ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ): ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) […]
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರುಗಳಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ಮುಂತಾದ ಸ್ಥಳಗಳಲ್ಲಿ […]
ದೀಪಾವಳಿಗೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ! ಸಚಿವರ ಖಡಕ್ ಎಚ್ಚರಿಕೆ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಪಟಾಕಿಗಳ ಸದ್ದು ಮತ್ತು ಬಣ್ಣದ ಚಿತ್ತಾರ ವಿಶೇಷ ಮೆರುಗು ನೀಡುತ್ತದೆ. ಆದರೆ ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಪಟಾಕಿ ಸಿಡಿಸುವುದಕ್ಕೆ ಸಮಯದ ಮಿತಿ ವಿಧಿಸಿದೆ. ದೀಪಾವಳಿ ಸಂದರ್ಭದಲ್ಲಿ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಹಸಿರು […]
ಉಡುಪಿ ಶಕ್ತಿ ಮೋಟರ್ಸ್ ವತಿಯಿಂದ ಹೀರೋ ಡೆಸ್ಟಿನಿ 125 Mileage ಕ್ಯಾಂಪೇನ್

ಉಡುಪಿ ಶಕ್ತಿ ಮೋಟರ್ಸ್ ವತಿಯಿಂದ ಹೀರೋ ಡೆಸ್ಟಿನಿ 125 Mileage ಕ್ಯಾಂಪೇನ್ General Manager ರಾಹುಲ್ ಮಿರ್ಜಕರ್ ಅವರ ಮಾರ್ಗದರ್ಶನದಲ್ಲಿ ಹೀರೋ ಡೆಸ್ಟಿನಿ 125 Mileage Campaign ಯಶಸ್ವಿಯಾಗಿ ನಡೆಯಿತು.ಫುಲ್ ಟ್ಯಾಂಕ್ ಪೆಟ್ರೋಲ್ನಿಂದ ಚಾಲನೆಗೊಂಡಿತು ಈ ಮೈಲೇಜ್ ಟೆಸ್ಟ್ನಲ್ಲಿ , ಗ್ರಾಹಕರು ತಮ್ಮ Hero Destini 125 ಸ್ಕೂಟರಿನ ಮೈಲೇಜನ್ನು ರಿಯಲ್-ವರ್ಲ್ಡ್ ರೈಡಿಂಗ್ ಕಂಡಿಷನ್ಸ್ನಲ್ಲಿ ಪರೀಕ್ಷಿಸಿದರು. ಈ ಕ್ಯಾಂಪೈನ್ನಲ್ಲಿ ಆವರೇಜ್ ಮೈಲೇಜ್ 55ರಿಂದ 60 kilometres per litre ದಾಖಲಾಗಿದ್ದು, highest ಮೈಲೇಜ್ ಬರೋಬ್ಬರಿ 62 ಕೀ […]
ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ; ದುರಂತದಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಸಾವು
ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಬೆಂಗಳೂರಿನ ಐವರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಸಾಲಂಕಿ ಕೂಡ ಸೇರಿದ್ದಾರೆ. ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್ಧಾಮ್ ಯಾತ್ರೆಗೆ ತೆರಳಿದ್ದ ಅರುಣ್ ಸಾಲಂಕಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಘಟನೆ ತೀವ್ರ ಆಘಾತ ಮೂಡಿಸಿದೆ. ಈ ದುರ್ಘಟನೆ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ […]