ಕರಾವಳಿ ಹೈಕೋರ್ಟ್ ಪೀಠ ಹೋರಾಟಕ್ಕೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಬೆಂಬಲ; ಪ್ರೇಮ್ ಪ್ರಸಾದ್ ಶೆಟ್ಟಿ

ಉಡುಪಿ: ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆಯವರನ್ನು ಭೇಟಿ ಮಾಡಿ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ನ್ಯಾಯಮೂರ್ತಿ ಹೆಗ್ಡೆಯವರು ಈ ಬಗ್ಗೆ ತಮ್ಮ ಬೆಂಬಲವನ್ನು ಸೂಚಿಸಿ ಅತೀ ಶೀಘ್ರದಲ್ಲಿ ಪೀಠ ಸ್ಥಾಪನೆ ಆಗುವ ಭರವಸೆ ವ್ಯಕ್ತ ಪಡಿಸಿ, ನಮ್ಮ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು […]
ಬರಗಾಲದ ಎಫೆಕ್ಟ್: ಇಲ್ಲಿ ಬೀಗರ ಊಟ ಆಯೋಜಿಸಿದವರಿಗೆ ಬೀಳುತ್ತೆ ರೂ 1 ಲಕ್ಷ ದಂಡ!

ಶಿಕಾರಿಪುರ(ಶಿವಮೊಗ್ಗ): ಮದುವೆ ಬಳಿಕ ಅದ್ದೂರಿಯಾಗಿ ಬೀಗರ ಊಟ (ಬಾಡೂಟ) ಆಯೋಜಿಸುವ ಸಂಪ್ರದಾಯಕ್ಕೆ ಬರಗಾಲದ ಬಿಸಿ ತಟ್ಟಿದೆ. ದುಂದುವೆಚ್ಚಕ್ಕೆ ಕಡಿವಾಣ ಹಾಕಲು ತಾಲೂಕಿನ ಹರಗಿ ಗ್ರಾಮಸ್ಥರು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಗ್ರಾಮದಲ್ಲಿ ಬೀಗರ ಊಟ ಆಯೋಜಿಸುವುದನ್ನು ನಿಷೇಧಿಸಿದ್ದಾರೆ. ಬೀಗರ ಊಟ ಆಯೋಜಿಸುವವರಿಗೆ ₹1 ಲಕ್ಷ ಹಾಗೂ ಊಟಕ್ಕೆ ತೆರಳುವವರಿಗೆ ₹50 ಸಾವಿರ ದಂಡ ವಿಧಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಬರಗಾಲದಿಂದ ರೈತರು ಹಾಗೂ ಬಡ, ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. […]
ರಷ್ಯಾ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 23 ಭಾರತೀಯರ ರಕ್ಷಣೆ

ಮಾಸ್ಕೋ: ರಷ್ಯಾದ ಕಪ್ಪು ಸಮುದ್ರ ಕರಾವಳಿಯ ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಲೈಬೀರಿಯಾ ಧ್ವಜ ಹೊಂದಿದ ತೈಲ ಟ್ಯಾಂಕರ್ ಮೇಲೆ ಉಕ್ರೇನ್ ನೌಕಾ ಡ್ರೋನ್ ಭೀಕರ ದಾಳಿ ನಡೆಸಿದೆ. ದಾಳಿಯ ಬಳಿಕ ಟ್ಯಾಂಕರ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಡಗಿನಲ್ಲಿದ್ದ ಎಲ್ಲಾ 23 ಮಂದಿ ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ರಷ್ಯಾದ ಸಾರಿಗೆ ಸಚಿವಾಲಯ ತಿಳಿಸಿದೆ. ಪ್ರಸಿದ್ಧ ಪ್ರವಾಸಿ ತಾಣ ಸೋಚಿ ನಗರದ ಸಮೀಪ ಸಮುದ್ರದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ಬಳಿಕ ಟ್ಯಾಂಕರ್ ಹೊತ್ತಿ […]