Flight Service: ಗಲ್ಫ್‌ನಲ್ಲಿ ನೆಲೆಸಿರುವ ಕರಾವಳಿ ಜನರಿಗೆ ಭರ್ಜರಿ ಸಿಹಿ ಸುದ್ದಿ, ಈ ಹೊಸ ವಿಮಾನ ಸೇವೆಯಿಂದ ಸಮಯ ಮತ್ತು ಹಣ ಎರಡೂ ಉಳಿತಾಯ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇಯ ರಾಸ್ ಅಲ್ ಖೈಮಾಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೇರ ವಿಮಾನ ಸೇವೆ ಆರಂಭಗೊಂಡಿದೆ. ವಾರದಲ್ಲಿ ಎರಡು ದಿನ ಈ ವಿಮಾನ ಸಂಚರಿಸಲಿದೆ. ಮಂಗಳೂರು: ಯುಎಇ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಅರಸಿ ಹೋಗಿರುವ ಕರಾವಳಿ ಕನ್ನಡಿಗರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅತ್ಯಂತ ಸಂತಸದ ಸುದ್ದಿಯೊಂದನ್ನು ನೀಡಿದೆ! ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಪ್ರಮುಖ ನಗರವಾದ ರಾಸ್ ಅಲ್ ಖೈಮಾಗೆ ನೇರ ವಿಮಾನ ಸೇವೆ ಅಧಿಕೃತವಾಗಿ ಆರಂಭಗೊಂಡಿದೆ. […]

ಟೆಕ್ ದೈತ್ಯ ಮೈಕ್ರೋಸಾಫ್ಟ್ ನಲ್ಲಿ ಭಾರೀ ಉದ್ಯೋಗ ಕಡಿತ: ಭಾರತದ ಉದ್ಯೋಗಿಗಳಿಗೂ ಕೆಲಸ ಕಳೆದುಕೊಳ್ಳುವ ಸಂಕಷ್ಟ!

ವಾಷಿಂಗ್ಟನ್: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಸೌಕರ್ಯಗಳ ಮೇಲೆ ಬೃಹತ್ ಬಂಡವಾಳ ಹೂಡಿಕೆ ಮಾಡುತ್ತಿರುವ ಟೆಕ್ ದೈತ್ಯ ಮೈಕ್ರೋಸಾಫ್ಟ್ (Microsoft) ವೆಚ್ಚ ನಿಯಂತ್ರಣದ ಭಾಗವಾಗಿ ಭಾರತ, ಅಮೆರಿಕ, ಬ್ರಿಟನ್ ಹಾಗೂ ಕೆನಡಾದಲ್ಲಿನ ತನ್ನ ಅರ್ಹ ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿರ್ಗಮನ ಆಫರ್ (Voluntary Buyout Programme) ಪ್ರಕಟಿಸಿದೆ. ಈ ಯೋಜನೆಯು ಸಂಸ್ಥೆಯ ಜಾಗತಿಕ ಕಾರ್ಯಪಡೆಯ ಶೇ.25ಕ್ಕೂ ಹೆಚ್ಚು, ಅಂದರೆ ಸುಮಾರು 60,000 ಉದ್ಯೋಗಿಗಳನ್ನು ಒಳಗೊಳ್ಳುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿ ಮಾಡಿದೆ ಭಾರತ, ಅಮೆರಿಕ, ಯುನೈಟೆಡ್ ಕಿಂಗ್‌ಡಮ್ (UK) ಹಾಗೂ […]

Mysuru Dasara: ‘ನಮ್ದು ಪ್ರಜಾಪ್ರಭುತ್ವ, ಇದು ಸರ್ಕಾರದ ದಸರಾ’; ಪ್ರಮೋದಾ ದೇವಿ ಬೇಸರಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಉತ್ತರ

ದಸರಾದಲ್ಲಿ ನಡೆದ ಕೆಲ ವಿಚಾರಗಳ ಬಗ್ಗೆ ಪ್ರಮೋದಾದೇವಿ ಒಡೆಯರ್ ಅವರು ಸುದೀರ್ಘ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತಾಡಿದ ಸಿಎಂ ಡಿಕೆ ಶಿವಕುಮಾರ್ ಅವರು ಖಡಕ್ ಉತ್ತರ ನೀಡಿದ್ದಾರೆ. ಬೆಳಗಾವಿ (ಅ.27): ಈ ಬಾರಿಯ ನಾಡಹಬ್ಬ ದಸರಾ ಆಯೋಜನೆಯಲ್ಲಿ ನಡೆದ ಕೆಲ ಘಟನೆ ಹಾಗೂ ವಿಚಾರಗಳ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್​ ಅವರು ಅಸಮಾಧಾನ ಹೊರಹಾಕಿ ಸರ್ಕಾರಕ್ಕೆ ಪತ್ರ ಬರೆದಿದ್ರು. ಈ ಬಗ್ಗೆ ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್​ ಅವರು ಪ್ರತಿಕ್ರಿಯಿಸಿದ್ದು, […]

ಕ್ಯಾನ್ಸರ್ ಔಷಧಗಳ ದರ ಶೇ.70ರವರೆಗೆ ಇಳಿಕೆ: ನವೆಂಬರ್ 9ರಿಂದ ಹೊಸ ದರ ಜಾರಿ

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸಾ ವೆಚ್ಚದ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರದ (NPPA) ಆದೇಶದ ಮೇರೆಗೆ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಟೊರೆಂಟ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್ ತನ್ನ ಪ್ರಮುಖ ಕ್ಯಾನ್ಸರ್ ಔಷಧಗಳ ಗರಿಷ್ಠ ಚಿಲ್ಲರೆ ಮಾರಾಟ ದರವನ್ನು (MRP) ಶೇ.70ರವರೆಗೆ ಕಡಿತಗೊಳಿಸಿದೆ. ಈ ಕುರಿತು ಸಂಸ್ಥೆಯು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಪರಿಷ್ಕೃತ ದರಗಳು ನವೆಂಬರ್ 9ರಿಂದ ಜಾರಿಗೆ ಬರಲಿವೆ. ಇದರ ಅನ್ವಯ, ಸಂಸ್ಥೆ ಉತ್ಪಾದಿಸುವ ಜೀವ […]

ಅ. 29 ರಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.ಈ ಸಂದರ್ಭದಲ್ಲಿ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು.ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಐವನ್ […]