ಕಾರ್ಕಳ: ವಾಲಿಬಾಲ್ ಪಂದ್ಯಾಟದಲ್ಲಿ ಆಭೂತಪೂರ್ವ ಸಾಧನೆಗೈದ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು; ವಿಭಾಗಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ವೆ ಇಲ್ಲಿ ನಡೆದಪ್ರಾಥಮಿಕ ವಿಭಾಗದ 14ರ ವಯೋಮಿತಿಯ ಮೈಸೂರು ವಿಭಾಗ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ. ತಂಡವನ್ನು ಏಳನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್ ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸ ರುಬೇಲ್ ಡಿಸೋಜ, ಪ್ರನ್ವಿ […]
ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಹಳೆಯ ತುಕ್ಕು ಹಿಡಿದ ಹಾಸಿಗೆಗಳ ಸ್ಥಳಾಂತರ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಉಪಕರಣಗಳು ಹಾಗೂ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಇಲ್ಲದೆ ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ತಾಲೂಕು ಆಸ್ಪತ್ರೆಯನ್ನು ಸ್ಥಳಾಂತರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಜಿಲ್ಲೆಯ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಆರೋಪಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 250 ಹಾಸಿಗೆಗಳ, ಆರು ಮಹಡಿಗಳ ನೂತನ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೂಲ ವಿಸ್ತೃತ ಯೋಜನಾ ವರದಿಯ ಪ್ರಕಾರ ಹಾಗೂ ರಾಜ್ಯದ ಇತರ ಜಿಲ್ಲಾ ಆಸ್ಪತ್ರೆಗಳಿಗೆ ಸಮಾನವಾಗಿ ಸಜ್ಜುಗೊಳಿಸದೆ […]
ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ಉದ್ಘಾಟಿಸಿದ ಸಿಎಂ; ಕುದ್ರೋಳಿ ಅಭಿವೃದ್ಧಿಗೆ ಸರ್ಕಾರದ ಬೆಂಬಲ: ಡಿ.ಕೆ. ಶಿವಕುಮಾರ್

ಮಂಗಳೂರು: “ಮೈಸೂರಿನ ದಸರಾ ನಾಡಿನ ರಾಜವೈಭವದ ಪ್ರತೀಕವಾದರೆ, ಮಂಗಳೂರಿನ ಕುದ್ರೋಳಿ ದಸರಾ ಲಕ್ಷಾಂತರ ಜನರ ಶ್ರದ್ಧೆ ಮತ್ತು ಭಕ್ತಿ ವೈಭವದ ಶ್ರೇಷ್ಠ ಸಂಕೇತವಾಗಿದೆ. ಅಲೆಯಿಲ್ಲದೆ ಸಮುದ್ರವಿಲ್ಲ, ಅದೇ ರೀತಿ ಕರಾವಳಿಯಿಲ್ಲದೆ ಕರ್ನಾಟಕವೇ ಪೂರ್ಣವಾಗಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು. ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯಾಗಿರುವ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ಮಂಗಳೂರು ದಸರಾ–2026’ ನವರಾತ್ರಿ ಮಹೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ 8:10ರ ಸುಮಾರಿಗೆ ಜ್ಯೋತಿ ಬೆಳಗಿಸುವ ಮೂಲಕ […]
ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೆಳಕಿನ ಹಬ್ಬವಾದ ದೀಪಾವಳಿ ಹಬ್ಬ ಆಚರಣೆಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯನ್ನು ಜಾಗೃತಿಯಿಂದ ಮಾಡುವುದರೊಂದಿಗೆ ಆಚರಣೆ ಮಾಡಬೇಕು. ಇವುಗಳ ಮಾರಾಟಕ್ಕೆ ಪರವಾನಿಗೆ ನೀಡುವಾಗ ಸುರಕ್ಷತಾ ದೃಷ್ಠಿಯಿಂದ ನಿಯಮಾನುಸಾರ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ […]
ಕನ್ನಡ ರಾಜ್ಯೋತ್ಸವ ವಿಜೃಂಭಣೆ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನವೆಂಬರ್ 1 ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿoದ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 71 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ […]