ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ; ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ಏರ್ ಕೂಲರ್ ವಿತರಣೆ

ಉಡುಪಿ: ಕಳೆದ ನಾಲ್ಕು ವರ್ಷಗಳ ಹಿಂದೆ ಪಡುಬಿದ್ರೆಯಲ್ಲಿ ಪ್ರಾರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಯು ಸ್ಥಳೀಯವಾಗಿ ಉತ್ತಮ ವ್ಯವಹಾರದೊಂದಿಗೆ ಸಮಾಜದ ಪ್ರೀತಿ ಗಳಿಸಿರುವುದಲ್ಲದೆ ಇಂತಹ ಸಮಾಜಮುಖಿ ಕಾರ್ಯಕ್ರಮವು ಏರ್ಪಡಿಸಿರುವುದು ಅಭಿನಂದನೀಯ. ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಇನ್ನಷ್ಟು ಅಭಿವೃದ್ಧಿ ಆಗಲಿ ಎಂದು ಪಡುಬಿದ್ರಿ ಇಎಸ್ ಐ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಆದ ಡಾ| ಸಾತ್ವಿಕ್ ಪ್ರಮೋದ್ ರವರು ಶುಭಹಾರೈಸಿದರು. ಅವರು ಪಡುಬಿದ್ರಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸ್ಥಳೀಯ […]
ಉಡುಪಿ: ಮೀನುಗಾರಿಕೆಗೆ ತೆರಳಿದ್ದವರು ನಾಪತ್ತೆ

ಉಡುಪಿ, ಅ.29: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್ ಗೌಡ (53) ಎಂಬ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ:0820-2537999, ಪಿ.ಎಸ್.ಐ ನಂಬ್ರ:9480805447, ಉಡುಪಿ ವೃತ್ತ ನಿರೀಕ್ಷಕರ ನಂಬ್ರ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ […]
ನ. 1ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯು 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಜಾನಪದ ವಿದ್ವಾಂಸ, ಸಾಹಿತಿ ಹಾಗೂ ಸಂಶೋಧಕ ಬನ್ನಂಜೆ ಬಾಬು ಅಮೀನ್ ಅವರನ್ನು ಆಯ್ಕೆ ಮಾಡಿದೆ. ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನವೆಂಬರ್ 1ರ ಭಾನುವಾರ ಬೆಳಿಗ್ಗೆ 9.30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ತಿಳಿಸಿದರು. […]
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಒಂದು ಕಟ್ಟುಕತೆ! ಸಿಸಿಬಿ ತನಿಖೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಬಹುಚರ್ಚಿತ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಕಟ್ಟುಕಥೆಯಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ಸುಳ್ಳು ಆರೋಪಗಳಾಗಿವೆ ಎಂಬುದು ತನಿಖೆಯಿಂದ ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಸಿಸಿಬಿ ಪೊಲೀಸರು ಅಧಿಕೃತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಪ್ರತಿಯೊಬ್ಬ ವ್ಯಕ್ತಿಯನ್ನೂ ವಿಚಾರಣೆಗೊಳಪಡಿಸಿದ್ದಾರೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಚಾರಣೆ ನಡೆಸಿ, ಅವರ ಹೇಳಿಕೆಗಳು ಹಾಗೂ ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗಿದೆ. ಈ ಪರಿಶೀಲನೆಯಲ್ಲಿ […]
ಮಣಿಪಾಲದ MSDC ಯಲ್ಲಿ ಬ್ಯೂಟಿ ಕೋರ್ಸ್ಗಳಿಗೆ ದೀಪಾವಳಿ ಪ್ರಯುಕ್ತ ಭರ್ಜರಿ ಕೊಡುಗೆ

ಮಣಿಪಾಲ: ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಮಣಿಪಾಲದ MSDC (ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್) ಹಾಗೂ Orane International ವತಿಯಿಂದ ದೀಪಾವಳಿ ವಿಶೇಷ ಕೊಡುಗೆ ಘೋಷಿಸಲಾಗಿದೆ. ವಿವಿಧ ವೃತ್ತಿಪರ ಬ್ಯೂಟಿ ಕೋರ್ಸ್ಗಳ ಶುಲ್ಕದಲ್ಲಿ ಶೇ. 25ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, ವಿಶೇಷ ಕಾರ್ಯಾಗಾರಗಳು ಮತ್ತು ಉಡುಗೊರೆಗಳನ್ನೂ ಪಡೆಯುವ ಅವಕಾಶವಿದೆ. ಕೋರ್ಸ್ಗಳ ವಿಶೇಷ ಕೊಡುಗೆಗಳು ಸೌಂದರ್ಯ ಕ್ಷೇತ್ರದಲ್ಲಿ ಕೌಶಲ ಬೆಳೆಸಿಕೊಂಡು ಉದ್ಯೋಗ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವವರಿಗೆ ಈ ಕೋರ್ಸ್ಗಳು ಉಪಯುಕ್ತವಾಗಲಿವೆ. ಈ ವಿಶೇಷ ಕೊಡುಗೆ 2026ರ […]