ಉಡುಪಿ-ಉಚ್ಚಿಲ ದಸರಾ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅದ್ದೂರಿ ಚಾಲನೆ; ಅ.11ರಿಂದ 21ರವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ 21ರವರೆಗೆ ನಡೆಯಲಿರುವ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಚಾಲನೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ […]

ತಿರುಮಲದಲ್ಲಿ ದಾಖಲೆ ಬರೆದ ಅನ್ನದಾನ ಸೇವೆ : 9 ತಿಂಗಳಲ್ಲಿ 9 ಕೋಟಿಗೂ ಅಧಿಕ ಭಕ್ತರಿಗೆ ಅನ್ನಪ್ರಸಾದ ವಿತರಣೆ!

ತಿರುಮಲ : ಕಲಿಯುಗ ವೈಕುಂಠವೆಂದೇ ಪ್ರಸಿದ್ಧವಾಗಿರುವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನ್ನದಾನ ಸೇವೆ ಹೊಸ ದಾಖಲೆ ನಿರ್ಮಿಸಿದೆ. 2026ರ ಜನವರಿ 1ರಿಂದ ಸೆಪ್ಟೆಂಬರ್ 30ರವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಿವಿಧ ಕೇಂದ್ರಗಳ ಮೂಲಕ 9 ಕೋಟಿಗೂ ಅಧಿಕ ಭಕ್ತರಿಗೆ ಅನ್ನಪ್ರಸಾದ ಮತ್ತು ಉಪಹಾರ ವಿತರಿಸಿದೆ. ದೇಶ-ವಿದೇಶಗಳಿಂದ ಪ್ರತಿದಿನ ಲಕ್ಷಾಂತರ ಭಕ್ತರು ಶ್ರೀವಾರಿ ದರ್ಶನಕ್ಕಾಗಿ ಆಗಮಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ ಸುಮಾರು 1.80 ಲಕ್ಷದಿಂದ 1.90 ಲಕ್ಷ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರೆ, […]

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಮೃತದೇಹ ಹಸ್ತಾಂತರಕ್ಕೆ ಬಿಲ್ ಪಾವತಿ ಷರತ್ತು ವಿಧಿಸುವಂತಿಲ್ಲ:

ಬೆಂಗಳೂರು: ರೋಗಿಯ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿ ಕುಟುಂಬಸ್ಥರನ್ನು ಸತಾಯಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಮೃತದೇಹ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ರೂಪಿಸುವ ಚಿಂತನೆ ನಡೆಸಲಾಗುತ್ತಿದ್ದು, ಈ ಮೂಲಕ ಹಣಕ್ಕಾಗಿ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವ ಪದ್ಧತಿಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಯೊಬ್ಬರು ಮೃತಪಟ್ಟ ಬಳಿಕ ಬಿಲ್ ಪಾವತಿಸದಿದ್ದರೆ ಮೃತದೇಹ ಹಸ್ತಾಂತರಿಸಲು ನಿರಾಕರಿಸುವ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದ ಈಗಾಗಲೇ ದುಃಖದಲ್ಲಿರುವ ಕುಟುಂಬಗಳು ಆರ್ಥಿಕ […]

ಉಡುಪಿ: ದನ ಕಳವು ಮಾಡಿ ಕಸಾಯಿಖಾನೆಗೆ ಸಾಗಿಸಲು ಯತ್ನ: ಇಬ್ಬರ ಬಂಧನ – ಹಿರಿಯಡಕ ಪೊಲೀಸರಿಂದ ನಾಲ್ಕು ಜಾನುವಾರುಗಳ ರಕ್ಷಣೆ, ಟೆಂಪೊ ವಶಕ್ಕೆ

ಉಡುಪಿ: ಕಾರ್ಕಳ ತಾಲ್ಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಹಿರಿಯಡಕ ಪೊಲೀಸರು, ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಸಾಗಾಟಕ್ಕೆ ಬಳಸಿದ್ದ ಗೂಡ್ಸ್‌ ಟೆಂಪೊವನ್ನು ವಶಪಡಿಸಿಕೊಂಡಿದ್ದಾರೆ.ಅ. 9ರಂದು ಸಂಜೆ 7.30ರ ಸುಮಾರಿಗೆ ಹರಿಖಂಡಿಗೆಯಿಂದ ಹಿರಿಯಡಕ ಕಡೆಗೆ ಕೆಎ 20 ಎಎ 5197 ನೋಂದಣಿ ಸಂಖ್ಯೆಯ ಗೂಡ್ಸ್‌ ಟೆಂಪೊದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೊಮ್ಮಾರಬೆಟ್ಟು ಗ್ರಾಮದ ಕೊಟ್ನಕಟ್ಟೆ ಬಳಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ನಿಲ್ಲಿಸದೆ […]

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ. 11ರಿಂದ ಅ. 21ರವರೆಗೆ ಸಂಭ್ರಮದ ನವರಾತ್ರಿ ಮಹೋತ್ಸವ

ಮಂದಾರ್ತಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನವರಾತ್ರಿ ವಿಶೇಷ ಪೂಜಾ ಮಹೋತ್ಸವವು ಸಂಭ್ರಮದಿಂದ ನಡೆಯಲಿದೆ.ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 16ರಂದು ಮೂಲ ದೇವಳದ ವತಿಯಿಂದ ಚಂಡಿಕಾಯಾಗ ನೆರವೇರಲಿದೆ.ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ಸವದ ಆಯೋಜಕರು ವಿನಂತಿಸಿದ್ದಾರೆ.