ಕ್ಯಾನ್ಸರ್ ಔಷಧಗಳ ದರ ಶೇ.70ರವರೆಗೆ ಇಳಿಕೆ: ನವೆಂಬರ್ 9ರಿಂದ ಹೊಸ ದರ ಜಾರಿ

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸಾ ವೆಚ್ಚದ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರದ (NPPA) ಆದೇಶದ ಮೇರೆಗೆ ಪ್ರಮುಖ ಔಷಧ ತಯಾರಿಕಾ ಸಂಸ್ಥೆ ಟೊರೆಂಟ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್ ತನ್ನ ಪ್ರಮುಖ ಕ್ಯಾನ್ಸರ್ ಔಷಧಗಳ ಗರಿಷ್ಠ ಚಿಲ್ಲರೆ ಮಾರಾಟ ದರವನ್ನು (MRP) ಶೇ.70ರವರೆಗೆ ಕಡಿತಗೊಳಿಸಿದೆ. ಈ ಕುರಿತು ಸಂಸ್ಥೆಯು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಪರಿಷ್ಕೃತ ದರಗಳು ನವೆಂಬರ್ 9ರಿಂದ ಜಾರಿಗೆ ಬರಲಿವೆ. ಇದರ ಅನ್ವಯ, ಸಂಸ್ಥೆ ಉತ್ಪಾದಿಸುವ ಜೀವ […]
ಅ. 29 ರಂದು ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.ಈ ಸಂದರ್ಭದಲ್ಲಿ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು.ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಐವನ್ […]
ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ

ಕಟಪಾಡಿ: ಉಡುಪಿ ಜಿಲ್ಲೆಯ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಮೈದಾನದಲ್ಲಿ ಅಕ್ಟೋಬರ್ 23 ಮತ್ತು 24ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳ ಮಹಿಳಾ ತಂಡಗಳು ಭಾಗವಹಿಸಿ […]