ಏನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಏನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಗುರುವಾರ ನಗರದ ಜಿಲ್ಲಾ ತರಬೇತಿ ಮತ್ತು ಶಿಕ್ಷಣ ಸಂಸ್ಥೆ (ಡಯಟ್) ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾದ್ಯಕ್ಷೆ ನಿರುಪಮ ಪ್ರಸಾದ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ಕರ್ತವ್ಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಎನ್.ಎಸ್.ಎಸ್ ನ ಪಾತ್ರ ದೊಡ್ಡದು. ಇಂದಿನ ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ತಮ್ಮದೇ ಆದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕಾದ […]
ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂವಿಧಾನದ ಬಗ್ಗೆ ಹಾಗೂ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಸಭೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ವ್ಯವಸ್ಥಿತ ಹಾಗ ಅರ್ಥ ಪೂರ್ಣವಾಗಿ ಆಯೋಜಿಸಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ […]
ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ವಿವರಗಳನ್ನು ಒಳಗೊಂಡ ಪಟ್ಟಿ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಹೆಸರು ಹಾಗೂ ಮೀಸಲಾತಿ ವರ್ಗಗಳನ್ನು ಪಟ್ಟಿಯಲ್ಲಿ ನಮೂದಿಸಲಾಗಿದೆ. ಪಟ್ಟಿಯ ಪ್ರಕಾರ, ವಿವಿಧ ಕ್ಷೇತ್ರಗಳನ್ನು ಸಾಮಾನ್ಯ, ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಗಳ ಎ ಮತ್ತು ಬಿ ವಿಭಾಗ, ಹಿಂದುಳಿದ ವರ್ಗಗಳ ಮಹಿಳಾ ಮೀಸಲಾತಿ ಹಾಗೂ ಅನುಸೂಚಿತ ಜಾತಿಗೆ ಮೀಸಲಿಡಲಾಗಿದೆ. ಇದರಿಂದ ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಮೀಸಲಾತಿಯ ವಿವರಗಳು ಲಭ್ಯವಾಗಿವೆ. ಶಿರೂರು, ಕೊಲ್ಲೂರು, ಕಂಬದಕೋಣೆ, ತ್ರಾಸಿ, ವಂಡ್ಸೆ, ಸಿದ್ದಾಪುರ, […]
ಮೊಬೈಲ್, ಪೆನ್‌ಡ್ರೈವ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಪ್ರಜ್ವಲ್ ರೇವಣ್ಣ ಇದ್ದ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವಂತೆ ಡಿಜಿಪಿ ಸೂಚನೆ ನೀಡಿದ್ದು, ಈ ಕುರಿತು ಬೆಳಗಾವಿ ಜೈಲು ಅಧಿಕಾರಿಗಳಿಗೆ ಅಧಿಕೃತ ಇ-ಮೇಲ್ ಕಳುಹಿಸಲಾಗಿದೆ. ಜೈಲು ಮುಖ್ಯ ಅಧೀಕ್ಷಕರಿಗೂ ಮಾಹಿತಿ ನೀಡಲಾಗಿದ್ದು, ಸ್ಥಳಾಂತರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ […]
ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್‌ಗೆ ಚಾಲನೆ

ಕುಂದಾಪುರ: ಸ್ಥಳೀಯ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನ ಆಡಿಟೋರಿಯಂನಲ್ಲಿ ಶುಕ್ರವಾರ, ಅಕ್ಟೋಬರ್ 9 ರಂದು ‘ಐಡಿಯಾಸ್ ಟುಡೇ, ಇಂಪ್ಯಾಕ್ಟ್ ಟುಮಾರೋ’ ಎಂಬ ಧ್ಯೇಯವಾಕ್ಯದೊಂದಿಗೆ ‘MITK AI VISION 24H’ 24-ಗಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ಕಾಮ್ವಾಲ್ಟ್ ಸಂಸ್ಥೆಯ ಡಾಟಾ ಇವಾಂಜೆಲಿಸ್ಟ್ ಪ್ರಶಾಂತ್ ಜಯರಾಮ್ ಉದ್ಘಾಟಿಸಿ ಮಾತನಾಡುತ್ತಾ, “ಪ್ರಸ್ತುತ ಕೈಗಾರಿಕಾ ಕ್ಷೇತ್ರದಲ್ಲಿ ದತ್ತಾಂಶ ಮತ್ತು ಕೃತಕ ಬುದ್ಧಿಮತ್ತೆ ಕ್ರಾಂತಿಕಾರಿ ಬದಲಾವಣೆ ತರುತ್ತಿವೆ. ವಿದ್ಯಾರ್ಥಿ ಸಮೂಹವು ಕೇವಲ ಪಠ್ಯಕ್ಕೆ […]