ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡು ಚಿನ್ನ; ವಿಶ್ವ ದಾಖಲೆ ನಿರ್ಮಿಸಿದ ಕ್ರೀಡಾಪಟುಗಳು

ನಗೋಯಾ: ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು, ಸಂದೀಪ್ ಸಿಂಗ್ ಮನ್ ಮತ್ತು ಹ್ಯಾನಿ ಅವರು ಕ್ರಮವಾಗಿ ಪುರುಷರ 400 ಮೀಟರ್ ಓಟ ಹಾಗೂ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಐಚಿ ನಗೋಯಾದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಸಂದೀಪ್ ಸಿಂಗ್ ಮನ್ ಅವರು ಪುರುಷರ 400 ಮೀಟರ್ ಓಟವನ್ನು 52.28 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಓಟದ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡ ಅವರು, ಸೌದಿ ಅರೇಬಿಯಾದ ಅಲ್ಸಾನಾ ನೂರ್ ಅವರ […]

ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜ್: ಸಿಎ ಇಂಟರ್ಮಿಡಿಯೇಟ್ ಫಲಿತಾಂಶ ಮೊಹಮ್ಮದ್ ರಿಝಾನ್‌ಗೆ ಅಖಿಲ ಭಾರತ 35ನೇ ರ‍್ಯಾಂಕ್

ಕಟಪಾಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸೆಪ್ಟೆಂಬರ್ 2026ರ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ರಿಝಾನ್ ಅವರು ಒಟ್ಟು 449 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ 35ನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಉಡುಪಿಯ ಉದ್ಯಾವರದ ಆಸಿಫ್ ಅಜೀಜ್ ಮತ್ತು ರಿಝ್ವಾನಾ ಆಸಿಫ್ ದಂಪತಿಯ ಪುತ್ರರಾದ ಮೊಹಮ್ಮದ್ ರಿಝಾನ್ ಅವರು ತಮ್ಮ ಪರಿಶ್ರಮ, […]

ವಾಲಿಬಾಲ್ ಪಂದ್ಯಾಟದಲ್ಲಿ ಸಾಧನೆಯ ಶಿಖರವೇರಿದ ಕ್ರೈಸ್ಟ್ಕಿಂಗ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು; ರಾಜ್ಯಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ರಾಜ್ಯ ಶಿಕ್ಷಣ ಇಲಾಖೆ ನಡೆಸುವ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಸಾಧನೆಯ ಹೊಸ ಮೈಲುಗಲ್ಲೊಂದನ್ನು ಸ್ಥಾಪಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಜಿಲ್ಲೆ ಇವರ ವತಿಯಿಂದ ಗಿಬ್ ಪ್ರೌಢಶಾಲೆ, ಕುಮಟಾ ಇಲ್ಲಿ ನಡೆದ ಪ್ರಾಥಮಿಕ ವಿಭಾಗದ 14ರ ವಯೋಮಿತಿಯ ರಾಜ್ಯ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ. […]