ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರಜತ ಮಹೋತ್ಸವದ ಸಂಭ್ರಮ; ಅ. 24ರಂದು ನೂತನ ಕಚೇರಿ ಉದ್ಘಾಟನೆ.

ಉಡುಪಿ: ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ. 24ರಂದು ಸಂಜೆ 4.30ಕ್ಕೆ ಉಡುಪಿಯ ಜೋಡುಕಟ್ಟೆಯ ಆಶ್ರಯ ಟವರ್ಸ್ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಹಿರಿಯ ಸಹಕಾರಿ ಶಂಭು ಶೆಟ್ಟಿ ದೀಪಜ್ವಲನೆಗೈಲಿದ್ದಾರೆ ಎಂದರು.2000ನೇ ಇಸವಿಯಲ್ಲಿ ಶಿವಪಾಡಿ ಕ್ರೆಡಿಟ್ ಕೋ-ಆಪರೇಟಿವ್ […]
ಪಯ್ಯಾರು ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಪಯ್ಯಾರು ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಕ್ಷೇತ್ರದ ತಂತ್ರಿಗಳಾದ ಉದಯ ತಂತ್ರಿಯವರ ಪೌರೋಹಿತ್ಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನೆರವೇರಿದವು.ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳಾದ ದಿವಾಕರ ಬಿ. ಶೆಟ್ಟಿ ಹಾಗೂ ರಾಜೇಶ್ ಮೂಲ್ಯ ಕುತ್ಯಾರು, ಕ್ಷೇತ್ರದ ಅಧ್ಯಕ್ಷರಾದ ಜಗದೀಶ್ ನಾಯ್ಕ್, ಕಾರ್ಯದರ್ಶಿ ರವಿರಾಜ್ ನಾಯ್ಕ್, ಅರ್ಚಕರಾದ ಮಾಧವ ನಾಯ್ಕ್ ಪಯ್ಯಾರು, […]
ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರದ ಕ್ರಮ!

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚದಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವುದರ ಜೊತೆಗೆ, ಪ್ರಮುಖ ಚಿಕಿತ್ಸೆಗಳ ಏಕರೂಪದ ದರ ನಿಗದಿಪಡಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೆಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಚಿಕಿತ್ಸೆಗೆ ವಿಭಿನ್ನ ದರ ವಿಧಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಚಿಕಿತ್ಸೆ ಆರಂಭಿಸುವ ಮೊದಲೇ ಅದರ ವೆಚ್ಚದ ಮಾಹಿತಿ ರೋಗಿಗಳಿಗೆ ಲಭ್ಯವಾಗಬೇಕು ಹಾಗೂ ಆಸ್ಪತ್ರೆಗಳ ಬಿಲ್ಗಳ ಬಗ್ಗೆ ಸ್ಪಷ್ಟತೆ ಇರಬೇಕು […]
ಮೂಡುಬಿದಿರೆ: ವಿದ್ಯುತ್ ಶಾಕ್ಗೆ ತಾಯಿ-ಮಗ ಬಲಿ

ಮೂಡುಬಿದಿರೆ: ವಿದ್ಯುತ್ ಶಾಕ್ ತಗುಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ನಡೆದಿದೆ. ಮೃತರನ್ನು ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಹೋಲಿ ರೋಸರಿ ಶಾಲೆಯ ವಿದ್ಯಾರ್ಥಿಯಾಗಿದ್ದ ಶೋನ್, ಬೆಳಿಗ್ಗೆ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಎಂದು […]
ಗೃಹಜ್ಯೋತಿಯಿಂದ 1.3 ಲಕ್ಷ ಗ್ರಾಹಕರು ಹೊರಗೆ – ಅ. 31ರೊಳಗೆ ದಾಖಲೆ ಸಲ್ಲಿಸಲು ಬೆಸ್ಕಾಂನಿಂದ ಅವಕಾಶ

ಬೆಂಗಳೂರು: ಗೃಹಜ್ಯೋತಿ ಯೋಜನೆಯಿಂದ (Gruha Jyothi Scheme) 1.3 ಲಕ್ಷ ಗ್ರಾಹಕರು ಹೊರಗುಳಿದಿದ್ದಾರೆ ಎಂಬ ವಿಚಾರ ಚರ್ಚೆಗೆ ಬಂದಿದೆ. ಆದರೆ, ಈ ಗ್ರಾಹಕರನ್ನು ಯೋಜನೆಯಿಂದ ತಿರಸ್ಕರಿಸಿಲ್ಲ, ಬದಲಿಗೆ ವಿವಿಧ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ ಅಷ್ಟೇ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ವಿವಿಧ ಕಾರಣಗಳಿಂದ ಗೃಹಜ್ಯೋತಿ ಯೋಜನೆಯ ಸಮೀಕ್ಷೆಯಲ್ಲಿ ಭಾಗಿಯಾಗದ ಗ್ರಾಹಕರಿಗೆ ಬೆಸ್ಕಾಂ ಮತ್ತೊಂದು ಅವಕಾಶ ನೀಡಿದೆ. ವಿಶೇಷವಾಗಿ, ಅಪಾರ್ಟ್ಮೆಂಟ್ಗಳಿಗೆ ಸಮೀಕ್ಷೆ ನಡೆಸಲು ತೆರಳಿದ ಬೆಸ್ಕಾಂ ಸಿಬ್ಬಂದಿಗೆ ಪ್ರವೇಶ ಸಿಗದ ಹಿನ್ನೆಲೆಯಲ್ಲಿ ಹಲವು ನಿವಾಸಿಗಳು ಸಮೀಕ್ಷೆಯಿಂದ ವಂಚಿತರಾಗಿದ್ದಾರೆ. ಹೀಗಾಗಿ, ಗೃಹಜ್ಯೋತಿ […]