ಮಾನಸಿಕ ಆರೋಗ್ಯ: ಆಂತರಿಕ ಧ್ವನಿಗಳಿಗೆ ಆದ್ಯತೆ ಅಗತ್ಯ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಹೇಳಿದರು. ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಅಲಿಸಲ್ಪಟ್ಟ ಜೀವನದ ಅನುಭವಗಳು: ನೈಜ ಧ್ವನಿಗಳು, ನೈಜ ಬದಲಾವಣೆ’ ಎಂಬ ಆಶಯದೊಂದಿಗೆ ಈ ಬಾರಿಯ ದಿನಾಚರಣೆ ನಡೆಯಲಿದೆ. ಇಂದಿನ ಒತ್ತಡದ ಜೀವನಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. […]
ನವೆಂಬರ್ 5 ರೊಳಗೆ ಚಿಕಿತ್ಸೆ ಆರಂಭದ ಭರವಸೆ: ಕರವೇ ಉಪವಾಸ ಸತ್ಯಾಗ್ರಹ ಅಂತ್ಯ: ಆದಷ್ಟು ಶೀಘ್ರವೇ ಸೇವೆ ಆರಂಭವಾಗದಿದ್ದರೆ ಮತ್ತೆ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ಉಡುಪಿಯ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ, ಬಡವರು ಹಾಗೂ ಅಗತ್ಯವಿರುವವರಿಗೆ ಚಿಕಿತ್ಸೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆಯುತ್ತಿದ್ದ ಹೋರಾಟ ಐದನೇ ದಿನಕ್ಕೆ ಅಂತ್ಯಗೊಂಡಿದೆ. ಪ್ರತಿಭಟನಾ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿಯವರ ಪರವಾಗಿ ಅಪರ ಜಿಲ್ಲಾಧಿಕಾರಿಯವರು ಆಗಮಿಸಿ, ಆಸ್ಪತ್ರೆಯಲ್ಲಿ ಯಂತ್ರೋಪಕರಣಗಳ ಅಳವಡಿಕೆ ಕಾರ್ಯವನ್ನು ನಾಳೆಯಿಂದಲೇ ಆರಂಭಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ನವೆಂಬರ್ 5ರೊಳಗೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸುವುದಾಗಿ ತಿಳಿಸಿದರು.ಜಿಲ್ಲಾಡಳಿತ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು […]
ರಚನಾಗೆ ಪಿ.ಎಚ್.ಡಿ. ಪದವಿ

ಕಾರ್ಕಳ: ನಿಟ್ಟೆಯ ಡಾ. ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ರಚನಾ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ.) ಪದವಿ ನೀಡಿದೆ. ರಚನಾ ಅವರು ಆನ್‌ಲೈನ್‌ನಲ್ಲಿ ತಕ್ಷಣದ ಪ್ರೇರಣೆಯಿಂದ ಖರೀದಿಸುವ ಗ್ರಾಹಕರ ಪ್ರವೃತ್ತಿಗಳ ಅನಾವರಣ (Unveiling the Shopping Tendencies of Customers Towards Online Impulsive Buying Intentions) ವಿಷಯದಲ್ಲಿ ವಿಶ್ವವಿದ್ಯಾಲಯದ ಸಂಶೋಧನಾ ಪ್ರಾಧ್ಯಾಪಕಿ ಡಾ. ಸುಜಯಾ ಎಚ್.ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಅವರ ಸಂಶೋಧನಾ ಮಹಾಪ್ರಬಂಧವನ್ನು […]
ಮಾಂಟೆಸ್ಸರಿ/ ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್‍ಗೆ ಕೊನೆಯ ದಿನಾಂಕ 31.10.2026

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2026-27) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತಿಯಿರುವವರು, ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್ ಕಾಂಪ್ಲೆಕ್ಸ್, 1ನೇ ಮಹಡಿಯಲ್ಲಿರುವ ಸಂಸ್ಥೆ – (9901722527)ಯನ್ನು ಸಂಪರ್ಕಿಸುವಂತೆ ಎಂದುಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.
ಸೇನಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1. 2 (ಎ), 3 (ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ(ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2026 ಅಕ್ಟೋಬರ್ 30 ಕ್ಕೆ ಅನ್ವಯವಾಗುವಂತೆ 2006 ರ ಅಕ್ಟೋಬರ್ […]