ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಎಸ್‌ ಟಿ ಮೀಸಲಾತಿಯಲ್ಲಿ ಪುರುಷರಿಗೂ ಅವಕಾಶ ಕಲ್ಪಿಸಲು ಉಮೇಶ ಎ. ನಾಯ್ಕ್ ಮನವಿ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಕ್ಷೇತ್ರಗಳನ್ನು ಮಹಿಳೆಯರಿಗೆ ಮಾತ್ರ ಮೀಸಲಿಡುವುದರಿಂದ ಪರಿಶಿಷ್ಟ ಪಂಗಡದ ಪುರುಷರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ವಂಚನೆಯಾಗುತ್ತಿದೆ ಎಂದು ಆರೋಪಿಸಿರುವ ಚೇರ್ಕಾಡಿಯ ಉಮೇಶ ಎ. ನಾಯ್ಕ್, ಈ ಮೀಸಲಾತಿ ನಿಯಮವನ್ನು ಮರುಪರಿಶೀಲಿಸಿ ಪುರುಷರಿಗೂ ಪ್ರಾತಿನಿಧ್ಯ ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಪರಿಶಿಷ್ಟ ಪಂಗಡದ ಮರಾಠಿ ಸಮುದಾಯಕ್ಕೆ ಸೇರಿದ ತಮಗೂ ಹಾಗೂ ತಮ್ಮ […]