108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರದ ಎಚ್ಚರಿಕೆ: ರೋಗಿಗಳಿಗೆ ಸೇವೆ ವ್ಯತ್ಯಯದ ಆತಂಕ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ 108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬುಧವಾರ ರಾತ್ರಿಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿರುವ ಸಿಬ್ಬಂದಿ, ಅಕ್ಟೋಬರ್ 22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ಮುಷ್ಕರದ ಬೆದರಿಕೆಗೆ ಸರ್ಕಾರ ಮಣಿಯುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಕಳೆದ ಒಂದು ತಿಂಗಳಿಂದ ಸರ್ಕಾರದೊಂದಿಗೆ ಹಲವು ಸುತ್ತಿನ ಸಭೆಗಳು ನಡೆದಿದ್ದರೂ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಅಂಬುಲೆನ್ಸ್ ಸಿಬ್ಬಂದಿ ಅಸಮಾಧಾನಗೊಂಡಿದ್ದಾರೆ. […]
ಉಡುಪಿ: ಸರಳ ವಿವಾಹಕ್ಕೆ ಪ್ರೋತ್ಸಾಹಧನ; ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು […]