ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅ. 11ರಿಂದ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಉಡುಪಿ: ಶ್ರೀ ಕ್ಷೇತ್ರ ನೀಲಾವರದ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಶರನ್ನವರಾತ್ರಿ ಮಹೋತ್ಸವ ಹಾಗೂ ಅಕ್ಟೋಬರ್ 21ರಂದು ವಿಜಯದಶಮಿ ಮಹೋತ್ಸವ ನಡೆಯಲಿದೆ. ನವರಾತ್ರಿ ಮಹೋತ್ಸವದ ಅಂಗವಾಗಿ ಪ್ರತಿದಿನ ಶ್ರೀ ದೇವಿಯ ಸನ್ನಿಧಿಯಲ್ಲಿ ದುರ್ಗಾ ಹೋಮ ನಡೆಯಲಿದ್ದು, ವಿಜಯದಶಮಿ ದಿನದಂದು ಸಾಮೂಹಿಕ ಚಂಡಿಕಾಯಾಗ ಹಾಗೂ ಸಂಜೆ ಸಾಮೂಹಿಕ ದೀಪ ನಮಸ್ಕಾರ ನೆರವೇರಲಿದೆ. ನವರಾತ್ರಿಯ ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ವಿಶೇಷ ಅನ್ನಸಂತರ್ಪಣೆಯ ವ್ಯವಸ್ಥೆ ಮಾಡಲಾಗಿದೆ. ನವರಾತ್ರಿಯ ಪರ್ವದಿನಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮಕ್ಕಳಿಗೆ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ವೈಭವ: ಅ.11ರಿಂದ ಮಂಗಳೂರು ದಸರಾ ಮಹೋತ್ಸವ

ಮಂಗಳೂರು: ಮೈಸೂರು ದಸರಾ ಬಳಿಕ ಕರಾವಳಿಯಲ್ಲಿ ಹೆಚ್ಚಿನ ಜನಾಕರ್ಷಣೆ ಹೊಂದಿರುವ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 11ರಿಂದ ಆರಂಭವಾಗಲಿದೆ. ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಮಂಗಳೂರು ದಸರಾ ಹಾಗೂ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೇಂದ್ರದ ಮಾಜಿ ವಿತ್ತ ಸಚಿವ ಹಾಗೂ ಕ್ಷೇತ್ರದ ಜೀರ್ಣೋದ್ಧಾರದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವದ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 11ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಉತ್ಸವ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ […]

ಉಚ್ಚಿಲ ದಸರಾಗೆ ವಿದ್ಯುದ್ದೀಪಗಳ ಮೆರುಗು

ಉಡುಪಿ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ನಿರ್ಮಿಸಲಾಗಿರುವ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಅವರು ಶನಿವಾರ ಉದ್ಘಾಟಿಸಿದರು. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರದಲ್ಲಿ ಈ ಬಾರಿಯ ದಸರಾ ಉತ್ಸವ ಆಯೋಜಿಸಲಾಗಿದೆ. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪರಿಸರದಿಂದ ಪಡುಬಿದ್ರಿ ಮೂಲಕ ಕಾಪು […]

ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿದೆ ವಿವಿಧ ಹುದ್ದೆಗಳು : ನ. 9 ಅರ್ಜಿ ಸಲ್ಲಿಸಲು ಕೊನೆಯ ದಿನ, ಯಾವ ಹುದ್ದೆಗಳಿಗೆ ನೇಮಕಾತಿ?

ಧಾರವಾಡ: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT Dharwad) ಸಿಹಿಸುದ್ದಿ ನೀಡಿದೆ. ಸಂಸ್ಥೆಯಲ್ಲಿ ಖಾಲಿ ಇರುವ 10 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 9, 2026 ಕೊನೆಯ ದಿನವಾಗಿದೆ ಎಂದು ಪ್ರಕಟಿತ ನೇಮಕಾತಿ ಮಾಹಿತಿಯಲ್ಲಿ ತಿಳಿಸಲಾಗಿದೆ. ಯಾವ ಹುದ್ದೆಗಳಿಗೆ ನೇಮಕಾತಿ? ಒಟ್ಟು 10 ಹುದ್ದೆಗಳ ವಿವರ ಹೀಗಿದೆ: ವಿದ್ಯಾರ್ಹತೆ ಮತ್ತು ವಯೋಮಿತಿ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಪದವಿ, […]

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯ ಲಿಂಗಿಗಳು ತೊಂದರೆ ನೀಡುತ್ತಿರುವ ಕುರಿತು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಂತು ವಾಹನ ಸವಾರರಿಗೆ ತೊಂದರೆ ನೀಡುವ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲು ಅರಿವು, ಬಳಿಕ ಕಾನೂನು ಕ್ರಮ ರಾಷ್ಟ್ರೀಯ […]