ದಸರಾ ರಜೆ ಹಿನ್ನೆಲೆ: ಬೆಂಗಳೂರಿನಿಂದ 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ

ಬೆಂಗಳೂರು: ದಸರಾ ಹಬ್ಬ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಿದೆ. ಅಕ್ಟೋಬರ್ 16ರಿಂದ 20ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿದ್ದು, ರಜೆ ಮುಗಿಸಿ ರಾಜಧಾನಿಗೆ ಮರಳುವ ಪ್ರಯಾಣಿಕರಿಗಾಗಿ ಅಕ್ಟೋಬರ್ 20 ಮತ್ತು 21ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮ ತಿಳಿಸಿದೆ. ಪ್ರಮುಖ ಬಸ್ […]

ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸಿ ಮೈಸೂರಿನ ಜನರ ಭಾವನೆಗಳಿಗೆ ಧಕ್ಕೆ ತರಲಾಗಿದೆ: ಯದುವೀರ್ ಒಡೆಯರ್ ತೀವ್ರ ಅಸಮಾಧಾನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುತ್ತಿರುವುದಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಸರಾ ಸಂದರ್ಭದಲ್ಲಿ ಕರಾವಳಿಯ ಕಂಬಳವನ್ನು ಆಯೋಜಿಸುವುದು ಮೈಸೂರಿನ ಜನರ ಭಾವನೆಗಳಿಗೆ ಧಕ್ಕೆ ತಂದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ದಸರಾ ಹಾಗೂ ಅರಮನೆಯಲ್ಲಿನ ಸಾಂಪ್ರದಾಯಿಕ ಆಚರಣೆಗಳ ಕುರಿತು ‘ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಪ್ರತಿವರ್ಷದಂತೆ ದಸರಾ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ವಿಚಾರ ಸ್ಥಳೀಯವಾಗಿ ವಿರೋಧಕ್ಕೆ […]