ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತುಪಶು ವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆಯ ಉಡುಪಿ ತಾಲೂಕಿಗೆ ಒಳಪಟ್ಟಂತೆ ಗುರಿ ನಿಗಧಿಪಡಿಸಲಾಗಿದ್ದು, ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಪ.ಜಾತಿ/ಪ.ಪಂ/ಹಿoದುಳಿದ ವರ್ಗ/ಸಾಮಾನ್ಯ ವರ್ಗದ ಅರ್ಹ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ […]
ಉಡುಪಿ: ಅ.17 ರಂದು ನೇರ ಸಂದರ್ಶನ

ಉಡುಪಿ: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿಬಸ್ ನಿಲ್ದಾಣದ ಬಳಿ, ಉಡುಪಿ ಇಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.ಗ್ರೋಸ್ಪೆರ್ ಗ್ರೂಪ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್, ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಮತ್ತು ಹೆಚ್.ಆರ್. ಹುದ್ದೆಗಳು ಖಾಲಿ ಇದ್ದು, ಪಿ.ಯು.ಸಿ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ […]
ಉಡುಪಿ: ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅಕ್ಟೋಬರ್ 14: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್ವರ್ಕ್ ಸಂಬOಧಿತ ಸಮಸ್ಯೆಗಳನ್ನು ಪರಿಹರಿಸಿ ಖಾಸಗಿ ಕಂಪನಿಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಸೇವೆ ಒದಗಿಸಬೇಕೆಂದು ಅಧಿಕಾರಿಗಳಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.ಅವರು ಇಂದು ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಬಿ.ಎಸ್.ಎನ್.ಎಲ್ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಉಡುಪಿ ಜಿಲ್ಲೆಯಾದ್ಯಂತ ಇರುವ ಬಿ.ಎಸ್.ಎನ್.ಎಲ್ ಸ್ಥಾವರಗಳನ್ನು 3ಜಿ ಯಿಂದ 4 ಜಿ ಗೆ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಉತ್ತಮ […]
ರಾಜ್ಯದಲ್ಲಿ ನಾಳೆಯಿಂದ ಮಳೆ ಚುರುಕು, ಕರಾವಳಿಯ ಮೂರು ಜಿಲ್ಲೆಗಳಿಗೆ ಹಳದಿ ಅಲರ್ಟ್!

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 14 ಮತ್ತು 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಅಕ್ಟೋಬರ್ 19ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆಯಿದ್ದು, ನೈಋತ್ಯ ಮುಂಗಾರು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ. ಮುಂದಿನ ಎರಡು ದಿನಗಳಲ್ಲಿ ಈಶಾನ್ಯ ಮಾರುತಗಳು ದಕ್ಷಿಣ ಭಾರತದ ಪ್ರದೇಶಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಿಂದ 19ರವರೆಗೆ ಕರ್ನಾಟಕದ […]
ನ್ಯಾಯಬೆಲೆ ಅಂಗಡಿ ಮುಂದೆ ಗಂಟೆಗಟ್ಟಲೇ ಕ್ಯೂ ನಿಲ್ಲೋದು ಬೇಡ :‘ಅನ್ನ ಸೇವೆ’ ಆ್ಯಪ್ ಮೂಲಕ ಮನೆಯಲ್ಲೇ ಇ-ಕೆವೈಸಿ ಮಾಡಿಕೊಳ್ಳಿ! ಇಂದಿನಿಂದ ಶುರುವಾಗಿದೆ ಹೊಸ ಸೇವೆ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು ಇನ್ನು ಮುಂದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಫಲಾನುಭವಿಗಳು ತಮ್ಮ ಮೊಬೈಲ್ ಫೋನ್ ಮೂಲಕವೇ ಇ-ಕೆವೈಸಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ‘ಅನ್ನ ಸೇವೆ’ ಎಂಬ ಮೊಬೈಲ್ ಆ್ಯಪ್ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಿದೆ ರಾಜ್ಯಾದ್ಯಂತ ಆ್ಯಪ್ ಸೇವೆ ವಿಸ್ತರಣೆ ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಈ ಆ್ಯಪ್ಗೆ ಆಗಸ್ಟ್ 1ರಂದು ಚಾಲನೆ ನೀಡಿದ್ದರು. ಆರಂಭದಲ್ಲಿ ಬೆಂಗಳೂರು […]