₹75 ಲಕ್ಷ ವೆಚ್ಚದ ಸಂಗೀತ ಕಾರಂಜಿ ಎರಡು ವರ್ಷಗಳಿಂದ ಸ್ತಬ್ಧ!ಕೋಟ

ಉಡುಪಿ: ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕೋಟ ಕಾರಂತ ಕಲಾಭವನದ ಆವರಣದಲ್ಲಿನ ಸಂಗೀತ ಕಾರಂಜಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದೆ. ಉದ್ಘಾಟನೆಯ ಸಂದರ್ಭದಲ್ಲಿ ಪ್ರವಾಸೋದ್ಯಮದ ಆಕರ್ಷಣೆಯಾಗಿ ಗುರುತಿಸಿಕೊಳ್ಳುವ ನಿರೀಕ್ಷೆ ಮೂಡಿಸಿದ್ದ ಯೋಜನೆ ಇದೀಗ ನಿರ್ವಹಣೆಯ ಕೊರತೆಯಿಂದ ಸ್ತಬ್ಧವಾಗಿದ್ದು, ಸಾರ್ವಜನಿಕರ ತೆರಿಗೆ ಹಣದ ಸದ್ಬಳಕೆಯ ಕುರಿತು ಪ್ರಶ್ನೆಗಳು ಎದ್ದಿವೆ. ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟ ಕಾರಂತ ಕಲಾಭವನದ ಥೀಮ್ ಪಾರ್ಕ್ನ ಕೊಳದ ಮಧ್ಯಭಾಗದಲ್ಲಿ, ಹಿರಿಯ ಸಾಹಿತಿ ಶಿವರಾಮ ಕಾರಂತರ ಕಂಚಿನ ಪ್ರತಿಮೆಯ ಸುತ್ತ […]
ಬಾಲ್ಯದಿಂದ ವೃದ್ಧಾಪ್ಯದವರೆಗೆ ಒತ್ತಡದ ಜೀವನ: ಹರಿಪ್ರಸಾದ್ ರೈ

ಉಡುಪಿ: ಬಾಲ್ಯದಿಂದ ವೃದ್ಧಾಪ್ಯದವರೆಗೆ ಒತ್ತಡದ ಜೀವನ ಅನಿವಾರ್ಯವಾಗುತ್ತಿದೆ. ಹಿಂದೆ ನಮ್ಮ ಹಿರಿಯರು ಭೂತಕೋಲದಂತಹ ಸಾಂಪ್ರದಾಯಿಕ ಆಚರಣೆಗಳಲ್ಲಿ ತೊಡಗಿಸಿಕೊಂಡು ನೆಮ್ಮದಿಯ ಜೀವನ ನಡೆಸುತ್ತಿದ್ದರು. ಆದರೆ ಇಂದು ಪ್ಲೇ ಸ್ಕೂಲ್ ಮಕ್ಕಳಿಗೂ ಅಂಕ, ಪರೀಕ್ಷೆ ಸೇರಿದಂತೆ ಹಲವು ರೀತಿಯ ಒತ್ತಡಗಳು ಎದುರಾಗುತ್ತಿವೆ. ವಯಸ್ಕರೂ ವಿವಿಧ ಕಾರಣಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ನಿತ್ಯ ಯೋಗ, ಧ್ಯಾನ ಮತ್ತು ವ್ಯಾಯಾಮ ಮಾಡುವ ಮೂಲಕ ದೇಹ ಹಾಗೂ ಮನಸ್ಸನ್ನು […]
ಉಡುಪಿ: ಎಸ್ಐಆರ್ ಮಾಹಿತಿ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಚಿನ್ನದ ಸರ ಸುಲಿಗೆ

ಉಡುಪಿ: ಜನಗಣತಿ ಹಾಗೂ ಎಸ್ಐಆರ್ (ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ) ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 74 ವರ್ಷದ ವೃದ್ಧೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹5.53 ಲಕ್ಷ ಮೌಲ್ಯದ ಚಿನ್ನದ ಸರ, ವಿದ್ಯುತ್ ಸ್ಕೂಟರ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಟ್ಟೂರು ಸಮೀಪದ ಲಕ್ಷ್ಮೀನಾರಾಯಣ ಕೃಪಾ ನಿವಾಸಿ ಶಾಂತ ಕಾರಂತ್ (74) ಅವರ ಮನೆಗೆ ಅ.7ರಂದು […]
ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅ. 11ರಿಂದ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ಶರನ್ನವರಾತ್ರಿ ಮಹೋತ್ಸವ ಆರಂಭವಾಗಲಿದ್ದು, ಅಕ್ಟೋಬರ್ 21ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 27ರಂದು ಚಂಡಿಕಾಯಾಗದ ಪೂರ್ಣಾಹುತಿ ಹಾಗೂ ಮಹಾ ಅನ್ನಸಂತರ್ಪಣೆ ಜರುಗಲಿದೆ. ಮಹೋತ್ಸವದ ಅಂಗವಾಗಿ ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ, ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 11ರಿಂದ 20ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ […]
ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ. 11-21 ರವರೆಗೆ ಶರನ್ನವರಾತ್ರಿ ಮಹೋತ್ಸವದ ಸಡಗರ

ಕಮಲಶಿಲೆ: ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಕ್ಷೇತ್ರದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ಶರನ್ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏನೇನು ವಿಶೇಷ? ಮಹೋತ್ಸವದ ಅಂಗವಾಗಿ ಪ್ರತಿದಿನ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ತ್ರಿಕಾಲ ಬಲಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಪ್ರತಿದಿನ ಸಂಜೆ 7 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಸಂಜೆ 5.30ರಿಂದ 7.15ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಜನಾ ಮಂಡಳಿಗಳಿಂದ ಭಜನಾ […]