ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದ ಚಿರತೆ ಸೆರೆ

ಉಡುಪಿ: ನಾಯಿಯನ್ನು ಅಟ್ಟಿಸಿಕೊಂಡು ಹೋಗುವಾಗ ಆವರಣವಿಲ್ಲದ ತೆರೆದ ಬಾವಿಗೆ ಬಿದ್ದ ಬೃಹತ್ ಗಾತ್ರದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿದು ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ನಿಟ್ಟೆ ಗ್ರಾಮದ ಮುಜಕಿಲದಲ್ಲಿ ನಿವಾಸಿ ಅಂತೋನಿ ಅವರ ಮನೆಯ ನಾಯಿಯನ್ನು ಹಿಡಿಯಲು ಚಿರತೆ ಬೆನ್ನಟ್ಟಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಆವರಣವಿಲ್ಲದ ತೆರೆದ ಬಾವಿಗೆ ಬಿದ್ದಿದೆ. ಬಾವಿಯ ಪೊಟರೆಯೊಳಗೆ ಸೇರಿಕೊಂಡಿದ್ದ ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಾರ್ಕಳ ಅರಣ್ಯ […]

ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಕರಾವಳಿ ಕನ್ನಡಿಗರಿಗೆ ಗುಡ್ ನ್ಯೂಸ್: ಮಂಗಳೂರಿನಿಂದ ಶುರುವಾಗಿದೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹೊಸ ಸೇವೆ ವಿಮಾನ ಸೇವೆ!

ಮಂಗಳೂರು: ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಕರಾವಳಿ ಕನ್ನಡಿಗರಿಗೆ ಅನುಕೂಲವಾಗುವಂತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಸ್ ಅಲ್ ಖೈಮಾಗೆ ನೇರ ವಿಮಾನ ಸೇವೆ ಆರಂಭವಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಈ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ವಿಮಾನದಲ್ಲಿ 146 ಪ್ರಯಾಣಿಕರು ಸೋಮವಾರ ಆರಂಭಗೊಂಡ ಉದ್ಘಾಟನಾ ಹಾರಾಟದಲ್ಲಿ ಮಂಗಳೂರಿನಿಂದ ರಾಸ್ ಅಲ್ ಖೈಮಾಗೆ ತೆರಳಿದ IX 871 ವಿಮಾನದಲ್ಲಿ 146 ಪ್ರಯಾಣಿಕರು ಪ್ರಯಾಣಿಸಿದರು. ಪೈಲಟ್-ಇನ್-ಕಮಾಂಡ್ ತೇಜ್ […]

ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

ವಿದ್ಯಾರ್ಥಿ ಅಬ್ದುಲ್ ರಝಿದ್‌ಗೆ ಒಂದು ಲಕ್ಷ ರೂ. ಬಹುಮಾನ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗದ ವತಿಯಿಂದ ಧರ್ಮಪ್ರಾಂತ್ಯದ ವ್ಯಾಪ್ತಿಯ 124 ಧರ್ಮಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಉಳಿವಿಗಾಗಿ ಪ್ರತಿಜ್ಞಾ ಆಂದೋಲನ 2026’ ಪರಿಸರ ಜಾಗೃತಿ ಅಭಿಯಾನದಲ್ಲಿ 1,36,966 ಮಂದಿ ಭಾಗವಹಿಸಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಅ. 25ರಂದು ಸುರತ್ಕಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಅಭಿಯಾನದ ಅಂಗವಾಗಿ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದವರ ಪೈಕಿ ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. […]

ಸಿಎ ಇಂಟರ್ಮಿಡಿಯೇಟ್ ಫಲಿತಾಂಶ : ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಸೆಪ್ಟೆಂಬರ್ 2026ರ ಸಿಎಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ (ಡೇ &ಇವನಿಂಗ್) ಹಾಗೂ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್ ನ (ಡೇ & ಇವನಿಂಗ್), ತ್ರಿಶಾ ಕ್ಲಾಸಸ್ನಲ್ಲಿ ಒಟ್ಟು 83 ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ. ಎರಡು ಗ್ರೂಪ್ ಗಳಲ್ಲಿ ಉತ್ತೀರ್ಣರಾದ ಕಟಪಾಡಿಯ ವಿದ್ಯಾರ್ಥಿಗಳುಮೊಹಮ್ಮದ್ ರಿಝಾನ್ (449), ರಕ್ಷತ್ (386), ಪ್ರಜ್ವಲ್ […]

ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆ: ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್

ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ನಡೆಸಿದ್ದ ಸಿಬ್ಬಂದಿಗೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಪ್ರಕರಣದ ಆರಂಭದಿಂದ ಅಂತಿಮ ಹಂತದವರೆಗೆ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪ್ರಕರಣದಲ್ಲಿ ಆರಂಭಿಕ ಹಂತದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಮುಂದಾಗಿದ್ದಾರೆ. ಅಕ್ಟೋಬರ್ 30ರ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಇದೇ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ […]