ಅ.25ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ

ಉಡುಪಿ: ಕರ್ನಾಟಕ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘ (ರಿ.), ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಸಹಯೋಗದಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ ಮತ್ತು ಕಾರ್ಯಾಗಾರ ಅ.25ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಶಿರೂರು ಮಠ ಹಾಗೂ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮ ಬೆಳಿಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಅಧ್ಯಕ್ಷ ಎಚ್.ಎನ್. ವೆಂಕಟೇಶ್ ತಿಳಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]
ಉಡುಪಿ: ಅ.23ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪಿ ಪ್ರತಿಭಟನೆ

ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಅಕ್ರಮವೆಂದು ಆರೋಪಿಸಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ 23ರಂದು ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು, ನಾಗರಿಕ ವೇದಿಕೆಗಳು ಹಾಗೂ ರಾಜಕೀಯ ಪಕ್ಷಗಳು ಒಗ್ಗೂಡಿ ‘ಊರೂರು ಜಂತರ್ ಮಂತರ್’ ಘೋಷವಾಕ್ಯದಡಿ ಪ್ರತಿಭಟನೆಗೆ ಕರೆ ನೀಡಿವೆ ಎಂದು ಚಿಂತಕ ಪ್ರೊ. ಫಣಿರಾಜ್ ತಿಳಿಸಿದರು. ಉಡುಪಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ವಿರುದ್ಧವಾಗಿ ಎಸ್ಐಆರ್ […]
ಉಡುಪಿ: ಕೃಷ್ಣ ಮಠದಲ್ಲಿ ವಿಜಯದಶಮಿ ಸಂಭ್ರಮ: ತೆನೆಪೂಜೆ

ಉಡುಪಿ: ವಿಜಯದಶಮಿ ಪರ್ವಕಾಲದ ಅಂಗವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ತೆನೆಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೃಷಿ ಪರಂಪರೆ ಹಾಗೂ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಭತ್ತದ ತೆನೆಯನ್ನು ಪೂಜಿಸಿ ಶ್ರೀಕೃಷ್ಣನಿಗೆ ಸಮರ್ಪಿಸುವ ಮೂಲಕ ಸಂಪ್ರದಾಯವನ್ನು ಆಚರಿಸಲಾಯಿತು. ಪರಂಪರೆಯಂತೆ ಭತ್ತದ ತೆನೆಯನ್ನು ಸೋದೆ ಮಠದ ಮುಂಭಾಗದಲ್ಲಿ ವಿಧಿವಿಧಾನಗಳೊಂದಿಗೆ ಪೂಜಿಸಲಾಯಿತು. ಬಳಿಕ ತೆನೆಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಇರಿಸಿ, ಮಂಗಳವಾದ್ಯಗಳ ನಾದದೊಂದಿಗೆ ರಥಬೀದಿಯಲ್ಲಿ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಕೃಷ್ಣ ಮಠಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಠದ ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳು ವಿಶೇಷವಾಗಿ […]
ಅ. 22ರಂದು ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಅ.22ರ ಗುರುವಾರ ರಜೆ ಎಂದು ಶೀಘ್ರವೇ ಘೋಷಣೆಯಾಗಲಿದೆ. ನವರಾತ್ರಿ ಉತ್ಸವದ ಕೊನೆಯ ದಿನದಂದು (ಅ.21) ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗಳಿಗೆ ತೆರಳಲು ಸಮಸ್ಯೆಯಾಗಲಿದೆ. ಹಾಗಾಗಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸಾರ್ವಜನಿಕರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ರ ಗಮನ ಸೆಳೆದಿದ್ದರು. ಆ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಜರಗಿಸುವಂತೆ ಸಚಿವ ಖಾದರ್ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅದರಂತೆ ಅ.22ರ ಗುರುವಾರ ಜಿಲ್ಲೆಯ […]
ಅ. 25ರಂದು ಕೆಮ್ಮಣ್ಣುವಿನಲ್ಲಿ ನವೀಕೃತ ಲಿಟಲ್ ಫ್ಲವರ್ ಸಭಾಭವನ ಉದ್ಘಾಟನೆ

ಉಡುಪಿ: ಕೆಮ್ಮಣ್ಣು ಸಂತ ತೆರೆಸಾ ಚರ್ಚಿನ ಆಡಳಿತಕ್ಕೆ ಒಳಪಟ್ಟ ನವೀಕೃತ ಲಿಟಲ್ ಫ್ಲವರ್ ಸಭಾಭವನ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಅಕ್ಟೋಬರ್ 25 ರಂದು ಭಾನುವಾರ 9.30 ಕ್ಕೆ ಜರುಗಲಿದೆ. ಬೆಳಿಗ್ಗೆ ಸಭಾಭವನ ಉದ್ಘಾಟನೆಯೊಂದಿಗೆ ಪವಿತ್ರ ಕೃತಜ್ಞಾತ ಬಲಿಪೂಜೆ ನೆರವೇರಲಿದೆ. ನವೀಕೃತ ಸಭಾಂಗಣವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಆಶೀರ್ವಚನ ನೆರವೇರಿಸಲಿದ್ದಾರೆ. ಪವಿತ್ರ ಬಲಿಫೂಜೆಯ ಬಳಿಕ ಕಿರು ಸಭಾ ಕಾರ್ಯಕ್ರಮ ನಡೆಯಲಿದ್ದು ಸಭಾಭವನ ದ ನವೀಕರಣಕ್ಕೆ ಸಹಕರಿಸಿದವರನ್ನು ಗುರುತಿಸಿ ಗೌರವಿಸಲಾಗುವುದು. ನವೀಕೃತ ಸಭಾಭವನ […]