ವಿಟಿಯುನಲ್ಲಿ 4ನೇ ರ್ಯಾಂಕ್‍ಗಳಿಸಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕುಮಾರಿ ಸಿಂಚನ

ಉಡುಪಿ: ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ 2022-26ನೇ ಸಾಲಿನ ವಿದ್ಯಾರ್ಥಿನಿ ಕುಮಾರಿ ಸಿಂಚನ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 4ನೇ ರ್ಯಾಂಕ್ ಗಳಿಸುವಮೂಲಕ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಈ ಪ್ರತಿಷ್ಠಿತ ಸಾಧನೆಗಾಗಿ ಅವರು 26ನೇ ಸೆಪ್ಟೆಂಬರ್ 2026 ರಂದು ನಡೆದ ವಿ ಟಿ ಯು ನ 26ನೇ ಘಟಿಕೋತ್ಸವದಲ್ಲಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ […]

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು, ಸಾಲು ಸಾಲು ರಜೆಗೆ ಜನತೆ ಖುಷ್!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಕ್ಟೋಬರ್ 25ರಂದು ನಿಗದಿಯಾಗಿದ್ದ ರಜೆಯನ್ನು ಬದಲಾಯಿಸಿ, ಅಕ್ಟೋಬರ್ 26ರಂದು ವಾಲ್ಮೀಕಿ ಜಯಂತಿ ಆಚರಿಸಲು ಹಾಗೂ ಅಂದೇ ಸಾರ್ವತ್ರಿಕ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 25ರಂದು ಘೋಷಿಸಲಾಗಿತ್ತು. ಆದರೆ, ವಾಲ್ಮೀಕಿ ಜಯಂತಿಯನ್ನು ‘ಶೀಗಿ ಹುಣ್ಣಿಮೆ’ಯಂದೇ ಆಚರಿಸುವ ಹಿನ್ನೆಲೆಯಲ್ಲಿ, ಈ ಬಾರಿ ಶೀಗಿ ಹುಣ್ಣಿಮೆ ಅಕ್ಟೋಬರ್ […]

ನಟ ಶಿವರಾಜ್‌ಕುಮಾರ್ ಎದುರು ಏಕಾಏಕಿ ಸ್ಫೋಟಗೊಂಡ ಪಟಾಕಿ ಬಾಕ್ಸ್: ಕೂದಲೆಳೆ ಅಂತರದಲ್ಲಿ ಪಾರಾದ ಹ್ಯಾಟ್ರಿಕ್ ಹೀರೋ!

ಚಿತ್ರದುರ್ಗ: ಬಹುನಿರೀಕ್ಷಿತ ‘ಬೇಲ್‌’ ಚಿತ್ರದ ಪ್ರಚಾರಕ್ಕಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರುವ ವೇಳೆ ಆತಂಕಕಾರಿ ಘಟನೆ ನಡೆದಿದೆ. ಖಾಸಗಿ ಶೋರೂಂಗೆ ಶಿವರಾಜ್‌ಕುಮಾರ್ ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸುತ್ತಿದ್ದರು. ಇದೇ ವೇಳೆ ಅವರ ಎದುರೇ ದಿಢೀರನೆ ಪಟಾಕಿ ಬಾಕ್ಸ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಪಟಾಕಿಯ ಕಿಡಿಗಳು ಶಿವರಾಜ್‌ಕುಮಾರ್ ಅವರ ಮೇಲೂ ಬಿದ್ದಿವೆ. ಘಟನೆಯಿಂದ ಕ್ಷಣಕಾಲ ಶಿವರಾಜ್‌ಕುಮಾರ್ ಆಘಾತಕ್ಕೊಳಗಾದರೂ, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇತ್ತ ಶಿವರಾಜ್‌ಕುಮಾರ್ […]

ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2 ರಷ್ಟು ಮೀಸಲಾತಿ!

ಬೆಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ […]

ಚೆಕ್ ಬೌನ್ಸ್ ಪ್ರಕರಣ: ಖ್ಯಾತ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ:

ನವದೆಹಲಿ: ದೀರ್ಘಕಾಲದಿಂದ ಬಾಕಿ ಉಳಿದಿರುವ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ತೀವ್ರ ಛೀಮಾರಿ ಹಾಕಿದೆ. ಖಾಸಗಿ ಸಂಸ್ಥೆಗೆ ಪಾವತಿಸಬೇಕಿದ್ದ ಬಾಕಿ ಮೊತ್ತವನ್ನು ಪಾವತಿಸುವ ಭರವಸೆ ನೀಡಿದ್ದರೂ ಅದನ್ನು ಈಡೇರಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 15ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಬಾಕಿ ಮೊತ್ತ ಪಾವತಿಸಲು ಸ್ಪಷ್ಟವಾದ ಪ್ರಸ್ತಾವನೆ ಸಲ್ಲಿಸುವಂತೆ ಯಾದವ್ ಅವರಿಗೆ ಎರಡು ವಾರಗಳ ಅಂತಿಮ ಅವಕಾಶ ನೀಡಿತ್ತು. ಅಲ್ಲದೆ, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ […]