ಉಡುಪಿಯಲ್ಲಿ ಸ್ಥಳೀಯ ಹವಾಮಾನ ಮಾಹಿತಿ ನೀಡಲು ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಹವಾಮಾನ ಮೇಲ್ವಿಚಾರಣ ವ್ಯವಸ್ಥೆ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಥಳೀಯ ಹವಾಮಾನ ಮತ್ತು ಗಾಳಿಯ ಗುಣಮಟ್ಟದ ಮಾಹಿತಿಯನ್ನು ನೈಜ ಸಮಯದಲ್ಲಿ ದಾಖಲಿಸುವ ಉದ್ದೇಶದಿಂದ “ಸ್ಮಾರ್ಟ್ ವೆದರ್ನೆಟ್” ಎಂಬ ಸುಧಾರಿತಹವಾಮಾನ ಮೇಲ್ವಿಚಾರಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯೋಜನೆಯನ್ನು ಸಂಸ್ಥೆಯ ಆವರಣದಲ್ಲಿ ದಿನಾಂಕ 11 ಅಕ್ಟೋಬರ್ 2026 ರಂದು ಶ್ರೀ ಸೋದೆ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಐಐಟಿ ಧಾರವಾಡದ ನಿರ್ದೇಶಕರಾದ ಡಾ. ವೆಂಕಪ್ಪಯ್ಯ ದೇಸಾಯಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ರಂಗಸ್ವಾಮಿ […]
06 ಮಂದಿ ಶಿಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಅನುದಾನರಹಿತ ಕಾಲೇಜುಗಳು ಪದವಿ ಪೂರ್ವ ಶಿಕ್ಷಣದಲ್ಲಿ ಯಾವುದೇ ರೀತಿಯ ಅನುದಾನವಿಲ್ಲದೇ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜತೆಗೆ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿದೆ. ಆದರೆ ಸರಕಾರಗಳು ಶಿಕ್ಷಣಾಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಬಗ್ಗೆ ಬೇಸರವನ್ನು ಕುಪ್ಮಾ ರಾಜ್ಯ ಸಮಿತಿಯ ಅಧ್ಯಕ್ಷರಾದ ಡಾ.ಎಂ ಮೋಹನ್ ಆಳ್ವ ಅವರು ವ್ಯಕ್ತಪಡಿಸಿದರು. ಅವರು ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇವರ […]
ರೈಲ್ವೆಯಲ್ಲಿ ಕೆಲಸ ಬೇಕಾ? ಇಲ್ಲಿದೆ ಅವಕಾಶ, ಒಮ್ಮೆ ಟ್ರೈ ಮಾಡಿ!

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಅವಕಾಶವಿದ್ದು, ರೈಲ್ವೆ ನೇಮಕಾತಿ ಮಂಡಳಿಯು (RRB) ಒಟ್ಟು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗೂಡ್ಸ್ ಟ್ರೈನ್ ಮ್ಯಾನೇಜರ್, ಸೀನಿಯರ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು […]
ತಾಕತ್ ಇದ್ರೆ ಹೋರಾಟಕ್ಕೆ ಬನ್ನಿ, ನಟ ಸುದೀಪ್ ಗೆ ಸವಾಲು ಹಾಕಿದ ಮಾಜಿ ಸಂಸದ !

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಮದಕರಿ ನಾಯಕ ಜಯಂತೋತ್ಸವ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಅವರನ್ನು ಉದ್ದೇಶಿಸಿ ಮಾಜಿ ಸಂಸದ ವಿಎಸ್ ಉಗ್ರಪ್ಪ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ನಾಯಕ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಸುದೀಪ್ ಅವರಿಗೆ ಉಗ್ರಪ್ಪ ಸವಾಲು ಹಾಕಿದ್ದರು. ಈ ಹೇಳಿಕೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉಗ್ರಪ್ಪ ತಮ್ಮ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಟ ಸುದೀಪ್ ಅವರು ನಾಯಕ ಸಮುದಾಯದ ಹೆಸರಿನಲ್ಲಿ ಗುರುತಿಸಿಕೊಂಡವರು. ನಾಯಕ ಸಮಾಜದ ಜಯಂತಿ ಕಾರ್ಯಕ್ರಮದಲ್ಲಿ ಸುದೀಪ್ […]
ಉಡುಪಿ ಉಚ್ಚಿಲ ದಸರಾದಲ್ಲಿ ಗಮನಸೆಳೆದ ಕುಸ್ತಿ ಪಂದ್ಯ: ಶೌರ್ಯಾಗೆ ‘ಕುವರಿ’, ಪ್ರಕಾಶ್ಗೆ ‘ಕುಮಾರ್’ ಗೌರವ; ಮನೋಜ್ಗೆ ‘ಕೇಸರಿ’ ಪ್ರಶಸ್ತಿ | ಸಮಗ್ರ ತಂಡ ಪ್ರಶಸ್ತಿ ಶಿವಾಜಿ ಫಿಜಿಕಲ್ ಬೋಳಾರ್ಗೆ

ಉಡುಪಿ: ಪ್ರೇಕ್ಷಕರ ಕರತಾಡನ, ಹುರಿದುಂಬಿಸುವ ಘೋಷಣೆಗಳು, ನೆಚ್ಚಿನ ಕುಸ್ತಿಪಟುಗಳ ಗೆಲುವಿಗಾಗಿ ಅಭಿಮಾನಿಗಳ ಹರ್ಷೋದ್ಗಾರ. ಎದುರಾಳಿಯನ್ನು ಮಣಿಸಲು ಪಟ್ಟುಗಳ ಪ್ರಯೋಗ, ಗೆಲುವಿಗಾಗಿ ಕೊನೆಯ ಕ್ಷಣದವರೆಗೂ ಸೆಣಸಾಟ. ಇಂತಹ ರೋಚಕ ಕ್ಷಣಗಳಿಗೆ ಸಾಕ್ಷಿಯಾದದ್ದು ಉಚ್ಚಿಲ ದಸರಾ ಅಂಗವಾಗಿ ಆಯೋಜಿಸಿದ್ದ ಅಂತರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ 232 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಕುಸ್ತಿ […]