ಮಂಗಳೂರು: ಸಂತ ಅಲೋಶಿಯಸ್ ವಿವಿಯಲ್ಲಿ ಸುಧಾರಿತ ತಂತ್ರಜ್ಞಾನ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಸಂತ ಅಲೋಶಿಯಸ್ (ಪರಿಗಣಿತ) ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸ್ನಾತಕೋತ್ತರ ವಿಭಾಗಗಳ ಆಶ್ರಯದಲ್ಲಿ ಸುಧಾರಿತ ಮಾಹಿತಿ ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ನಿರ್ವಹಣೆ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ SACAIM 2026 ಅಕ್ಟೋಬರ್ 22ರಂದು ನಗರದ ಅಲೋಶಿಯಸ್ ವಿವಿಯ ಎಐಮಿಟ್ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು. ಸಂಶೋಧಕರು, ಅಧ್ಯಾಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತಂದು ಸಂಶೋಧನಾ ವಿಚಾರಗಳನ್ನು ಹಂಚಿಕೊಳ್ಳಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಕುರಿತು ಚರ್ಚಿಸಲು ಸಮ್ಮೇಳನ ಆಯೋಜಿಸಲಾಗಿದೆ. ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಮಾಹಿತಿ […]

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ

ಕಟಪಾಡಿ: ಉಡುಪಿ ಜಿಲ್ಲೆಯ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಮೈದಾನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ಅಕ್ಟೋಬರ್ 23 ಮತ್ತು 24ರಂದು ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳ ಮಹಿಳಾ ತಂಡಗಳು ಭಾಗವಹಿಸಿ ತಮ್ಮ […]

ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿಎಚ್.ಡಿ. ಪದವಿ

ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿ, ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ರವರು ಪದವಿ ಪ್ರದಾನ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಶ್ಮಿ ಶೆಟ್ಟಿಯವರು ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ರ ಅನುಷ್ಠಾನ: ಕರ್ನಾಟಕದ ಗ್ರಾಮೀಣ ರಾಮನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಅನುಭವಗಳ […]

ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ಸೋಮವಾರ ನಡೆಯಿತು. ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ, ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಳಿಕ ಪ್ರತಿಕೃತಿ ದಹಿಸಿ […]