ಕೆಮ್ಮಣ್ಣು ಚರ್ಚಿನ ನವೀಕೃತ ಲಿಟಲ್ ಫ್ಲವರ್ ಸಭಾಭವನ ಲೋಕಾರ್ಪಣೆ

ಉಡುಪಿ: ಸಮುದಾಯ ಭವನಗಳು ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂ|ಸ್ಟೀಫನ್ ಡಿಸೋಜಾ ಹೇಳಿದರು. ಅವರು ಭಾನುವಾರ ಕೆಮ್ಮಣ್ಣು ಸಂತ ತೆರೆಸಾ ಚರ್ಚಿನ ಆಡಳಿತಕ್ಕೆ ಒಳಪಟ್ಟ ನವೀಕೃತಗೊಂಡ ಲಿಟ್ಲ್ ಫ್ಲವರ್ ಸಭಾ ಭವನದ ಆಶೀರ್ವಚನ ನೆರವೇರಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭಾಭವನದಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದೇ ಸೂರಿನಡಿ ನಡೆಯುವುದರಿಂದ ಜನರು ಪರಸ್ಪರ ಭೇಟಿಯಾಗಲು, ಸಂವಹನ ನಡೆಸಲು ಮತ್ತು ಒಬ್ಬರನ್ನೊಬ್ಬರು […]

ಕೋಟ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಹಿರಿಯ ಆರ್‌ಎಸ್‌ಎಸ್ ಮುಖಂಡ ಸ್ಥಳದಲ್ಲೇ ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸೈಕಲ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ […]

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ‘ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ: ಡಿ.ಕೆ. ಶಿವಕುಮಾರ್

ಬೆಳಗಾವಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ‘ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಣಿ ಕಿತ್ತೂರು ಚೆನ್ನಮ್ಮ ಅವರ ಇತಿಹಾಸ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದರು. ಕಿತ್ತೂರು ಕೋಟೆಯ ಮರುಸೃಷ್ಟಿ ಹಾಗೂ ಅಭಿವೃದ್ಧಿಗೆ ಅನುದಾನ ನೀಡುವಂತೆ ಸ್ಥಳೀಯ ಶಾಸಕ ಬಾಬಾಸಾಹೇಬ್ ಪಾಟೀಲ್ ಮನವಿ […]

ಮೋದಿ ಕುರಿತು ಖರ್ಗೆ ಹೇಳಿಕೆ ಖಂಡಿಸಿ ಇಂದು ದೇಶಾದ್ಯಂತ ಬಿಜೆಪಿ ಪ್ರತಿಭಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಅವರ ತಂದೆಯ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀಡಿರುವ ಹೇಳಿಕೆಯನ್ನು ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ (BJP) ನಿರ್ಧರಿಸಿದೆ. ಬಿಹಾರದ ಮೊದಲ ಮುಖ್ಯಮಂತ್ರಿ ಶ್ರೀಕೃಷ್ಣ ಸಿಂಗ್ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಿಕರೊಬ್ಬರು `ಪ್ರಧಾನಿ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, `ಮೋದಿ ಕಾ ಬಾಪ್ ಭೀ ಜಾಯೇಗಾ’ (ಮೋದಿ ಅಪ್ಪನೂ ಹೋಗಬೇಕು) ಎಂದು […]

ಹೆಚ್‌ಡಿಕೆಗೆ ಕೌಂಟರ್‌ ಕೊಡಲು ಡಿಕೆಶಿ ಪ್ಲ್ಯಾನ್‌ – ಮಂಡ್ಯದಲ್ಲಿ ಕಾರ್ಯಕ್ರಮಕ್ಕೆ ಬೃಹತ್‌ ವೇದಿಕೆ ಸಜ್ಜು

ಮಂಡ್ಯ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರಿಗೆ (H.D Kumaraswamy) ಕೌಂಟರ್‌ ಕೊಡಲು ಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಅವರು ಸಜ್ಜಾಗಿದ್ದಾರೆ. ಇದಕ್ಕಾಗಿ ಅ.31 ರಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮಕ್ಕೆ ಬೃಹತ್‌ ವೇದಿಕೆ ಸಿದ್ಧವಾಗಿದೆ. ಮಂಡ್ಯದಲ್ಲಿ (Mandya) ಕೈಗಾರಿಕೆ ಸ್ಥಾಪನೆಗೆ ಜಾಗ ಕೊಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ ಬರೆದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಹೆಸರಿನಲ್ಲಿ ಕುಮಾರಸ್ವಾಮಿಯವರಿಗೆ ಕೌಂಟರ್ ಕೊಡಲು ಸಿಎಂ ಮುಂದಾಗಿದ್ದಾರೆ. ಈ ವೇದಿಕೆಯಲ್ಲಿ ನೂರಾರು ಕೋಟಿ […]