ಉಡುಪಿ: ಉದ್ಯಮಿಗಳಿಗೆ ಕೋಟ್ಯಂತರ ರೂ.ಗೆ ಬೇಡಿಕೆ, ಜೀವ ಬೆದರಿಕೆ: ಓರ್ವನ ಬಂಧನ

ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ಸುರೇಶ್ ಅಮೀನ್ (38) ಬಂಧಿತ ಆರೋಪಿ. ಭೂಗತ ಪಾತಕಿ ಹೇಮಂತ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್‌ ಸಂಖ್ಯೆಗಳು ಮತ್ತು ಇತರ ಮಾಹಿತಿಗಳನ್ನು ಒದಗಿಸುವ ಮೂಲಕ ಕೃತ್ಯದಲ್ಲಿ […]

ಉಡುಪಿ: ನೂತನ ಜಿಲ್ಲಾಸ್ಪತ್ರೆಗೆ ಹಳೆಯ ಉಪಕರಣ ಅಳವಡಿಸಿದರೆ ತೀವ್ರ ಹೋರಾಟ: ತುಳುನಾಡ ರಕ್ಷಣಾ ವೇದಿಕೆ ಎಚ್ಚರಿಕೆ

ಉಡುಪಿ: ನಗರದಲ್ಲಿ ₹110 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆಗೆ ಹಳೆಯ ಆಸ್ಪತ್ರೆಯ ಬೆಡ್‌ಗಳು, ಸ್ಕ್ಯಾನಿಂಗ್ ಯಂತ್ರಗಳು ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಯ ಉಪಕರಣಗಳನ್ನು ಸ್ಥಳಾಂತರಿಸುವುದಕ್ಕೆ ತುಳುನಾಡ ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ. ನೂತನ ಆಸ್ಪತ್ರೆಯಲ್ಲಿ ಹಳೆಯ ಉಪಕರಣಗಳನ್ನು ಅಳವಡಿಸಿ ಉದ್ಘಾಟನೆಗೆ ಮುಂದಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಎಚ್ಚರಿಕೆ ನೀಡಿದ್ದಾರೆ. ನೂತನ ಜಿಲ್ಲಾಸ್ಪತ್ರೆಯು ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿರೀಕ್ಷೆ […]

ವಾಟ್ಸಾಪ್, ಟೆಲಿಗ್ರಾಂ ಬಳಕೆಗೆ ಬರಲಿದೆ ಹೊಸ ನಿಯಮ: ಮೆಸೇಜಿಂಗ್ ಆ್ಯಪ್‌ಗಳನ್ನು ಬಳಸಲು ಸಿಮ್ ಕಾರ್ಡ್ ಕಡ್ಡಾಯ

ನವದೆಹಲಿ: ಭಾರತದಲ್ಲಿ ಸೈಬರ್ ವಂಚನೆ ಹಾಗೂ ನಕಲಿ ಕರೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ದೂರಸಂಪರ್ಕ ಇಲಾಖೆ (DoT) ಸಿಮ್ ಬೈಂಡಿಂಗ್ ನಿಯಮ ಜಾರಿಗೆ ತರಲು ಮುಂದಾಗಿದೆ. ಈ ನಿಯಮದ ಅನ್ವಯ, ಮೆಸೇಜಿಂಗ್ ಆ್ಯಪ್‌ಗಳನ್ನು ಬಳಸಲು ನೋಂದಾಯಿತ ಸಕ್ರಿಯ ಸಿಮ್ ಕಾರ್ಡ್ ಮೊಬೈಲ್‌ನಲ್ಲಿರುವುದು ಕಡ್ಡಾಯವಾಗಲಿದೆ ಎಂದು ವರದಿಯಾಗಿದೆ. 2027ರ ಜನವರಿ 1ರಿಂದ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದ್ದು, ವಾಟ್ಸಾಪ್, ಟೆಲಿಗ್ರಾಂ ಸೇರಿದಂತೆ ಹಲವು ಆ್ಯಪ್‌ಗಳ ಬಳಕೆದಾರರ ಮೇಲೆ ಪರಿಣಾಮ ಬೀರಬಹುದು. ಏನಿದು ಸಿಮ್ ಬೈಂಡಿಂಗ್? ಇಲ್ಲಿಯವರೆಗೆ ವಾಟ್ಸಾಪ್‌ನಂತಹ […]

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

ಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ (Dasara) ಕೂಡ ಯಶಸ್ವಿಯಾಗಿ ನೆರವೇರಿದೆ. ಆದ್ರೆ ದಸರಾದಲ್ಲಿ ನಡೆದ ಕೆಲ ಘಟನೆಗಳ ಬಗ್ಗೆ ಈಗ ಅಪಸ್ವರ ಎದ್ದಿದೆ. ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು, ಶಿಷ್ಟಾಚಾರ ಪಟ್ಟಿಯಲ್ಲಿ […]

ಮಾಬುಕಳ: ಸೈಕಲ್ ಗೆ ಲಾರಿ ಡಿಕ್ಕಿ; ಸೈಕಲ್ ಸವಾರ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್‌ನಲ್ಲಿ ಲಾರಿಯೊಂದು ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಬಾಳ್ಕುದ್ರು ನಿವಾಸಿ ರೊನಾಲ್ಡ್ ಲೂವಿಸ್ (62) ಎಂದು ಗುರುತಿಸಲಾಗಿದೆ. ಅವರು ಹಂಗಾರಕಟ್ಟೆ ಅಂಚೆ ಕಚೇರಿಯಲ್ಲಿ ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ರೊನಾಲ್ಡ್ ಅವರು ಸೈಕಲ್‌ನಲ್ಲಿ ಹಂಗಾರಕಟ್ಟೆಯಿಂದ ಮಾಬುಕಳ ಸರ್ಕಲ್‌ಗೆ ಬಂದು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ, […]