ಸಖತ್ ನಿರೀಕ್ಷೆ ಮೂಡಿಸಿರುವ ಹೈ ಬಜೆಟ್ ಸಿನಿಮಾ ‘ರಾಮಾಯಣ- 1 ನವೆಂಬರ್ 5ರಂದೇ ವಿಶ್ವಾದ್ಯಂತ ತೆರೆಗೆ!

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ರಾಮಾಯಣ ಪಾರ್ಟ್ 1’ ಬಿಡುಗಡೆಯ ದಿನಾಂಕವನ್ನು ಮೂರು ದಿನ ಮುಂಚಿತವಾಗಿ ನಿಗದಿಪಡಿಸಲಾಗಿದೆ. ಈ ಹಿಂದೆ ಭಾರತದಲ್ಲಿ ನವೆಂಬರ್ 8ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದ ಸಿನಿಮಾ, ಇದೀಗ ನವೆಂಬರ್ 5ರಂದು ಭಾರತ ಸೇರಿದಂತೆ ವಿಶ್ವಾದ್ಯಂತ ಏಕಕಾಲಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ. ನವರಾತ್ರಿಯ ಮೊದಲ ದಿನ ಈ ಘೋಷಣೆ ಮಾಡಿರುವ ಚಿತ್ರತಂಡ, ಚಿತ್ರದ ಹೊಸ ಪೋಸ್ಟರ್ನ್ನೂ ಬಿಡುಗಡೆ ಮಾಡಿದೆ. ಇದರಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ಲಕ್ಷ್ಮಣನಾಗಿ ರವಿ […]
ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಪ್ರದೀಪ್ ಶೆಟ್ಟಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತ್ಯುತ್ತಮ ಜೋಡಿ ನೃತ್ಯ, ಅತ್ಯುತ್ತಮ ವೇಷಭೂಷಣ, ಅತ್ಯುತ್ತಮ ಸಮೂಹ ನೃತ್ಯ ಹಾಗೂ ಮಕ್ಕಳ ಅತ್ಯುತ್ತಮ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಅತ್ಯುತ್ತಮ ನವವಿವಾಹಿತ […]
ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಹಬ್ಬದ ಆಚರಣೆ ಹಾಗೂ […]
ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಗ್ರಾಮೀಣ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ.7.5 ಒಳಮೀಸಲಾತಿ

ಬೆಂಗಳೂರು: ರಾಜ್ಯದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೆಡಿಕಲ್, ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಸಂಬಂಧ ‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, […]