ಕಾರ್ಕಳ: ಅ. 9ರಿಂದ ನಾಪತ್ತೆಯಾಗಿದ್ದ ಸುರೇಶ್ ಶೆಟ್ಟಿ ಶವವಾಗಿ ಪತ್ತೆ

ಉಡುಪಿ: ಕಾರ್ಕಳ ತಾಲ್ಲೂಕಿನ ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಣಜಾರು ಗ್ರಾಮದ ಕಡೆಬರ್ಕೆ ನಿವಾಸಿ ಸುರೇಶ್ ಶೆಟ್ಟಿ (51) ಎಂದು ಗುರುತಿಸಲಾಗಿದೆ.ನದಿಯ ದಡದಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸೇತುವೆಯ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಸಂಬಂಧಿಕರು ಮೃತದೇಹದ ಗುರುತು ಪತ್ತೆಹಚ್ಚಿದ್ದಾರೆ.ಸುರೇಶ್ ಶೆಟ್ಟಿ ಅವರು ಅಕ್ಟೋಬರ್ 9ರಂದು ಮಧ್ಯಾಹ್ನ 2 ಗಂಟೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ. ಮನೆಯಿಂದ ಕಟೀಲಿಗೆ […]
ಉಡುಪಿಯ ಕರಾವಳಿ ಆಟೋ ಮೊಬೈಲ್ಸ್ ನಲ್ಲಿ ಉದ್ಯೋಗಾವಕಾಶ

ಕರಾವಳಿ ಆಟೋ ಮೊಬೈಲ್ಸ್ ನಲ್ಲಿ ಉದ್ಯೋಗಾವಕಾಶ ನಡೆಯುತ್ತಿದೆ .ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8050092644
ಅ.15ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಡುಪಿ, ಮಂಗಳೂರಿಗೆ ಭೇಟಿ

ಉಡುಪಿ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.15ರ ಸಂಜೆ ಉಡುಪಿಯ ಉಚ್ಚಿಲ ಹಾಗೂ ಮಂಗಳೂರಿನ ಕುದ್ರೋಳಿಯಲ್ಲಿ ನಡೆಯುತ್ತಿರುವ ದಸರಾ-ನವರಾತ್ರಿ ಮಹೋತ್ಸವಗಳಲ್ಲಿ ಭಾಗವಹಿಸಲು ಕರಾವಳಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಅಂದು ಸಂಜೆ 4ಗಂಟೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಅಲ್ಲಿಂದ ರಸ್ತೆ ಮಾರ್ಗವಾಗಿ ಸಂಜೆ 4:40ಕ್ಕೆ ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿ, ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ರಸ್ತೆ ಮಾರ್ಗವಾಗಿ ಉಚ್ಚಿಲದಿಂದ ಮಂಗಳೂರಿನ ಕುದ್ರೋಳಿಗೆ ತೆರಳುವ […]
ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಪೌರಾಡಳಿತ ಸಚಿವ ಭೇಟಿ

ಕೊಲ್ಲೂರು: ರಾಜ್ಯ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಮಂಗಳವಾರ ಬೆಳಿಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ರಾತ್ರಿ ಕೊಲ್ಲೂರಿಗೆ ಆಗಮಿಸಿ ವಾಸ್ತವ್ಯವಿದ್ದ ಸಚಿವರು ಮಂಗಳವಾರ ಚಂಡಿಕಾಹೋಮ ಸೇವೆ ನೆರವೇರಿಸಿದರು. ದೇವಾಲಯದ ವತಿಯಿಂದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತಕುಮಾರ್ ಶೆಟ್ಟಿ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಸಚಿವರಿಗೆ ಶ್ರೀದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ […]
ಆಸ್ಪತ್ರೆಗಳ ಬಿಲ್ನಲ್ಲಿ ಔಷಧಿ ದರ ನಮೂದು ಆದೇಶಕ್ಕೆ ತಾತ್ಕಾಲಿಕ ತಡೆ: ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿಯಿತಾ ಸರಕಾರ?

ಬೆಂಗಳೂರು: ಆಸ್ಪತ್ರೆಗಳ ಬಿಲ್ನಲ್ಲಿ ಔಷಧಿಗಳ ದರ ಹಾಗೂ ಖರೀದಿ ವೆಚ್ಚದ ವಿವರಗಳನ್ನು ನಮೂದಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ನೀಡಿದ್ದ ಆದೇಶಕ್ಕೆ ಕರ್ನಾಟಕ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಖಾಸಗಿ ಆಸ್ಪತ್ರೆಗಳ ಒಕ್ಕೂಟದೊಂದಿಗೆ ಆರೋಗ್ಯ ಸಚಿವರು ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರ ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಮಣಿದಿದೆಯೇ ಎಂಬ ಪ್ರಶ್ನೆ ಮೂಡಿದೆ. ಅಕ್ಟೋಬರ್ 1ರಂದು ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಈ ಕುರಿತು ಆದೇಶ ಹೊರಡಿಸಿತ್ತು. ನವೆಂಬರ್ 1ರಿಂದ ಆದೇಶ ಜಾರಿಗೆ ಬರಬೇಕಿತ್ತು. […]