ಇಂದಿನಿಂದ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ: ಅ. 24ರವರೆಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಾಮರಾಜನಗರ, […]
ಅ. 26ರೊಳಗೆ ರಾಜಣ್ಣಗೆ ಸಚಿವ ಸ್ಥಾನ ನೀಡಿ: ಅನುಪಮಾ ಶೆಣೈ

ಉಡುಪಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಮತ್ತು ‘ವೋಟ್ ಚೋರಿ’ ವಿಚಾರದಲ್ಲಿ ಸತ್ಯ ಮಾತನಾಡಿದ್ದಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಮಾಜಿ ಡಿವೈಎಸ್ಪಿ ಹಾಗೂ ಸಮಾಜಸೇವಕಿ ಅನುಪಮಾ ಶೆಣೈ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 26ರ ವಾಲ್ಮೀಕಿ ಜಯಂತಿಯೊಳಗೆ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಮರುನೇಮಕ ಮಾಡಬೇಕು. ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಮತದಾರರ ಪಟ್ಟಿ ಪರಿಷ್ಕರಣೆ […]
ಉಡುಪಿ ಜಿಲ್ಲೆಯಲ್ಲಿ ಎಂ-ಸ್ಯಾಂಡ್, ಜಲ್ಲಿಕಲ್ಲು ಸಹಿತ ಕಟ್ಟಡ ಸಾಮಗ್ರಿಗಳ ಕೃತಕ ಅಭಾವ ಸೃಷ್ಠಿ

ಉಡುಪಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಎಂ–ಸ್ಯಾಂಡ್, ಜಲ್ಲಿ ಸೇರಿದಂತೆ ವಿವಿಧ ಕಟ್ಟಡ ಸಾಮಗ್ರಿಗಳನ್ನು ಹೊರರಾಜ್ಯಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗಿ, ಬೆಲೆ ಏರಿಕೆಯಾಗುತ್ತಿದೆ. ಜಿಲ್ಲಾಡಳಿತ ಕೂಡಲೇ ಕಠಿಣ ಕ್ರಮ ಕೈಗೊಂಡು ಹೊರರಾಜ್ಯಗಳಿಗೆ ನಡೆಯುತ್ತಿರುವ ಸಾಗಣೆಯನ್ನು ತಡೆಯಬೇಕು. ಇಲ್ಲವಾದಲ್ಲಿ ಲಾರಿ, ಟೆಂಪೋ ಮಾಲಕರು, ಚಾಲಕರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಮುಷ್ಕರ ನಡೆಸಲಾಗುವುದು ಎಂದು ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಎಚ್ಚರಿಕೆ ನೀಡಿದರು. […]
ನವೆಂಬರ್ 1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9ರ ಬಳಿಕ ಆ್ಯಪ್ನಲ್ಲಿ ಹಾಜರಾತಿ ಕಡ್ಡಾಯ

ಬೆಂಗಳೂರು: ಕರ್ನಾಟಕದಾದ್ಯಂತ ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರು ನವೆಂಬರ್ 1ರಿಂದ ರಾತ್ರಿ 9 ಗಂಟೆಯ ನಂತರ ‘ಕರ್ತವ್ಯ’ ಆ್ಯಪ್ ಮೂಲಕ ರಾತ್ರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಲಿದೆ. ವೈದ್ಯಕೀಯ ಸೇವೆ ಅಗತ್ಯವಿರುವ ಸಂದರ್ಭದಲ್ಲಿ ವೈದ್ಯರು ತಮ್ಮ ನಿಯೋಜಿತ ಕೇಂದ್ರಗಳಲ್ಲಿ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಾಯೋಗಿಕವಾಗಿ ಜಾರಿಗೆ ಬರಲಿರುವ ಈ ವ್ಯವಸ್ಥೆಯು ಆರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಿಗೆ ಅನ್ವಯಿಸಲಿದೆ. ಅಕ್ಟೋಬರ್ 17ರಂದು ಹೊರಡಿಸಲಾದ […]
ನ. 5ರೊಳಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ಜಿಲ್ಲಾಸ್ಪತ್ರೆ ಆರಂಭಿಸಿ

ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೊಂದಿಗೆ ಆರಂಭಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭಿಸಬೇಕು. ಜಿಲ್ಲಾಡಳಿತ ನೀಡಿರುವ ಭರವಸೆಯಂತೆ ನವೆಂಬರ್ 5ರೊಳಗೆ ಆಸ್ಪತ್ರೆ ಕಾರ್ಯಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು. ಈ ಕುರಿತು ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯನ್ನು ಆರಂಭಿಸುವಂತೆ ಆಗ್ರಹಿಸಿ ಕರವೇ ನಡೆಸಿದ ಹೋರಾಟದ ಫಲವಾಗಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಆರಂಭಿಸುವ ಭರವಸೆ ನೀಡಿದೆ. […]