ಫ್ಲೈ ದುಬೈ ವಿಮಾನ ಪ್ರಕರಣ: ಪೈಲೆಟ್ ಹೀರೊ ಸ್ಮಿತ್ ಮಚ್ಚಾರ್ ತಲೆಬುರುಡೆ ಮೂಳೆ ಮುರಿತ: ಸೌದಿಯಲ್ಲಿ ಶಸ್ತ್ರಚಿಕಿತ್ಸೆ

ದುಬೈ: ಫ್ಲೈದುಬೈ ವಿಮಾನದಲ್ಲಿ ಒಮಾನಿ ಸಹ-ಪೈಲಟ್‌ನಿಂದ ಮಾರಣಾಂತಿಕ ದಾಳಿಗೆ ಒಳಗಾದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್ ಅವರ ತಲೆಬುರುಡೆಗೆ ಗಂಭೀರ ಗಾಯವಾಗಿದ್ದು, ಸೌದಿ ಅರೇಬಿಯಾದಲ್ಲಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಕಾಕ್‌ಪಿಟ್‌ನಲ್ಲಿದ್ದ ವೇಳೆ ಸಹ-ಪೈಲಟ್ ವಿಮಾನದ ತುರ್ತು ಬಳಕೆಯ ಕೊಡಲಿ (ಕ್ರಾಶ್ ಆಕ್ಸ್)ಯಿಂದ ಸ್ಮಿತ್ ಅವರ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಅವರ ತಲೆಬುರುಡೆಯ ಮೂಳೆ ಮುರಿದಿದ್ದು, ‘ಡಿಪ್ರೆಸ್ಡ್ ಸ್ಕಲ್ ಫ್ರಾಕ್ಚರ್’ ಎಂಬ ಗಂಭೀರ ಗಾಯವಾಗಿದೆ. ಈ ರೀತಿಯ ಗಾಯದಲ್ಲಿ ಮುರಿದ ಮೂಳೆ ಒಳಭಾಗಕ್ಕೆ ಕುಸಿದು ಮೆದುಳಿನ ಮೇಲೆ […]
ಉಡುಪಿ: ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಸಿಪಿಎಂ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, “ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದ್ದು, ಚುನಾವಣಾ ಆಯೋಗವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು. ಫಾರಂ-7 ಮೂಲಕ ನಡೆಯುತ್ತಿರುವ ಅಕ್ರಮಗಳ ಕುರಿತು ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ […]
ನ.5ರೊಳಗೆ ಜಿಲ್ಲಾಸ್ಪತ್ರೆ ಆರಂಭಕ್ಕೆ ಗಡುವು: ಕರವೇ

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಸ್ಪತ್ರೆಯನ್ನು ಶೀಘ್ರ ರೋಗಿಗಳ ಸೇವೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಡೆಸಿದ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾಡಳಿತ ನೀಡಿದ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಳಿಸಲಾಯಿತು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರವೇ (ಪ್ರವೀಣ್ ಶೆಟ್ಟಿ ಬಣ) ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ ಅವರು, ಹೋರಾಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತವು ಅ.5ರಂದು ಅಪರ ಜಿಲ್ಲಾಧಿಕಾರಿಯನ್ನು ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಕೈಬಿಡುವಂತೆ […]
ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ “ಉದ್ಯಮ್‌ಎಕ್ಸ್” (UdyamX) ಘಟಕದ ಉದ್ಘಾಟನೆ

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ತನ್ನ ಪ್ರಮುಖ ‘ಉದ್ಯಮಶೀಲತೆ ಮತ್ತು ನಾವೀನ್ಯತೆ ಘಟಕ’ವಾದ “ಉದ್ಯಮ್‌ಎಕ್ಸ್” (UdyamX) ಅನ್ನು ಇತ್ತೀಚೆಗೆ ಕಾಲೇಜಿನಲ್ಲಿ ಅಧಿಕೃತವಾಗಿ ಪ್ರಾರಂಭಿಸಿತು. ನಾವೀನ್ಯತೆಯನ್ನು ಉತ್ತೇಜಿಸುವುದು, ಬಲವಾದ ಸ್ಟಾರ್ಟಪ್ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಸಮಗ್ರ ‘ಇನ್‌ಕ್ಯುಬೇಷನ್’ (ವ್ಯವಹಾರ ಅಭಿವೃದ್ಧಿ) ಬೆಂಬಲವನ್ನು ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ-ಕೇಂದ್ರಿತ ವೇದಿಕೆಯನ್ನು ಸೃಷ್ಟಿಸುವುದು ಉದ್ಯಮ್‌ಎಕ್ಸ್‌ನ ಮುಖ್ಯ ಉದ್ದೇಶವಾಗಿದೆ. ಸೃಜನಶೀಲ ಕಲ್ಪನೆಗಳನ್ನು ವ್ಯಾಪಾರ ಉದ್ಯಮಗಳಾಗಿ ಪರಿವರ್ತಿಸಲು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಮೂಲಕ ಶೈಕ್ಷಣಿಕ ಕಲಿಕೆ […]
ಅ.11ರಂದು ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’

ಉಡುಪಿ: ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ “ಮಹಿಷ ಮಹೋತ್ಸವ”ವನ್ನು ಅ.11ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಬನ್ನಂಜೆಯ ಶ್ರೀನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಯುವಸೇನೆ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಸುಧೀರ್ ಕುಮಾರ್ ಮುರೋಳಿ, ರೈತ ಕೂಲಿ […]