ಮಾನಸಿಕ ಆರ್ಥಿಕ ಸಬಲತೆ ಮುಖ್ಯ- ಡಾ. ಕಂಠಿ

ಮಾನಸಿಕ ಆರೋಗ್ಯದ ಜೊತೆಗೆ ಆರ್ಥಿಕ ಸಬಲತೆ ಇದ್ದಾಗ ನಿವೃತ್ತಿ ಜೀವನ ಯಶಸ್ವಿಯಾಗುತ್ತದೆ ಎಂದು ಧರ್ಮಸ್ಥಳ ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಗಿರಿಧರ ಕಂಠಿ ಹೇಳಿದರು. ಅಕ್ಸೆಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಏಜೆನ್ಸಿ ಪಾರ್ಟ್ನರ್ ಚಾನೆಲ್ನ ಸಹಯೋಗದಲ್ಲಿ ಉಡುಪಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.ನಿವೃತ್ತರಾದ ನಂತರ ಮನೆ ಸೇರುವುದನ್ನು ಬಿಟ್ಟು ಜನಜಾಗ್ರತಿ, ಜನರ ಸೇವೆ ಮಾಡಿದಾಗ ಸಮಾಜಕ್ಕೆ ಒಳಿತಾಗುತ್ತದೆ. ಜನರೊಂದಿಗೆ ಬೆರೆತಾಗ ಮನಸ್ಸು ಶುದ್ದಿ ಯಾಗುತ್ತದೆ ಎಂದರು.ಈ ಶುಭ ಸಂದರ್ಭದಲ್ಲಿ […]
ಕ್ಯಾನ್ಸರ್ ಔಷಧಗಳ ದರ ಶೇ. 30ಕ್ಕೆ ಮಿತಿ: ಬೆಲೆ ಇಳಿಕೆಯ ನಿರೀಕ್ಷೆ!

ಬೆಂಗಳೂರು: ಕ್ಯಾನ್ಸರ್ ಔಷಧಗಳ ಬೆಲೆ ಮತ್ತು ಔಷಧ ಕಂಪನಿಗಳ ಲಾಭಾಂಶದ ಕುರಿತು ಮತ್ತೆ ಚರ್ಚೆ ಆರಂಭವಾಗಿದ್ದು, ಔಷಧಗಳ ಮೇಲಿನ ವ್ಯಾಪಾರ ಲಾಭಾಂಶವನ್ನು ಅಸಲು ದರದ ಗರಿಷ್ಠ ಶೇ. 30ಕ್ಕೆ ಮಿತಿಗೊಳಿಸುವ ಕ್ರಮ ಗಮನ ಸೆಳೆದಿದೆ. ಔಷಧಗಳ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆ ದರದ ನಡುವೆ ಭಾರಿ ವ್ಯತ್ಯಾಸವಿರುವ ಕುರಿತು ಕರ್ನಾಟಕ ಆರೋಗ್ಯ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಈ ವಿಚಾರ ಮಹತ್ವ ಪಡೆದುಕೊಂಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕ್ಯಾನ್ಸರ್ ಔಷಧಗಳ ದುಬಾರಿ ಬೆಲೆಯ ಬಗ್ಗೆ […]
ಉದ್ಯೋಗ ಹುಡುಕುವವರ ಬಳಿಗೇ ಉದ್ಯೋಗಾವಕಾಶ: ಯುವಜನರಿಗೆ ಡಾ. ಕೆ. ಪ್ರಕಾಶ್ ಶೆಟ್ಟಿ ಕರೆ

ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶಗಳು ಬರುವಂತಹ ವಾತಾವರಣ ಇಂದು ನಿರ್ಮಾಣವಾಗುತ್ತಿದೆ ಎಂದು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ನಿಟ್ಟೆಯ ಎನ್‌ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗದಲ್ಲಿ ಹಾಗೂ ಎಂ.ಆರ್.ಜಿ. ಗ್ರೂಪ್‌ನ ಪ್ರಾಯೋಜಕತ್ವದಲ್ಲಿ ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ […]
ಮಂಗಳೂರು: ಎರಡು ತಿಂಗಳಲ್ಲಿ ಬರೋಬ್ಬರಿ 43,200 ಮೆಟ್ರಿಕ್ ಟನ್ ಮೀನು ಇಳುವರಿ!

ಮಂಗಳೂರು: ಪ್ರಸ್ತುತ ಮೀನುಗಾರಿಕಾ ಋತು ಆರಂಭವಾಗಿ ಎರಡು ತಿಂಗಳು ಕಳೆದಿದ್ದು, ಪ್ರತಿಕೂಲ ಹವಾಮಾನದ ಆತಂಕದ ನಡುವೆಯೂ ಮೀನುಗಾರಿಕೆಯಲ್ಲಿ ತೃಪ್ತಿದಾಯಕ ಇಳುವರಿ ದೊರೆತಿದೆ ಎಂದು ಮೀನುಗಾರರು ತಿಳಿಸಿದ್ದಾರೆ. ಸಾಮಾನ್ಯವಾಗಿ ಎರಡು ತಿಂಗಳ ಮೀನುಗಾರಿಕಾ ನಿಷೇಧ ಮುಗಿದ ಬಳಿಕ ಹೆಚ್ಚಿನ ನಿರೀಕ್ಷೆಯೊಂದಿಗೆ ಕಡಲಿಗೆ ಇಳಿಯುವ ಮೀನುಗಾರರಿಗೆ ಈ ಬಾರಿ ಉತ್ತಮ ಇಳುವರಿ ದೊರೆತಿದೆ. ನಿಷೇಧಾವಧಿ ಮುಗಿದ ನಂತರ ಬಹುತೇಕ ಎಲ್ಲಾ ಬೋಟ್‌ಗಳು ತಮ್ಮ ಮೊದಲ ಮೀನುಗಾರಿಕಾ ಪ್ರವಾಸ ಕೈಗೊಂಡಿದ್ದು, ಆಳ ಸಮುದ್ರಕ್ಕೆ ತೆರಳಿದ ಬೋಟ್‌ಗಳಿಗೆ ಉತ್ತಮ ಪ್ರಮಾಣದಲ್ಲಿ ಮೀನು ಲಭ್ಯವಾಗಿದೆ. […]
ನೂರಾರು ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ

ಜೆರುಸಲೇಂ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಬಹುದಾಗಿದ್ದ ಭೀಕರ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರು ಹಾಗೂ ಸಿಬ್ಬಂದಿಯ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ ಶೌರ್ಯ ಪ್ರಶಸ್ತಿ ಘೋಷಿಸಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ‘ಪ್ರೆಸಿಡೆನ್ಶಿಯಲ್ ಅವಾರ್ಡ್ ಫಾರ್ ಹೀರೋಯಿಸಂ’ (Presidential Award for Heroism) ಪ್ರಶಸ್ತಿಯನ್ನು ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ನೀಡುವುದಾಗಿ ಘೋಷಿಸಿದ್ದಾರೆ. ಪೈಲಟ್ ಸಂಪೂರ್ಣ ಗುಣಮುಖರಾದ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಮಾನದ ಕಾಕ್‌ಪಿಟ್‌ನಲ್ಲಿದ್ದಾಗ […]