ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36) ಎಂಬಾತನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ₹85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅ.17ರಂದು ರಾತ್ರಿ 10.30ರ ಸುಮಾರಿಗೆ ಭುಜಂಗ ಪಾರ್ಕ್‌ ಸಮೀಪ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉದ್ಯಾವರದ ಅಂಕುದ್ರು ನಿವಾಸಿಯಾದ ಈತ ಸ್ಕೂಟರ್‌ನ ಡಿಕ್ಕಿಯಲ್ಲಿ ಮಾದಕ ವಸ್ತು […]

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.20 ರಂದು ಶ್ರೀ ಚಂಡಿಕಾಯಾಗ ಹಾಗೂ ರಜತ ರಥೋತ್ಸವ, ಅ.21 ರಂದು ಕದಿರು ಮುಹೂರ್ತ, ವಿಜಯೋತ್ಸವ

ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಕ್ಷೇತ್ರದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ಶರನ್ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅ. 21ರವರೆಗೆ ವಿಜೃಂಭಣೆಯಿಂದ ನಡೆಯಲಿವೆ. ಮಹೋತ್ಸವದ ಅಂಗವಾಗಿ ಪ್ರತಿದಿನ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ತ್ರಿಕಾಲ ಬಲಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪ್ರತಿದಿನ ಸಂಜೆ 7 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಸಂಜೆ 5.30ರಿಂದ 7.15ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಜನಾ ಮಂಡಳಿಗಳಿಂದ […]

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ; ಅ.21 ರವರೆಗೆ ನವರಾತ್ರಿ ವಿಶೇಷ ಪೂಜಾ ಮಹೋತ್ಸವ

ಮಂದಾರ್ತಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ನವರಾತ್ರಿ ವಿಶೇಷ ಪೂಜಾ ಮಹೋತ್ಸವ ಆರಂಭಗೊಂಡಿದ್ದು, ಅ.21 ರವರೆಗೆ ಸಂಭ್ರಮದಿಂದ ನಡೆಯಲಿದೆ. ಅಕ್ಟೋಬರ್ 16ರಂದು ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಮೂಲ ದೇವಳದ ವತಿಯಿಂದ ಚಂಡಿಕಾಯಾಗವು ಸಂಪನ್ನಗೊಂಡಿತು. ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ಸವದ ಆಯೋಜಕರು ವಿನಂತಿಸಿದ್ದಾರೆ.

ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅ.21ರಂದು ವಿಜಯದಶಮಿ, ಅ.27ರಂದು ಚಂಡಿಕಾಯಾಗ ಪೂರ್ಣಾಹುತಿ

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ಶರನ್ನವರಾತ್ರಿ ಮಹೋತ್ಸವ ಆರಂಭವಾಗಲಿದ್ದು, ಅಕ್ಟೋಬರ್ 21ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 27ರಂದು ಚಂಡಿಕಾಯಾಗದ ಪೂರ್ಣಾಹುತಿ ಹಾಗೂ ಮಹಾ ಅನ್ನಸಂತರ್ಪಣೆ ಜರುಗಲಿದೆ. ಮಹೋತ್ಸವದ ಅಂಗವಾಗಿ ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ, ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 20ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ […]

ನವರಾತ್ರಿ ಸಂಭ್ರಮಕ್ಕೆ ದಾಂಡಿಯಾ ಮೆರುಗು

ಉಡುಪಿ: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಯುವ ಘಟಕದ ನೇತೃತ್ವದಲ್ಲಿ ಆಯೋಜಿಸಿದ್ದ 9ನೇ ವರ್ಷದ ಉಡುಪಿ ದಾಂಡಿಯಾ–2026 ಕಾರ್ಯಕ್ರಮವು ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅ.17ರಂದು ಅದ್ಧೂರಿಯಾಗಿ ನಡೆಯಿತು. ನವರಾತ್ರಿ ಸಂಭ್ರಮದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಂದಿ ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪು ಧರಿಸಿ, ಸಂಗೀತದ ಲಯಕ್ಕೆ ತಕ್ಕಂತೆ ದಾಂಡಿಯಾ ನೃತ್ಯದಲ್ಲಿ ಪಾಲ್ಗೊಂಡರು. ಮಕ್ಕಳು, ಯುವಜನರು ಹಾಗೂ ಹಿರಿಯರು ಉತ್ಸಾಹದಿಂದ ಹೆಜ್ಜೆ ಹಾಕಿ ಸಂಭ್ರಮಿಸಿದರು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಕೆ. […]