ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದಾದ್ಯಂತ ಹಿಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ರಾಜ್ಯದ ಸಿಹಿ ತಿನಿಸುಗಳ ಮಳಿಗೆಗಳಲ್ಲಿ ಗಂಭೀರ ಲೋಪ:10 ಉದ್ಯಮಿಗಳಿಗೆ ನೋಟಿಸ್!

ಬೆಂಗಳೂರು: ಕರ್ನಾಟಕದಾದ್ಯಂತ ಸಿಹಿ ತಿನಿಸುಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶೇಷ ತಪಾಸಣೆಯಲ್ಲಿ ಹಲವು ಲೋಪಗಳು ಪತ್ತೆಯಾಗಿವೆ. ನಿಯಮ ಉಲ್ಲಂಘಿಸಿದ 10 ಆಹಾರ ಉದ್ಯಮಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯಂತೆ ಒಟ್ಟು 80 ಸಿಹಿ ತಿನಿಸುಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುರಕ್ಷಿತ […]

ವಿಶೇಷ ಪ್ರೋತ್ಸಾಹಧನ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪದವಿಯಲ್ಲಿ ಶೇ.60 ಮೇಲ್ಪಟ್ಟ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸಲು ನವೆಂಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24×7 ಸಹಾಯವಾಣಿ ಸಂಖ್ಯೆ :8277799990 ಗೆ ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ದೂ.ಸಂಖ್ಯೆ: […]

ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ

ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿoದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು, ಈ ಹಿಂದೆ ಇ-ಕೆವೈಸಿ ಮಾಡಿಸಿ 5 ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರವು ಪ್ರಸ್ತುತ ಅಕ್ಟೋಬರ್ 20 ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿರುತ್ತದೆ. ಈ ಹಿಂದೆ ಸೆಪ್ಟಂಬರ್ 30 ನ್ನು ಕೊನೆಯ ದಿನವಾಗಿ ನಿಗದಿಗೊಳಿಸಲಾಗಿದ್ದು, ಈ ಕುರಿತಾಗಿ ಪತ್ರಿಕೆಯ ಮೂಲಕ ಮತ್ತು ನ್ಯಾಯಬೆಲೆ […]