ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಗೆ ಮತ್ತೆ ಶಾಕ್! ದರ್ಶನ್ ಪತ್ನಿ ವಿಜಯಲಕ್ಷ್ಮಿ ಅರ್ಜಿ ವಜಾ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದಲ್ಲಿ ಮಹತ್ವದ ತಿರುವು ನೀಡಿದ್ದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಆದರೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸದೆ ಹಾಗೂ ಸಹ-ಆರೋಪಿಗಳ […]

ಮಣಿಪಾಲದ MSDCಯಲ್ಲಿ ಕಂಟೆಂಟ್ ಕ್ರಿಯೇಷನ್ ಇಂಟರ್ನ್‌ಗಳ ನೇಮಕಾತಿ: ಯಾರು ಅರ್ಜಿ ಸಲ್ಲಿಸಬಹುದು?

ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವತಿಯಿಂದ ಕಂಟೆಂಟ್ ಕ್ರಿಯೇಷನ್ ಕ್ಷೇತ್ರದಲ್ಲಿ ಇಂಟರ್ನ್‌ಗಳ ನೇಮಕಾತಿಗೆ ಮುಂದಾಗಿದೆ. ವೀಡಿಯೋ ಹಾಗೂ ಡಿಜಿಟಲ್ ಕಂಟೆಂಟ್ ರಚನೆಯಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಯಾವ ಹುದ್ದೆಗಳು? ವೀಡಿಯೋ ಎಡಿಟಿಂಗ್, ಕ್ಯಾಮೆರಾ ಹ್ಯಾಂಡ್ಲಿಂಗ್, ವೀಡಿಯೋಗ್ರಫಿ, ಕಂಟೆಂಟ್ ಸ್ಟ್ರಾಟಜಿ, ಮೈಕ್ ಹ್ಯಾಂಡ್ಲಿಂಗ್, ಟ್ರೆಂಡ್ ರಿಸರ್ಚ್, ಫೋಟೋಗ್ರಫಿ ಹಾಗೂ ಸಂವಹನ ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದೆ. ರೀಲ್ಸ್ ಸೇರಿದಂತೆ ವಿವಿಧ ರೀತಿಯ ಡಿಜಿಟಲ್ ಕಂಟೆಂಟ್‌ಗಳ ತಯಾರಿಕೆಯಲ್ಲಿ ಆಸಕ್ತಿ ಹೊಂದಿರುವವರು ಈ ಇಂಟರ್ನ್‌ಶಿಪ್ […]

ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಬ್ರಹ್ಮಾವರ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‍ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿರುವ ಮೈಸೂರು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ಗ್ರಂಥ ಹಾಗೂ ಏಳನೇ ತರಗತಿಯ ಅಂಜನಿ ಕಾಮತ್ ಪ್ರತಿನಿಧಿಸಿದ್ದ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು […]

ಎಂಐಟಿಕೆ – ಎ ಐ ವಿಷನ್ 24H’ ರಾಷ್ಟ್ರೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್.

ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ(MITK) ವತಿಯಿಂದ “MITK AI VISION 24H – ರಾಷ್ಟ್ರೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್” ಅನ್ನು 9 ಮತ್ತು 10 ಅಕ್ಟೋಬರ್ 2026 ರಂದು ಎಂ ಐ ಟಿ ಕುಂದಾಪುರದ ದಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಯುವ ನವೋದ್ಯಮಿಗಳಲ್ಲಿ ಕೃತಕ ಬುದ್ಧಿಮತ್ತೆ (AI), ನವೀನ ಚಿಂತನೆ, ಸೃಜನಶೀಲತೆ, ತಾಂತ್ರಿಕ ಕೌಶಲ್ಯಗಳು ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳನ್ನು ಉತ್ತೇಜಿಸುವುದು ಈ ಹ್ಯಾಕಥಾನ್‌ನ ಪ್ರಮುಖ ಉದ್ದೇಶವಾಗಿದೆ. ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಿಂದ […]

ಅ.11 ರಂದು ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ ವರ್ಷದ ಪದವಿ ಪ್ರಧಾನ ಸಮಾರಂಭವು 11 ನೇ ಅಕ್ಟೋಬರ್ 2026 ಭಾನುವಾರದಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಅಂದು 2025-26ನೇ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಬಿ. ಇ. ಮತ್ತು ಎಮ್. ಬಿ. ಎ. ಪದವಿ ಪೂರೈಸಿದ ಅರ್ಹ ಪದವೀಧರರಿಗೆ ಪದವಿ ಪ್ರಮಾಣ ಪತ್ರ ಹಾಗೂ ಪ್ರತೀ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದವರಿಗೆ ಚಿನ್ನದ ಪದಕವನ್ನು ನೀಡಲಾಗುವುದು. ಇದಲ್ಲದೆ 2025-26 ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ […]