ಕಲ್ಪಿಸುವ ಉದ್ದೇಶದಿಂದ ರೈಲಿಗೆ ಮಂಗಳೂರು ಸೆಂಟ್ರಲ್ ಹಾಗೂ ಮಂಗಳೂರು […]
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ಪ್ರಯಾಣಿಕ ಹಳಿಯಲ್ಲಿ ಸಿಲುಕಿ ಸಾವು- ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಘಟನೆ

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ.ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ […]
ಜೈಲು ವಾರ್ಡನ್‌ಗೆ ಹಲ್ಲೆ, ಜೀವ ಬೆದರಿಕೆ ಹಾಕಿದ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

ಉಡುಪಿ: ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2011ರ ಡಿ.3ರಂದು ಮಧ್ಯಾಹ್ನ 1.20ರ ಸುಮಾರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲು ವಾರ್ಡನ್ ಕರ್ತವ್ಯಕ್ಕೆ ಹಾಜರಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ಅವರವರ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. […]
ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಮುಳಿಯ ಸಾರಾಫ ಶ್ಯಾಮ ಭಟ್ (81 ವರ್ಷ) ಅವರು ಅಕ್ಟೋಬರ್ 4ರಂದು ನಿಧನ ಹೊಂದಿದ್ದಾರೆ. ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು. ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ […]