ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಸೇವೆಗೆ ಸ್ಟಾರ್ಲಿಂಕ್ ಸಿದ್ಧ; ರಿಲಯನ್ಸ್ ಹೇಳಿಕೆಗೆ ತಿರುಗೇಟು ನೀಡಿದ ಸ್ಟಾರ್ ಲಿಂಕ್ಸ್

ನವದೆಹಲಿ: ಭಾರತದಲ್ಲಿ ಹೈ-ಸ್ಪೀಡ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಒದಗಿಸಲು ಸಿದ್ಧವಿರುವುದಾಗಿ ಎಲಾನ್ ಮಸ್ಕ್ ಒಡೆತನದ ಸ್ಟಾರ್ಲಿಂಕ್ ಕಂಪನಿ ತಿಳಿಸಿದೆ. ಉಪಗ್ರಹ ಇಂಟರ್ನೆಟ್ ಕ್ಷೇತ್ರದಲ್ಲಿ ಸ್ಪರ್ಧೆಯನ್ನು ಸ್ವಾಗತಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಹೇಳಿಕೆ ನೀಡಿದ ಬೆನ್ನಲ್ಲೇ ಸ್ಟಾರ್ಲಿಂಕ್ ಈ ಪ್ರತಿಕ್ರಿಯೆ ನೀಡಿದೆ. ಸ್ಟಾರ್ಲಿಂಕ್ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ನಿಯಂತ್ರಕ ಸಂಸ್ಥೆಗಳು, ಉದ್ಯಮ ವಲಯ ಹಾಗೂ ದೂರಸಂಪರ್ಕ ಕಂಪನಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿರುವುದಾಗಿ ತಿಳಿಸಿದೆ. ಭಾರತೀಯ ಗ್ರಾಹಕರಿಗೆ ಸುರಕ್ಷಿತವಾಗಿ […]
ಮಂಗಳೂರು MRPL ಸ್ಫೋಟ ದುರಂತ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು; ಮೃತರ ಸಂಖ್ಯೆ 2ಕ್ಕೆ ಏರಿಕೆ

ಮಂಗಳೂರು: ನಗರದ ಎಂಆರ್ಪಿಎಲ್ (MRPL) ತೈಲ ಶುದ್ಧೀಕರಣ ಘಟಕದಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಗುತ್ತಿಗೆ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಮೃತರನ್ನು ಸುರತ್ಕಲ್ನ ಇಡ್ಯಾ ಗ್ರಾಮದ ಕಾನಾ ನಿವಾಸಿ ರಾಜೇಶ್ ಡಿ’ಸಿಲ್ವಾ ಎಂದು ಗುರುತಿಸಲಾಗಿದೆ. ಅವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ಪರಿಣಾಮ ತೀವ್ರ ಸುಟ್ಟ ಗಾಯಗಳಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಯ […]
ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ಪೋಷಕರ ಸಭೆ

ಉಡುಪಿ- ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 17/10/26 ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ.ಗಣನಾಥ್ ಶೆಟ್ಟಿಯವರು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಕಲಿಕೆಯಲ್ಲಿ ಎದುರಾಗುವ ಸವಾಲುಗಳು, ಪರೀಕ್ಷಾ ಸಿದ್ಧತೆ ಮತ್ತು ವಿದ್ಯಾರ್ಥಿಗಳ ಪ್ರಗತಿಯ ಕುರಿತು ಪೋಷಕರಿಗೆ ವಿವರಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಕಾಲೇಜು ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು […]
ಅ. 22ರವರೆಗೆ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ಈಶಾನ್ಯ ಮಾರುತಗಳ ಪ್ರಭಾವ ಹಾಗೂ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಡಲ ತೀರದಲ್ಲಿ ಬಿರುಗಾಳಿ ಬೀಸುವ ಸಂಭವವಿರುವುದರಿಂದ […]
ಕೊಲ್ಲೂರು ಸಮೀಪದ ಮಾಸ್ತಿಕಟ್ಟೆಯಲ್ಲಿ ಭಾರಿ ಗಾತ್ರದ ಹಂದಿ ಪ್ರತ್ಯಕ್ಷ!

ಕೊಲ್ಲೂರು: ನವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿರುವ ನಡುವೆ, ದೇವಸ್ಥಾನದ ಹೊರವಲಯದ ಮಾಸ್ತಿಕಟ್ಟೆಯಲ್ಲಿ ಭಾರಿ ಗಾತ್ರದ ಹಂದಿಯೊಂದು ಕಾಣಿಸಿಕೊಂಡಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಸ್ತಿಕಟ್ಟೆಯ ಮಾಸ್ತಿಯಮ್ಮ ಹಾಗೂ ಇತರ ದೇವರುಗಳ ದರ್ಶನಕ್ಕೆ ಭಕ್ತರು ಆಗಮಿಸುವ ವಾಡಿಕೆಯಿದ್ದು, ಹರಕೆ ಸಲ್ಲಿಸುವುದು ಹಾಗೂ ಬಲಿ ನೀಡುವ ಸಂಪ್ರದಾಯವೂ ಇದೆ. ಕಳೆದ ಎರಡು–ಮೂರು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಗಾತ್ರದ ಹಂದಿಯೊಂದು ಕಾಣಿಸಿಕೊಂಡು ಹೋಗುತ್ತಿರುವುದು ಸ್ಥಳೀಯರ ಕುತೂಹಲಕ್ಕೆ ಕಾರಣವಾಗಿದೆ. ಹಂದಿಯು ಭಕ್ತರು […]